ETV Bharat / sports

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಿಂದ ಶ್ರೇಯಸ್ ಅಯ್ಯರ್ ಔಟ್​: ಐಪಿಎಲ್​ನಿಂದಲೂ ಹೊರಗುಳಿಯುವ ಸಾಧ್ಯತೆ

author img

By

Published : Mar 15, 2023, 10:52 PM IST

ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಅವರು ಬೆನ್ನುನೋವಿನಿಂದಾಗಿ ಶುಕ್ರವಾರದಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ

Shreyas Iyer ruled out of ODI series against Australia, confirms India's fielding coach T Dilip
ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಿಂದ ಶ್ರೇಯಸ್ ಅಯ್ಯರ್ ಔಟ್​:ಐಪಿಎಲ್​ನಿಂದಲೂ ಹೊರಗುಳಿಯುವ ಸಾಧ್ಯತೆ

ಮುಂಬೈ(ಮಹಾರಾಷ್ಟ್ರ): ಭಾರತದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಅವರು ಬೆನ್ನುನೋವಿನಿಂದಾಗಿ ಶುಕ್ರವಾರದಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ ಎಂದು ಭಾರತದ ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಬುಧವಾರ ಅಧಿಕೃತವಾಗಿ ಖಚಿತಪಡಿಸಿದ್ದಾರೆ. ಅಯ್ಯರ್ ಅವರನ್ನು ಏಕದಿನ ಪಂದ್ಯಗಳಿಂದ ಹೊರಗಿಡಲಾಗಿದೆ ಎಂದು ಮಾರ್ಚ್ 11 ರಂದು ಮೊದಲು ವರದಿಯಾಗಿತ್ತು.

ಈ ಸ್ಟೈಲಿಶ್ ಮುಂಬೈಕರ್ ಮುಂಬರುವ ಐಪಿಎಲ್‌ನಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಕಡಿಮೆ ಎಂದು ತಿಳಿದುಬಂದಿದೆ. ಅಯ್ಯರ್ IPL ನಲ್ಲಿ KKR ಅನ್ನು ಮುನ್ನಡೆಸುತ್ತಿದ್ದಾರೆ. ಅವರು ಪ್ರಸ್ತುತ ವೈದ್ಯಕೀಯ ನೆರವು ಪಡೆಯಲು NCAಗೆ ಮರಳಿದ್ದಾರೆ. ಆದರೆ, ಅವರಿಗೆ ಜಸ್ಪ್ರೀತ್ ಬುಮ್ರಾ ಮತ್ತು ಪ್ರಸಿದ್ಧ್ ಕೃಷ್ಣ ಅವರಂತೆ ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆಯೇ ಎಂಬ ಬಗ್ಗೆ ತಿಳಿದುಬಂದಿಲ್ಲ. "ಗಾಯಗಳು ಆಟದ ಒಂದು ಭಾಗವಾಗಿದೆ. ನಾವು ಅತ್ಯುತ್ತಮ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದ್ದೇವೆ ಮತ್ತು ಅವರು ಸುಸಜ್ಜಿತರಾಗಿದ್ದಾರೆ. ನಾವು NCA ಯೊಂದಿಗೆ ಸಮನ್ವಯದಲ್ಲಿದ್ದೇವೆ. ಶ್ರೇಯಸ್ ಈ ಸರಣಿಯಿಂದ ಹೊರಗುಳಿದಿದ್ದಾರೆ ಎಂದು ಭಾರತದ ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಅಹಮದಾಬಾದ್‌ನಲ್ಲಿ ನಡೆದಿದ್ದ ಟೆಸ್ಟ್‌ ಪಂದ್ಯದಲ್ಲಿ ಗಾಯಗೊಂಡಿದ್ದ ಅಯ್ಯರ್: ಬೆನ್ನುನೋವಿನಿಂದ ಚೇತರಿಸಿಕೊಂಡ ನಂತರ ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಟೆಸ್ಟ್ ಸರಣಿಯ ಸಮಯದಲ್ಲಿ ಭಾರತ ತಂಡಕ್ಕೆ ಮರಳಿದ್ದ ಬಲಗೈ ಬ್ಯಾಟ್ಸ್‌ಮನ್ ಅಯ್ಯರ್, ಅಹಮದಾಬಾದ್‌ನಲ್ಲಿ ನಡೆದಿದ್ದ ನಾಲ್ಕನೇ ಮತ್ತು ಅಂತಿಮ ಟೆಸ್ಟ್‌ ಪಂದ್ಯದಲ್ಲಿ ಗಾಯಗೊಂಡಿದ್ದರು ಎಂದು ವರದಿಯಾಗಿತ್ತು. ಇದರ ಪರಿಣಾಮವಾಗಿ, ಅಯ್ಯರ್ ಅವರನ್ನು ಬಿಸಿಸಿಐನ ವೈದ್ಯಕೀಯ ತಂಡವು ಸ್ಕ್ಯಾನಿಂಗೆ ಒಳಪಡಿಸಿತ್ತು. ಈ ಮೂಲಕ ಬ್ಯಾಟ್ಸ್‌ಮನ್ ಮೇಲೆ ನಿಗಾ ಇರಿಸಲಾಗಿದೆ ಎಂಬ ಸಂದೇಶವನ್ನು ರವಾನಿಸಿತ್ತು.

