ಟಿ-20 ವಿಶ್ವಕಪ್ ENG vs WI : ಟಾಸ್​​ ಗೆದ್ದು ಬೌಲಿಂಗ್​ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್​​

author img

By

Published : Oct 23, 2021, 7:33 PM IST

ಟಾಸ್​​ ಗೆದ್ದು ಬೌಲಿಂಗ್​ ಆಯ್ಕೆ ಮಾಡಿಕೊಂಡ ಇಯೊನ್ ಮಾರ್ಗನ್

ವೆಸ್ಟ್ ಇಂಡೀಸ್ ಮತ್ತು ಇಂಗ್ಲೆಂಡ್ ತಂಡಗಳು ಇದುವರೆಗೂ ಒಟ್ಟು 18 ಅಂತಾರಾಷ್ಟ್ರೀಯ ಟಿ-20 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ವೆಸ್ಟ್ ಇಂಡೀಸ್ 11 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಇಂಗ್ಲೆಂಡ್ ಕೇವಲ 7 ಪಂದ್ಯಗಳಲ್ಲಿ ಜಯ ಗಳಿಸಿದೆ.

ಅಬುಧಾಬಿ : ಟಿ-20 ವಿಶ್ವಕಪ್ 2021ರ ಸೂಪರ್ 12 ಸುತ್ತಿನ ಮೊದಲನೇ ಪಂದ್ಯದಲ್ಲಿ ಇಂದು ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಕಾಂಗರೋ ಪಡೆ 5ವಿಕೆಟ್​ಗಳ ಭರ್ಜರಿ ಜಯಗಳಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಇತ್ತ ಇಂದು ಎರಡನೇ ಪಂದ್ಯ ಇಂಗ್ಲೆಂಡ್​ ಮತ್ತು ವೆಸ್ಟ್​ ಇಂಡೀಸ್​ ಮದ್ಯೆ ನಡೆಯಲಿದೆ.

ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ ಈ ಪಂದ್ಯ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು ಸಂಜೆ 7.30ಕ್ಕೆ ಆರಂಭವಾಗಲಿದೆ. ಈ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ತಂಡಗಳೆರಡೂ ತಲಾ 2 ಅಭ್ಯಾಸ ಪಂದ್ಯಗಳಲ್ಲಿ ಆಡಿವೆ.

ಅಭ್ಯಾಸ ಪಂದ್ಯಗಳಲ್ಲಿ ಇಂಗ್ಲೆಂಡ್ ಬಲಿಷ್ಠ ತಂಡಗಳಾದ ಭಾರತ ಮತ್ತು ನ್ಯೂಜಿಲ್ಯಾಂಡ್​ ವಿರುದ್ಧ ಕಣಕ್ಕಿಳಿದಿತ್ತು. ನ್ಯೂಜಿಲ್ಯಾಂಡ್​ ವಿರುದ್ಧ ಇಂಗ್ಲೆಂಡ್ ಗೆಲುವು ಸಾಧಿಸಿದರೆ, ಟೀಮ್ ಇಂಡಿಯಾ ವಿರುದ್ಧ ಸೋಲು ಕಂಡಿತ್ತು. ಅತ್ತ ವೆಸ್ಟ್ ಇಂಡೀಸ್ ತಂಡ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ತಂಡಗಳ ವಿರುದ್ಧ ಅಭ್ಯಾಸ ಪಂದ್ಯಗಳಲ್ಲಿ ಕಣಕ್ಕಿಳಿದಿತ್ತು. ಹಾಲಿ ಟಿ-20 ವಿಶ್ವಕಪ್ ಚಾಂಪಿಯನ್ಸ್ ಈ ಎರಡೂ ಪಂದ್ಯಗಳಲ್ಲಿಯೂ ಸಹ ಸೋಲುವ ಮೂಲಕ ನಿರಾಸೆ ಅನುಭವಿಸಿತ್ತು.

