ETV Bharat / sports

ಕೋವಿಡ್​​ ಸೋಂಕು: ವೆಸ್ಟ್​ ಇಂಡೀಸ್​ ವಿರುದ್ಧದ ಟಿ-20 ಸರಣಿಯಿಂದ ರಾಹುಲ್​ ಔಟ್​!?

author img

By

Published : Jul 27, 2022, 3:16 PM IST

KL Rahul To Miss T20I Series Against West Indies
KL Rahul To Miss T20I Series Against West Indies

ಕೋವಿಡ್​ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವ ಕೆಎಲ್​ ರಾಹುಲ್​ ವೆಸ್ಟ್​ ಇಂಡೀಸ್ ವಿರುದ್ಧದ ಟಿ-20 ಸರಣಿಯಿಂದ ಹೊರಗುಳಿಯಲಿದ್ದಾರೆ.

ಮುಂಬೈ: ವೆಸ್ಟ್​ ಇಂಡೀಸ್​ ವಿರುದ್ಧದ ಐದು ಟಿ-20 ಪಂದ್ಯಗಳ ಸರಣಿಯಿಂದ ಆರಂಭಿಕ ಆಟಗಾರ ಕೆಎಲ್​ ರಾಹುಲ್ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಕೋವಿಡ್​ ಸೋಂಕಿಗೊಳಗಾಗಿ ಚೇತರಿಸಿಕೊಳ್ಳುತ್ತಿರುವ ಅವರು, ತಂಡದೊಂದಿಗೆ ವೆಸ್ಟ್​ ಇಂಡೀಸ್ ಪ್ರವಾಸ ಕೈಗೊಂಡಿಲ್ಲ. ಹೀಗಾಗಿ, ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಶಸ್ತ್ರಚಿಕಿತ್ಸೆಗೊಳಗಾಗಿ ಬೆಂಗಳೂರು ಎನ್​​ಸಿಎನಲ್ಲಿ ತರಬೇತಿ ಶಿಬಿರದಲ್ಲಿ ರಾಹುಲ್​ ಭಾಗಿಯಾಗಿದ್ದರು. ಈ ವೇಳೆ ಅವರಿಗೆ ಕೋವಿಡ್ ಕಾಣಿಸಿಕೊಂಡಿದೆ. ಹೀಗಾಗಿ, ವೆಸ್ಟ್​ ಇಂಡೀಸ್​ ವಿರುದ್ಧದ ಸರಣಿಯಿಂದ ಹೊರಗುಳಿಯಲಿದ್ದಾರೆಂದು ವರದಿಯಾಗಿದೆ. ಜುಲೈ 29ರಿಂದ ವೆಸ್ಟ್​ ಇಂಡೀಸ್​ ವಿರುದ್ಧ ಟಿ20 ಸರಣಿ ಆರಂಭಗೊಳ್ಳಲಿದ್ದು, ರೋಹಿತ್ ಶರ್ಮಾ ಬಳಗ ಕಣಕ್ಕಿಳಿಯಲಿದೆ.

ಇದನ್ನೂ ಓದಿರಿ: ಐಸಿಸಿ ಕ್ರಿಕೆಟ್​ ಸಮಿತಿಗೆ ವಿವಿಎಸ್​ ಲಕ್ಷ್ಮಣ್​ ಆಯ್ಕೆ

ಟಿ-20 ಪಂದ್ಯಗಳ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಆರ್ ಅಶ್ವಿನ್, ಕುಲ್ದೀಪ್ ಯಾದವ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ವೆಸ್ಟ್​ ಇಂಡೀಸ್​ ವಿರುದ್ಧದ ಟಿ-20 ಸರಣಿಯಲ್ಲಿ ರಾಹುಲ್​​ ಬದಲಿಗೆ ಇಶಾನ್​ ಕಿಶನ್​ ಅವಕಾಶ ಪಡೆದುಕೊಳ್ಳಲುವ ಸಾಧ್ಯತೆ ದಟ್ಟವಾಗಿದ್ದು, ನಾಯಕ ರೋಹಿತ್ ಶರ್ಮಾ ಜೊತೆ ಸೇರಿ ಇನ್ನಿಂಗ್ಸ್​ ಆರಂಭಿಸಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.