ಕಾಂಗ್ರೆಸ್ ಮುಖಂಡೆ ವೀಣಾ ಕಾಶಪ್ಪನವರ ಕಾರು ಅಪಘಾತ, ವಿಜಯಪುರದಲ್ಲಿ ಘಟನೆ
Published: Nov 20, 2023, 11:00 PM


ಕಾಂಗ್ರೆಸ್ ಮುಖಂಡೆ ವೀಣಾ ಕಾಶಪ್ಪನವರ ಕಾರು ಅಪಘಾತ, ವಿಜಯಪುರದಲ್ಲಿ ಘಟನೆ
Published: Nov 20, 2023, 11:00 PM

Veena Kashappanavar car accident: ಕಾಂಗ್ರೆಸ್ ಮುಖಂಡೆ ವೀಣಾ ಕಾಶಪ್ಪನವರು ಇದ್ದ ಕಾರು ವಿಜಯಪುರದಲ್ಲಿ ಅಪಘಾತಕ್ಕೀಡಾಗಿದೆ.
ಬಾಗಲಕೋಟೆ: ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ಮುಖಂಡೆ ವೀಣಾ ಕಾಶಪ್ಪನವರ ಕಾರು ಅಪಘಾತವಾಗಿದ್ದು, ಅಪಾಯದಿಂದ ಅವರು ಪಾರಾಗಿದ್ದಾರೆ. ವಿಜಯಪುರ ನಗರದ ಸಿಂದಗಿ ಬೈಪಾಸ್ ಬಳಿ ರಸ್ತೆಯಲ್ಲಿ ಸೋಮವಾರ ಕಾರು ಅಪಘಾತ ಸಂಭವಿಸಿದೆ.
ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ವೀಣಾ ಕಾಶಪ್ಪನವರ ಅವರಿದ್ದ ಕಾರು ಎದುರುಗಡೆ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಎದುರುಗಡೆ ಕಾರಿನಲ್ಲಿದ್ದ ಪ್ರಯಾಣಿಕರು ಸಹ ಗಾಯಗೊಂಡಿದ್ದಾರೆ. ವೀಣಾ ಕಾಶಪ್ಪನವರಿಗೆ ಚಿಕ್ಕಪುಟ್ಟ ಗಾಯವಾಗಿದ್ದು, ವಿಜಯಪುರ ಸ್ಥಳೀಯ ಆಸ್ಪತ್ರೆಗೆ ವೀಣಾರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರಿನಲ್ಲಿದ್ದ ಓರ್ವ ಹಾಗೂ ಬೈಕ್ ಸವಾರನಿಗೆ ಗಾಯಗಳಾಗಿದೆ. ವಿಜಯಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನ. 23 ರಂದು ಬಾಗಲಕೋಟೆ ನಗರದಲ್ಲಿ ವೀಣಾ ಕಾಶಪ್ಪನವರ ಪೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಐಎಎಸ್, ಕೆಎಎಸ್ ತರಬೇತಿ ಶಿಬಿರದ ಚಾಲನೆಗೆ ಮುಖ್ಯಮಂತ್ರಿ ಆಗಮಿಸಲಿದ್ದಾರೆ. ಈ ಹಿನ್ನೆಲೆ ವಿಜಯಪುರಕ್ಕೆ ಆಗಮಿಸಿರುವ ಸಿಎಂ ಸಿದ್ದರಾಮಯ್ಯಗೆ ಆಮಂತ್ರಣ ಪತ್ರ ನೀಡಿ, ವಾಪಸ್ ಬರುತ್ತಿದ್ದಾಗ ಈ ಘಟನೆ ನಡೆದಿದೆ.
'ವೀಣಾ ಕಾಶಪ್ಪನವರ ಅವರ ಕಾರು ಅಪಘಾತದಲ್ಲಿ ಅವರಿಗೆ ಕೈಗೆ ಸ್ವಲ್ಪ ಒಳ ಪೆಟ್ಟಾಗಿದೆ. ಸ್ಕ್ಯಾನಿಂಗ್ ಮಾಡಿದ್ದಾರೆ. ವೀಣಾ ಅವರು ಕ್ಷೇಮದಿಂದ ಇದ್ದಾರೆ. ಯಾವುದೇ ಭಯಪಡುವ ಅಗತ್ಯವಿಲ್ಲ. ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಚ್ ಮಾಡ್ತಾರೆ' ಎಂದು ವೀಣಾ ಅವರ ಪತಿ, ಶಾಸಕ ವಿಜಯಾನಂದ ಎಸ್ ಕಾಶಪ್ಪನವರ ತಿಳಿಸಿದ್ದಾರೆ.