ವೆಸ್ಟ್ ಇಂಡೀಸ್ ಮತ್ತು ಇಂಗ್ಲೆಂಡ್ ತಂಡಗಳು ಇದುವರೆಗೂ ಒಟ್ಟು 18 ಅಂತಾರಾಷ್ಟ್ರೀಯ ಟಿ-20 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ವೆಸ್ಟ್ ಇಂಡೀಸ್ 11 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಇಂಗ್ಲೆಂಡ್ ಕೇವಲ 7 ಪಂದ್ಯಗಳಲ್ಲಿ ಜಯ ಗಳಿಸಿದೆ.

ಇನ್ನು ಟಿ-20 ವಿಶ್ವಕಪ್ ಟೂರ್ನಿಗಳಲ್ಲಿ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ತಂಡಗಳು ಒಟ್ಟು 5 ಪಂದ್ಯಗಳಲ್ಲಿ ಸೆಣಸಾಟ ನಡೆಸಿದ್ದು, ಈ ಎಲ್ಲ ಪಂದ್ಯಗಳಲ್ಲಿಯೂ ಸಹ ವೆಸ್ಟ್ ಇಂಡೀಸ್ ತಂಡ ಜಯವನ್ನು ಸಾಧಿಸುವ ಮೂಲಕ ಅಜಯವಾಗಿದೆ.

ಇತ್ತ ಇಂಗ್ಲೆಂಡ್, ವೆಸ್ಟ್ ಇಂಡೀಸ್ ವಿರುದ್ಧದ ಟ-20 ವಿಶ್ವಕಪ್​ನಲ್ಲಿ ಇಲ್ಲಿಯವರೆಗೂ ಯಾವುದೇ ಪಂದ್ಯವನ್ನು ಗೆದ್ದಿಲ್ಲ. ಇದರಿಂದ ಕ್ರಿಕೆಟ ಜನಕರ ನಾಡಿಗೆ ಇದೊಂದು ಕೆಟ್ಟ್ ದಾಖಲೆಯಾಗಿದೆ. ಇಂದು ನಡೆಯಲಿರುವ ಈ ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವು ಸಾಧಿಸುವುದರ ಮೂಲಕ ಈ ಕೆಟ್ಟ ದಾಖಲೆಗೆ ಬ್ರೇಕ್ ಹಾಕುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ವಿ.ಕೀಪರ್), ಜೇಸನ್ ರಾಯ್, ಡೇವಿಡ್ ಮಲನ್, ಜೊನಾಥನ್ ಬೈರ್ಸ್ಟೋವ್, ಲಿವಿಂಗ್‌ಸ್ಟೋನ್, ಮೊಯೀನ್ ಅಲಿ, ಇಯೊನ್ ಮಾರ್ಗನ್(ನಾಯಕ), ಟೈಮಲ್ ಮಿಲ್ಸ್, ಕ್ರೀಸ್​ ವೋಕ್ಸ್​, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್.

ವೆಸ್ಟ್ ಇಂಡೀಸ್ ತಂಡ: ಕೀರನ್ ಪೊಲಾರ್ಡ್ (ನಾಯಕ), ನಿಕೋಲಸ್ ಪೂರನ್ (ಉಪ ನಾಯಕ), ಡ್ವೇಯ್ನ್ ಬ್ರಾವೊ, ಕ್ರಿಸ್ ಗೇಲ್, ಶಿಮ್ರಾನ್ ಹೆಟ್ಮಾಯರ್, ಎವಿನ್ ಲೂಯಿಸ್, ಓಬೆಡ್ ಮೆಕಾಯ್, ಲೆಂಡ್ಲ್ ಸಿಮನ್ಸ್, ರವಿ ರಾಂಪಾಲ್, ಆಂಡ್ರೆ ರಸೆಲ್, ಅಕಿಲ್ ಹೊಸೈನ್.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.