ETV Bharat / sports

ಇದುವೇ ಈಗ ದೊಡ್ಡ ಸುದ್ದಿ....ಆರ್​ಸಿಬಿ ಕ್ಯಾಂಪ್​ ಸೇರಿದ ಕಿಂಗ್​ ಕೊಹ್ಲಿ!

author img

By

Published : Mar 22, 2022, 1:01 PM IST

Virat Kohli
Virat Kohli

ಆರ್​ಸಿಬಿ ತನ್ನ ಟ್ವಿಟರ್ ಖಾತೆಯಲ್ಲಿ ವಿರಾಟ್ ಕೊಹ್ಲಿ ತಂಡ ಸೇರಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ‘ಕಿಂಗ್​ ಕೊಹ್ಲಿಯ ಆಗಮನವಾಗಿದೆ. ಇದುವೇ ಈಗ ದೊಡ್ಡ ಸುದ್ದಿ' ಎಂದು ಆರ್​ಸಿಬಿ ಅಧಿಕೃತವಾಗಿ ತನ್ನ ಟ್ವಿಟರ್ ಖಾತೆಯಲ್ಲಿ ಬಹಿರಂಗ ಪಡಿಸಿದೆ.

ಮುಂಬೈ (ಮಹಾರಾಷ್ಟ್ರ): 2022ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆವೃತ್ತಿಗೆ ಮುನ್ನವೇ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು ಸೇರಿಕೊಂಡಿದ್ದಾರೆ. ಭಾರತದ ಕ್ರಿಕೆಟ್​ ತಂಡದ ಮಾಜಿ ನಾಯಕರಾದ ಕೊಹ್ಲಿ ಬಗ್ಗೆ ಆರ್‌ಸಿಬಿ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿತ್ತು.

ಇದರ ನಡುವಯೇ ಆರ್​ಸಿಬಿ ತನ್ನ ಟ್ವಿಟರ್ ಖಾತೆಯಲ್ಲಿ ವಿರಾಟ್ ಕೊಹ್ಲಿ ತಂಡ ಸೇರಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ‘ಕಿಂಗ್​ ಕೊಹ್ಲಿಯ ಆಗಮನವಾಗಿದೆ. ಇದುವೇ ಈಗ ದೊಡ್ಡ ಸುದ್ದಿ' ಎಂದು ಆರ್​ಸಿಬಿ ಅಧಿಕೃತವಾಗಿ ತನ್ನ ಟ್ವಿಟರ್ ಖಾತೆಯಲ್ಲಿ ಬಹಿರಂಗ ಪಡಿಸಿದೆ.

ಕೊಹ್ಲಿ ಬಹುಶಃ ಎರಡು ದಿನಗಳ ಕ್ವಾರಂಟೈನ್ ಅನುಭವಿಸಿ ಮುಂಬೈನಲ್ಲಿರುವ ಆರ್​ಸಿಬಿ ಕ್ಯಾಂಪ್ ಸೇರಿಕೊಳ್ಳಲಿದ್ದಾರೆ. ನಾಯಕತ್ವದಿಂದ ಕೆಳಗಿಳಿದಿರುವ ಕೊಹ್ಲಿ ಒಬ್ಬ ಆಟಗಾರರಾಗಿ ಈ ಬಾರಿ ಕಣಕ್ಕಿಳಿಯಲಿದ್ದಾರೆ. ಹೀಗಾಗಿ ಯಾವ ರೀತಿ ಪ್ರದರ್ಶನ ತೋರುತ್ತಾರೆ ಎಂಬ ಬಗ್ಗೆಯೂ ಕುತೂಹಲ ಹೆಚ್ಚುವಂತೆ ಮಾಡಿದೆ.

2008ರಿಂದಲೂ ಕೊಹ್ಲಿ ಆರ್​ಸಿಬಿ ಕ್ಯಾಂಪ್​ನಲ್ಲಿ ಇದ್ದು, ಎಲ್ಲ ಎಂಟು ಸೀಸನ್‌ಗಳಲ್ಲೂ ಅವರೇ ನಾಯಕರಾಗಿ ತಂಡವನ್ನು ಮುನ್ನಡೆಸಿದ್ದರು. ಮೊದಲ ಸೀಸನ್​ನಿಂದಲೂ ಪ್ರಶಸ್ತಿಗಾಗಿ ಹೋರಾಡುತ್ತಿರುವ ಆರ್​ಸಿಬಿ ಈ ಬಾರಿಯಾದರೂ ನೂತನ ನಾಯಕ, ನೂತನ ತಂಡದೊಂದಿಗೆ ಕಪ್ ಗೆಲ್ಲುವ ವಿಶ್ವಾಸದಲ್ಲಿದೆ. ಐಪಿಎಲ್‌ನಲ್ಲಿ ಕೊಹ್ಲಿ ಒಟ್ಟಾರೆ 207 ಪಂದ್ಯಗಳನ್ನು ಆಡಿದ್ದು, 37.39 ಸರಾಸರಿಯಲ್ಲಿ 6,283 ರನ್​ಗಳಿಸಿದ್ದಾರೆ. 129.54 ಸ್ಟ್ರೈಕ್​ ರೇಟ್​ನೊಂದಿಗೆ ಅತ್ಯಧಿಕ 113 ರನ್​ಗಳನ್ನು ಬಾರಿಸಿದ್ದಾರೆ.

ಇದನ್ನೂ ಓದಿ: ಫುಟ್ಬಾಲ್​ ಪಂದ್ಯದ ವೇಳೆ ಮೈದಾನಕ್ಕೆ ಗ್ರೆನೇಡ್​​ ಎಸೆದ ಅರ್ಜೆಂಟೀನಾ ಅಭಿಮಾನಿಗಳು!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.