ETV Bharat / state

ಸಿದ್ದರಾಮಯ್ಯಗೆ ಹೆಲಿಕಾಪ್ಟರ್ ಗಿಫ್ಟ್​ ನೀಡಲು ಮುಂದಾದ ಅಭಿಮಾನಿಗಳು.. ಬಾದಾಮಿಯಿಂದಲೇ ಸ್ಪರ್ಧಿಸುವಂತೆ ದುಂಬಾಲು

author img

By

Published : Dec 24, 2022, 4:06 PM IST

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಾಯ - ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿದರೆ ಸಿದ್ದರಾಮಯ್ಯ ಅವರಿಗೆ ಹೆಲಿಕಾಪ್ಟರ್​ ಉಡುಗೊರೆ.

congress-workes-offered-helicopter-gift-to-former-cm-siddaramaih
ಸಿದ್ದರಾಮಯ್ಯನವರಿಗೆ ಹೆಲಿಕಾಪ್ಟರ್ ನೀಡಲು ಮುಂದಾದ ಕಾರ್ಯಕರ್ತರು

ಸಿದ್ದರಾಮಯ್ಯನವರಿಗೆ ಹೆಲಿಕಾಪ್ಟರ್ ನೀಡಲು ಮುಂದಾದ ಕಾರ್ಯಕರ್ತರು

ಬಾಗಲಕೋಟೆ : ಹಾಲಿ ಬಾದಾಮಿ ಕ್ಷೇತ್ರದ ಶಾಸಕರಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಕ್ಷೇತ್ರ ಬದಲಾವಣೆಗಾಗಿ ಯೋಚಿಸುತ್ತಿದ್ದಾರೆ. ಆದರೆ ಬಾದಾಮಿ ಕ್ಷೇತ್ರದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಇಲ್ಲಿಂದಲೇ ಸ್ಪರ್ಧೆ ಮಾಡುವಂತೆ ಒತ್ತಾಯಿಸುತ್ತಿದ್ದು, ಇದಕ್ಕಾಗಿ ಸಿದ್ದರಾಮಯ್ಯ ಅವರಿಗೆ ಹೆಲಿಕಾಪ್ಟರ್​ ಉಡುಗೊರೆ ನೀಡಲು ಸಿದ್ಧರಾಗಿದ್ದಾರೆ.

ಸಿದ್ದರಾಮಯ್ಯನವರು ವರುಣಾ ಅಥವಾ ಕೋಲಾರದಲ್ಲಿ ಸ್ಪರ್ಧೆ ಮಾಡುವುದು ಖಚಿತ ಆಗುತ್ತಿದ್ದಂತೆ, ಬಾದಾಮಿಯಿಂದಲೇ ಸ್ಪರ್ಧಿಸುವಂತೆ ಒತ್ತಡ ಹೆಚ್ಚಾಗುತ್ತದೆ. ಬಾದಾಮಿಯು ಮೈಸೂರು ಹಾಗೂ ಬೆಂಗಳೂರನಿಂದ ದೂರ ಆಗುತ್ತಿದೆ. ಬಾದಾಮಿಗೆ ಬರುವುದಕ್ಕೆ ಆಗುವುದಿಲ್ಲ. ಕ್ಷೇತ್ರದ ಜನತೆಯ ಸಮಸ್ಯೆ ಆಲಿಸಲು ಆಗುವುದಿಲ್ಲ ಎಂದು ಇತ್ತೀಚಿಗೆ ಸಿದ್ದರಾಮಯ್ಯನವರು ಹೇಳುವ ಮೂಲಕ ಬಾದಾಮಿಯಿಂದ ಸ್ಪರ್ಧೆ ಮಾಡಲು ಸಾಧ್ಯವಾಗುವುದಿಲ್ಲ ಎಂದು ಪರೋಕ್ಷವಾಗಿ ತಿಳಿಸಿದ್ದರು.

ಅಲ್ಲದೆ ಸಿದ್ದರಾಮಯ್ಯನವರು ಬಾದಾಮಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಮಾಜಿ ಶಾಸಕ ಬಿ ಬಿ ಚಿಮ್ಮನಕಟ್ಟಿ ಅವರು ಇಲ್ಲಿಂದ ಸ್ಪರ್ಧೆ ಮಾಡದಂತೆ ಹೇಳಿದ್ದರು. ನಮ್ಮ ಕ್ಷೇತ್ರ ನಮಗೆ ಬಿಟ್ಟು ಕೊಡಿ ಎಂದು ಹೇಳುವ ಮೂಲಕ ನೇರವಾಗಿ ವಿರೋಧ ವ್ಯಕ್ತಪಡಿಸಿದ್ದರು. ಈ ಕಾರಣದಿಂದ ಸಿದ್ದರಾಮಯ್ಯನವರು ಬಾದಾಮಿಯನ್ನು ಬಿಡಲು ಸಿದ್ಧರಾಗಿದ್ದರು. ಇದರಿಂದಾಗಿ ಸಿದ್ದರಾಮಯ್ಯ ಅವರ ಅಭಿಮಾನಿಗಳಿಗೆ ಹಾಗೂ ಕೆಲ ಕಾರ್ಯಕರ್ತರಿಗೆ ಅಸಮಾಧಾನವಾಗಿದೆ. ಹಾಗಾಗಿ ಮತ್ತೆ ಇಲ್ಲಿಂದಲೇ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ.

ಸಿದ್ದರಾಮಯ್ಯ ಅವರು ಬಾದಾಮಿಯಿಂದ ಸ್ಪರ್ಧಿಸಿದರೆ ಅವರ ಸಂಚಾರದ ಅನುಕೂಲಕ್ಕಾಗಿ ಕ್ಷೇತ್ರದ ಕಾರ್ಯಕರ್ತರು ಸೇರಿಕೊಂಡು ಹೆಲಿಕಾಪ್ಟರ್ ಕೊಡುತ್ತೇವೆ. ಬಾದಾಮಿಯಿಂದಲೇ ಸಿದ್ದರಾಮಯ್ಯ ಸ್ಪರ್ಧೆ ಮಾಡಿ, ಮತ್ತೊಮ್ಮೆ ಸಿಎಂ ಆಗಲಿ ಎಂದು ನಾನು ಅಯ್ಯಪ್ಪ ಸ್ವಾಮಿಯ ಮಾಲೆ ಧರಿಸಿ ಹರಕೆ ಕಟ್ಟಿಕೊಂಡಿದ್ದೇನೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆದರೆ ಇನ್ನೂ ಹೆಚ್ಚಿನ ಅಭಿವೃದ್ಧಿ ಆಗುತ್ತದೆ ಎಂದು ಯೂತ್​ ಕಾಂಗ್ರೆಸ್​ನ ಬಾದಾಮಿಯ ಉಪಾಧ್ಯಕ್ಷ ಹನಮಂತಗೌಡ ಹೇಳಿದ್ದಾರೆ.

ಇದನ್ನೂ ಓದಿ : ಬಿಜೆಪಿಯವರಿಗೆ ಅಧಿಕಾರ, ದುಡ್ಡು ಮುಖ್ಯ: ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.