ಗಾಯದಿಂದಾಗಿ ಅಯ್ಯರ್ ಮಾರ್ಚ್ 31 ರಿಂದ ಪ್ರಾರಂಭವಾಗುವ ಇಂಡಿಯನ್ ಪ್ರೀಮಿಯರ್ ಲೀಗ್ 2023 ರ ಆವೃತ್ತಿಯ ಮೊದಲಾರ್ಧದ ಆಟದಿಂದ ಹೊರಗುಳಿಯುವ ನಿರೀಕ್ಷೆಯಿದೆ. ಅಯ್ಯರ್ ಎರಡು ಬಾರಿ ಪ್ರಶಸ್ತಿ ವಿಜೇತ ಕೋಲ್ಕತಾ ನೈಟ್ ರೈಡರ್ಸ್ ತಂಡದ ನಿಯೋಜಿತ ನಾಯಕನಾಗಿದ್ದು, ಸದ್ಯ ತಂಡ ಈಗ ಹೊಸ ನಾಯಕನ ಹುಡುಕಾಟದಲ್ಲಿದೆ.

ಇದನ್ನೂ ಓದಿ:ಟೆಸ್ಟ್​ ಚಾಂಪಿಯನ್​ಶಿಪ್​ ಕೊಹ್ಲಿ​ ಶತಕ ಭರವಸೆ: ಆಸಿಸ್​ ಮೇಲೆ "ವಿರಾಟ" ದಾಖಲೆ

ಶ್ರೇಯಸ್ ಅಯ್ಯರ್​ಗೆ ಪದೇ ಪದೆ ಗಾಯ: ಈ ಮೊದಲು ಕೂಡಾ ಶ್ರೇಯಸ್ ಅಯ್ಯರ್ ಗಾಯದ ಕಾರಣ ಐಪಿಎಲ್‌ನಿಂದ ಹೊರಗುಳಿದಿದ್ದರು. ಡೆಲ್ಲಿ ಕ್ಯಾಪಿಟಲ್ಸ್ ತಂಡದ ರಿಷಬ್ ಪಂತ್ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ನಾಯಕನಾಗಿ ಆ ತಂಡವನ್ನು ಮುನ್ನಡೆಸಿದ್ದರು. ಅಂದಿನಿಂದ ಅವರು ದೆಹಲಿ ತಂಡದ ಸಾಮಾನ್ಯ ನಾಯಕರಾಗಿ ಮುಂದುವರೆದಿದ್ದರು. ನಂತರ, ನ್ಯೂಜಿಲ್ಯಾಂಡ್​​ ವಿರುದ್ಧದ ODI ಸರಣಿಯ ಮೊದಲು ಅಯ್ಯರ್ ಗಾಯಗೊಂಡಿದ್ದರು. ಆಗ ರಜತ್ ಪಾಟಿದಾರ್ ಅವರಿಗೆ ತಂಡದಲ್ಲಿ ಅವಕಾಶ ನೀಡಲಾಗಿತ್ತು.

ಇದಾದ ನಂತರ ಅವರು ದೆಹಲಿಯಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ ಆಡಲು ಟೀಮ್ ಇಂಡಿಯಾವನ್ನು ಸೇರಿಕೊಂಡರು. ಆದರೆ, ಅವರು ಎರಡೂ ಇನ್ನಿಂಗ್ಸ್‌ಗಳಲ್ಲಿ ಕೇವಲ 4 ಮತ್ತು 12 ರನ್ ಮಾತ್ರ ಗಳಿಸಿದರು. ಬಳಿಕ ಇಂದೋರ್‌ನಲ್ಲಿ ನಡೆದ ಮೂರನೇ ಟೆಸ್ಟ್‌ನಲ್ಲಿ ಅವರು ಮೊದಲ ಇನ್ನಿಂಗ್ಸ್‌ನಲ್ಲಿ ಶೂನ್ಯಕ್ಕೆ ಔಟಾದರು. ಆದರೆ, ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 26 ರನ್ ಗಳಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.