ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಮಾದರಿಗೆ ದಿಢೀರ್ ವಿದಾಯ ಘೋಷಿಸಿದ ಮೋಯಿನ್ ಅಲಿ

author img

By

Published : Sep 27, 2021, 2:14 PM IST

Updated : Sep 27, 2021, 3:38 PM IST

Moeen Ali is set to announce his retirement from Test Cricket

ಪ್ರಸ್ತುತ ಮಹೇಂದ್ರ ಸಿಂಗ್​ ಧೋನಿ ನೇತೃತ್ವದ ಚೆನ್ನೈ ಸೂಪರ್‌ ಕಿಂಗ್ಸ್‌ ಪರ ಇಂಡಿಯನ್‌ ಪ್ರೀಮಿಯರ್‌ ಲೀಗ್​ನಲ್ಲಿ ಆಡುತ್ತಿರುವ 34 ವರ್ಷದ ಮೋಯಿನ್ ಅಲಿ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇಂದು (ಸೆಪ್ಟೆಂಬರ್ 27) ಈ ಬಗ್ಗೆ ದಿಢೀರ್ ನಿರ್ಧಾರ​ ತೆಗೆದುಕೊಂಡಿದ್ದಾರೆ.

ಲಂಡನ್: ಇಂಗ್ಲೆಂಡ್ ಕ್ರಿಕೆಟ್ ತಂಡದ ಆಲ್ ರೌಂಡರ್ ಮೋಯಿನ್ ಅಲಿ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಮಾದರಿಗೆ ದಿಢೀರ್ ವಿದಾಯ ಘೋಷಿಸಿದ್ದಾರೆ. ಟೆಸ್ಟ್ ಕ್ರಿಕೆಟ್​ನಿಂದ ಅಲಿ ನಿವೃತ್ತಿ ಪಡೆದಿರುವ ಬಗ್ಗೆ ಇಂದು (ಸೋಮವಾರ 27) ಇಂಗ್ಲೆಂಡ್ ಕ್ರಿಕೆಟ್ ಮಂಡಳಿ (ECB News) ದೃಢಪಡಿಸಿದೆ.

ಮುಂಬರುವ ಐಸಿಸಿ ವಿಶ್ವ ಟಿ-20ಗೆ ಹೆಚ್ಚಿನ ಗಮನ ಕೊಡುವ ಸಲುವಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇಂಗ್ಲೆಂಡ್‌ ತಂಡದ ಮುಖ್ಯ ಕೋಚ್ ಕ್ರಿಸ್ ಸಿಲ್ವರ್‌ವುಡ್ ಮತ್ತು ನಾಯಕ ಜೋ ರೂಟ್​ಗೆ ಕಳೆದ ಒಂದು ವಾರದ ಹಿಂದೆಯೇ ಈ ವಿಷಯವನ್ನು ಅಲಿ ತಿಳಿಸಿದ್ದರು.

  • 6⃣4⃣ Test matches
    1⃣9⃣5⃣ wickets
    2⃣9⃣1⃣4⃣ runs
    Countless memories ❤️#ThankYouMo 👏

    — England Cricket (@englandcricket) September 27, 2021 " class="align-text-top noRightClick twitterSection" data=" ">

ಪ್ರಸ್ತುತ ಮಹೇಂದ್ರ ಸಿಂಗ್​ ಧೋನಿ ನೇತೃತ್ವದ ಚೆನ್ನೈ ಸೂಪರ್‌ ಕಿಂಗ್ಸ್‌ ಪರ ಇಂಡಿಯನ್‌ ಪ್ರೀಮಿಯರ್‌ ಲೀಗ್​ನಲ್ಲಿ ಆಡುತ್ತಿರುವ 34 ವರ್ಷದ ಮೋಯಿನ್ ಅಲಿ, 64 ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದಾರೆ. 2914 ರನ್​ ಗಳಿಸಿರುವ ಅವರು ಟೆಸ್ಟ್​ನಲ್ಲಿ 200 ವಿಕೆಟ್​ಗಳನ್ನು ಪಡೆದಿದ್ದಾರೆ.

2014ರಲ್ಲಿ ಇಂಗ್ಲೆಂಡ್‌ ಪರ ಅಂತಾರಾಷ್ಟ್ರೀಯ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಮೋಯಿನ್ ಅಲಿ, 5 ಟೆಸ್ಟ್​ನಲ್ಲಿ ಶತಕ ಸಿಡಿಸಿದ್ದಾರೆ. 195 ವಿಕೆಟ್‌ಗಳನ್ನು ಉರುಳಿಸಿ ತಂಡವನ್ನು ಸೋಲಿನ ಡವಡೆಯಿಂದ ಪಾರು ಮಾಡಿದ್ದಾರೆ. ಇತ್ತೀಚೆಗೆ ನಡೆದ ಭಾರತ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ರನ್​ ಮಿಷನ್​ ವಿರಾಟ್​ ಕೊಹ್ಲಿ ಅವರನ್ನು ಸೊನ್ನೆಗೆ ಔಟ್ ಮಾಡುವ ಮೂಲಕ ವಿಶಿಷ್ಠ ದಾಖಲೆ ಬರೆದಿದ್ದಾರೆ.

Last Updated :Sep 27, 2021, 3:38 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.