ETV Bharat / state

ಅಂಗಡಿ ತೆರೆಯಬೇಕೇ? ಹಾಗಿದ್ದರೆ ಲಸಿಕೆ ಹಾಕಿಸಿಕೊಳ್ಳಿ: ಬಾಗಲಕೋಟೆಯಲ್ಲಿ ಹೊಸ ರೂಲ್ಸ್

author img

By

Published : Jun 10, 2021, 7:25 AM IST

DC  K Rajendra
ಡಾ.ಕೆ.ರಾಜೇಂದ್ರ

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಕಡಿಮೆಯಾಗುತ್ತಿದ್ದಂತೆ ಹಂತಹಂತವಾಗಿ ಅನ್​ಲಾಕ್ (Unlock) ಪ್ರಕ್ರಿಯೆ ಆರಂಭವಾಗಲಿದೆ. ಈ ನಿಟ್ಟಿನಲ್ಲಿ ಬಾಗಲಕೋಟೆ ಜಿಲ್ಲೆಯಲ್ಲೂ ಈ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಇಲ್ಲಿ ಜಿಲ್ಲಾಧಿಕಾರಿಯೇ ಕೆಲ ಅಂಗಡಿಗಳ ತೆರವಿಗೆ ಅವಕಾಶ ನೀಡಿದ್ದಾರೆ. ಆದ್ರೆ ಅಂಗಡಿ ತೆರೆಯುವವರು ಕಡ್ಡಾಯವಾಗಿ ಕೊರೊನಾ ಲಸಿಕೆ ಹಾಕಿಸಿಕೊಂಡಿರಬೇಕು ಎಂದು ಖಡಕ್ ಆದೇಶ ಹೊರಡಿಸಿದ್ದಾರೆ.

ಬಾಗಲಕೋಟೆ: ರಾಜ್ಯದಲ್ಲಿ ಕೋವಿಡ್‌-19 ಸೋಂಕು ಕಡಿಮೆಯಾಗುತ್ತಿದ್ದು, ಸರ್ಕಾರ ಲಾಕ್​ಡೌನ್​ ತೆರವಿಗೆ ಗಂಭೀರವಾಗಿ ಚಿಂತಿಸುತ್ತಿದೆ. ಈ ನಡುವೆ ಬಾಗಲಕೋಟೆ ಜಿಲ್ಲೆಯಲ್ಲೂ ಕೊರೊನಾ ಅನ್ಲಾಕ್​ ಪ್ರಕ್ರಿಯೆಗೆ ಕ್ಷಣಗಣನೆ ಆರಂಭವಾಗಿದೆ. ಈ ಸಮಯದಲ್ಲಿ ವಿನೂತನ ಪ್ರಯೋಗವೊಂದಕ್ಕೆ ಜಿಲ್ಲಾಡಳಿತ ಕೈಹಾಕಿದ್ದು, ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಹೊಸ ಕೋವಿಡ್‌ ರೂಲ್ಸ್ ಬಗ್ಗೆ ಡಿಸಿ ಮಾತು

ಜಿಲ್ಲಾಡಳಿತ ಕಚೇರಿಯಲ್ಲಿ ಮಾತನಾಡಿದ ಡಿಸಿ, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆ ಆಗಿದೆ. ಜೂನ್ 14 ರ ಬಳಿಕ ಸರ್ಕಾರ ಆದೇಶದಂತೆ ಹಂತಹಂತವಾಗಿ ಲಾಕ್ ಡೌನ್ ಓಪನ್ ಆಗಲಿದೆ. ಮೊದಲ ಹಂತವಾಗಿ ಹೇರ್‌ ಕಟಿಂಗ್ ಸಲೂನ್, ಬಾರ್, ಬಟ್ಟೆ ಅಂಗಡಿ ಸೇರಿದಂತೆ ಅಗತ್ಯವಿರುವ ಅಂಗಡಿಗಳಿಗೆ ತೆರೆಯಲು ಅವಕಾಶ ನೀಡುವ ಸಾಧ್ಯತೆ ಇದೆ. ಈ ಸಮಯದಲ್ಲಿ ಲಸಿಕೆ ಪಡೆದವರಿಗೆ ಮಾತ್ರ ಅಂಗಡಿ ಬಾಗಿಲು ತೆರೆಯಲು ಜಿಲ್ಲಾಡಳಿತ ಅವಕಾಶ ನೀಡುತ್ತದೆ‌ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಉಮೇಶ ಕತ್ತಿ ಹಾಗೂ ಶಾಸಕರ ಜೊತೆಗೆ ಚರ್ಚೆ ಮಾಡಿ, ಇಂತಹ ವಿನೂತನ ಪ್ರಯೋಗ ಮಾಡಲು ಜಿಲ್ಲಾಡಳಿತ ಸಜ್ಜಾಗಿದೆ. ಲಸಿಕೆ ಹಾಕಿಸಿಕೊಂಡರೆ ಸೋಂಕು ಹರಡುವುದಿಲ್ಲ.ಇದರಿಂದ ಕಟಿಂಗ್ ಸಲೂನ್ ಹಾಗೂ ಬಾರ್ ಅಂಗಡಿಗಳಲ್ಲಿ ಹೆಚ್ಚಾಗಿ ಜನ ಬರುವುದರಿಂದ ಕೊರೊನಾ ರೋಗ ತಡೆಯಲು ಈ‌ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.

ಈಗಾಗಲೇ ಗ್ಯಾಸ್ ವಿತರಕರಿಗೆ, ಆಶಾ ಕಾರ್ಯಕರ್ತರಿಗೆ ಸೇರಿದಂತೆ ಜನರಿಗೆ ಹತ್ತಿರ ಆಗುವ ಸಿಬ್ಬಂದಿಗೆ ಲಸಿಕೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಲಾಕ್ ಡೌನ್ ಓಪನ್ ಆದ ಬಳಿಕ ಇದೇ ನಿರ್ಧಾರವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಲಾಗುವುದು, ಲಸಿಕೆ ಹಾಕಿಸಿಕೊಂಡಿರುವ ಬಗ್ಗೆ ಪ್ರಮಾಣ‌ ಪತ್ರ ಇಲ್ಲವೇ ಮೆಸೇಜ್ ತೋರಿಸಿದರೆ ಮಾತ್ರ ಅಂಗಡಿ ತೆರೆಯಲು ಅವಕಾಶ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ:ಹಿಂದೂ ದೇವಾಲಯಗಳ ಹಣ ಅನ್ಯಧರ್ಮೀಯ ಸಂಸ್ಥೆಗಳಿಗೆ ನೀಡುವುದಿಲ್ಲ: ಸಚಿವ ಕೋಟ ಶ್ರೀನಿವಾಸ್ ಪೂಜಾರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.