ETV Bharat / sports

ವಿಶ್ವ ಟೆಸ್ಟ್​ ಚಾಂಪಿಯನ್​​ಶಿಪ್​: 3ನೇ ಸ್ಥಾನಕ್ಕೆ ಲಗ್ಗೆ ಹಾಕಿದ ಪಾಕ್​

author img

By

Published : Jul 20, 2022, 6:02 PM IST

ಶ್ರೀಲಂಕಾ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ 4 ವಿಕೆಟ್​ಗಳ ಜಯ ದಾಖಲು ಮಾಡಿರುವ ಪಾಕಿಸ್ತಾನ ಐಸಿಸಿ ಟೆಸ್ಟ್​ ಚಾಂಪಿಯನ್​ಶಿಪ್​ ಶ್ರೇಯಾಂಕ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿ ಮುಂದುವರೆದಿದೆ.

World Test Championship Points Table
World Test Championship Points Table

ಗಾಲೆ(ಶ್ರೀಲಂಕಾ): ಆತಿಥೇಯ ಶ್ರೀಲಂಕಾ ವಿರುದ್ಧ ನಡೆದ ಮೊದಲ ಟೆಸ್ಟ್​ ಪಂದ್ಯದಲ್ಲಿ ಪಾಕಿಸ್ತಾನ ಗೆಲುವು ದಾಖಲು ಮಾಡಿದೆ. ಈ ಮೂಲಕ ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​​ಶಿಪ್​ ಪಾಯಿಂಟ್​ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿ ಮುಂದುವರೆದಿದೆ. ಈ ಮೂಲಕ ಟೆಸ್ಟ್​​​ ಪಾಯಿಂಟ್​ ಪಟ್ಟಿಯಲ್ಲಿ ಟೀಂ ಇಂಡಿಯಾ 4ನೇ ಸ್ಥಾನದಲ್ಲಿ ಮುಂದುವರೆದಿದೆ.

ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್ ಪಾಯಿಂಟ್ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾ 71.43 ಪಾಯಿಂಟ್​​ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದು, 70 ಪಾಯಿಂಟ್​​ಗಳೊಂದಿಗೆ ಆಸ್ಟ್ರೇಲಿಯಾ ಎರಡನೇ ಸ್ಥಾನದಲ್ಲಿದೆ. ಲಂಕಾ ವಿರುದ್ಧ ಮೊದಲ ಟೆಸ್ಟ್​ ಗೆದ್ದು ತನ್ನ ಪಾಯಿಂಟ್ ಏರಿಕೆ ಮಾಡಿಕೊಂಡ ಪಾಕ್​​ 3ನೇ ಸ್ಥಾನಕ್ಕೆ ಲಗ್ಗೆ ಹಾಕಿದೆ. ಹೀಗಾಗಿ, 52.08 ಪಾಯಿಂಟ್​​ನೊಂದಿಗೆ ಭಾರತ 4ನೇ ಸ್ಥಾನದಲ್ಲಿದೆ.

ಇದೀಗ ಶ್ರೀಲಂಕಾ-ಪಾಕಿಸ್ತಾನ ತಂಡಗಳ ನಡುವೆ ಎರಡನೇ ಟೆಸ್ಟ್​ ಪಂದ್ಯ ನಡೆಯಲಿದ್ದು, ಇದರಲ್ಲಿ ಪಾಕ್​ ಗೆಲುವು ದಾಖಲು ಮಾಡಿದ್ರೆ ಪಾಯಿಂಟ್ ಪಟ್ಟಿಯಲ್ಲಿ ಮತ್ತಷ್ಟು ಚೇತರಿಕೆ ಕಾಣಲಿದೆ. ಶ್ರೀಲಂಕಾದ ಗಾಲೆ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್​ ಪಂದ್ಯದಲ್ಲಿ ಆತಿಥೇಯ ಸಿಂಹಳೀಯರ ತಂಡ ಮೊದಲ ಇನ್ನಿಂಗ್ಸ್​​ನಲ್ಲಿ 222ರನ್​ ಹಾಗೂ ಎರಡನೇ 337ರನ್​ಗಳಿಕೆ ಮಾಡಿತ್ತು. ಇದಕ್ಕೆ ಪ್ರತ್ಯುತ್ತರವಾಗಿ ಪಾಕ್​ ತಂಡ ಮೊದಲ ಇನ್ನಿಂಗ್ಸ್​​ನಲ್ಲಿ 218ರನ್​ಗಳಿಗೆ ಆಲೌಟ್​ ಆಯಿತು. ಆದರೆ, ಎರಡನೇ ಇನ್ನಿಂಗ್ಸ್​​ನಲ್ಲಿ 6 ವಿಕೆಟ್​ನಷ್ಟಕ್ಕೆ 344ರನ್​​ಗಳಿಕೆ ಮಾಡಿ ಗೆಲುವು ದಾಖಲು ಮಾಡಿದೆ.

ಇದನ್ನೂ ಓದಿರಿ: ZIM vs IND: ಆರು ವರ್ಷಗಳ ಬಳಿಕ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿರುವ ಟೀಂ ಇಂಡಿಯಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.