ETV Bharat / sports

ಟಿ20 ವಿಶ್ವಕಪ್: ನೆದರ್ಲ್ಯಾಂಡ್ಸ್ ವಿರುದ್ಧ ಟಾಸ್​ ಗೆದ್ದ ಭಾರತ ಬ್ಯಾಟಿಂಗ್​ ಆಯ್ಕೆ

author img

By

Published : Oct 27, 2022, 12:37 PM IST

ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಇಂದಿನ ಎರಡನೇ ಪಂದ್ಯವು ನಡೆಯುತ್ತಿದ್ದು, ಸಿಡ್ನಿ ಕ್ರಿಕೆಟ್​ ಮೈದಾನದಲ್ಲಿ ಭಾರತ ಹಾಗೂ ನೆದರ್ಲ್ಯಾಂಡ್ಸ್ ತಂಡಗಳು ಎದುರಾಗಿವೆ.

t20-world-cup-india-vs-netherlands-23rd-match-super-12-group-2
ಟಿ20 ವಿಶ್ವಕಪ್: ನೆದರ್ಲ್ಯಾಂಡ್ಸ್ ವಿರುದ್ಧ ಟಾಸ್​ ಗೆದ್ದ ಭಾರತ ಬ್ಯಾಟಿಂಗ್​ ಆಯ್ಕೆ

ಸಿಡ್ನಿ: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಸಿಡ್ನಿ ಕ್ರಿಕೆಟ್​ ಮೈದಾನದಲ್ಲಿ ನಡೆಯುತ್ತಿರುವ ಹಣಾಹಣಿಯಲ್ಲಿ ನೆದರ್ಲ್ಯಾಂಡ್ಸ್​ ವಿರುದ್ಧ ಟಾಸ್​ ಗೆದ್ದ ಭಾರತ ಬ್ಯಾಟಿಂಗ್​ ಆಯ್ದುಕೊಂಡಿದೆ.

ಇದಕ್ಕೂ ಮುನ್ನ ಇದೇ ಮೈದಾನದಲ್ಲಿ ನಡೆದ ಬಾಂಗ್ಲಾದೇಶ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಪಂದ್ಯದ ವೇಳೆ ಕೆಲಕಾಲ ಮಳೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಆಟವು ಕೊಂಚ ವಿಳಂಬವಾಗಿ ಮುಕ್ತಾಯವಾಯಿತು. ಹೀಗಾಗಿ ಭಾರತ ಹಾಗೂ ನೆದರ್ಲ್ಯಾಂಡ್ಸ್​ ಪಂದ್ಯವು ನಿಗದಿತ ಸಮಯಕ್ಕಿಂಂತ ತಡವಾಗಿ ಆರಂಭಗೊಂಡಿದೆ.

ರೋಹಿತ್​ ಶರ್ಮಾ ನೇತೃತ್ವದ ಟೀಂ ಇಂಡಿಯಾ ಚುಟುಕು ಕ್ರಿಕೆಟ್​​ ಅಭಿಯಾನದ ಮೊದಲ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕ್​ ವಿರುದ್ಧ ರೋಚಕ ಗೆಲುವು ಸಾಧಿಸಿದ್ದು, ಆತ್ಮ ವಿಶ್ವಾಸದಲ್ಲಿದೆ. ಇದೇ ತಂಡವನ್ನು ಇಂದಿನ ಪಂದ್ಯಕ್ಕೂ ಮುಂದುವರೆಸಲಾಗಿದೆ. ಇನ್ನೊಂದೆಡೆ ಬಾಂಗ್ಲಾದೇಶ ಜೊತೆಗಿನ ಪ್ರಥಮ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್​ ಸೋತಿದ್ದು, ಇಂದು ಭಾರತದ ಜೊತೆ ಸೆಣೆಸಾಡಲಿದೆ.

ಎರಡೂ ತಂಡಗಳು ಹೀಗಿದೆ - ಭಾರತದ 11ರ ಬಳಗ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿ.ಕೀ), ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್

ನೆದರ್ಲ್ಯಾಂಡ್ಸ್ 11ರ ಬಳಗ: ವಿಕ್ರಮಜಿತ್ ಸಿಂಗ್, ಮ್ಯಾಕ್ಸ್ ಓಡೌಡ್, ಬಾಸ್ ಡಿ ಲೀಡೆ, ಕಾಲಿನ್ ಅಕರ್ಮನ್, ಟಾಮ್ ಕೂಪರ್, ಸ್ಕಾಟ್ ಎಡ್ವರ್ಡ್ಸ್ (ನಾಯಕ & ವಿ.ಕೀ), ಟಿಮ್ ಪ್ರಿಂಗಲ್, ಲೋಗನ್ ವ್ಯಾನ್ ಬೀಕ್, ಶರೀಜ್ ಅಹ್ಮದ್, ಫ್ರೆಡ್ ಕ್ಲಾಸೆನ್, ಪಾಲ್ ವ್ಯಾನ್ ಮೀಕೆರೆನ್

ಇದನ್ನೂ ಓದಿ: ಟಿ20 ವಿಶ್ವಕಪ್: ರುಸ್ಸೋ ಅಬ್ಬರದ ಶತಕ, ಡಿ ಕಾಕ್ ಆರ್ಭಟ: ಬಾಂಗ್ಲಾಕ್ಕೆ 206 ರನ್​ ಗೆಲುವಿನ ಗುರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.