ETV Bharat / state

ರೈತರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡುವುದು ಮೋದಿಜಿ ಮುಖ್ಯ ಉದ್ಧೇಶ; ಗದ್ದಿಗೌಡರ

author img

By

Published : Dec 25, 2020, 11:58 PM IST

ಪ್ರಧಾನಿ ನರೇಂದ್ರ ಮೋದಿಯವರು ದೇಶದ ರೈತರ ಖಾತೆಗಳಿಗೆ ಶುಕ್ರವಾರ ನೇರವಾಗಿ 2000 ರೂ.ಗಳನ್ನು ಜಮೆ ಮಾಡಿಸಿದ್ದನ್ನು ನೋಡಿದರೆ ರೈತರ ಬಗ್ಗೆ ಎಷ್ಟು ಕಾಳಜಿಯನ್ನು ಹೊಂದಿದ್ದಾರೆ ಎಂಬುದನ್ನು ತೋರಿಸುತ್ತದೆ.

Ex PM Atal Bihari Vajpayee Birthday Celebration in Bagalakote
ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನಾಚರಣೆ

ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿಯವರು ದೇಶದ ಅನ್ನದಾತರ ಬಗ್ಗೆ ಸದಾ ಚಿಂತನೆ ಮಾಡುತ್ತಿರುತ್ತಾರೆ. ರೈತರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂಬ ಉದ್ದೇಶವನ್ನು ಇಟ್ಟುಕೊಂಡಿರುವ ಅವರು ಬೇರೆ ಬೇರೆ ಬದಲಾವಣೆಯನ್ನು ಮಾಡುವ ಮೂಲಕ ಕೃಷಿ ಉದ್ಯೋಗದಲ್ಲಿ ಸಾಕಷ್ಟು ಅನುಕೂಲವನ್ನು ರೈತರಿಗೆ ಮಾಡಿಕೊಟ್ಟಿದ್ದಾರೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.

ನಗರದ ಬಿವಿವಿ ಸಂಘದ ಮಿನಿ ಸಭಾಭವನದಲ್ಲಿ ಶುಕ್ರವಾರ ಬಿಜೆಪಿ ವತಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಸುಶಾಸನ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರೈತರ ಖಾತೆಗಳಿಗೆ ಶುಕ್ರವಾರ ನೇರವಾಗಿ 2000 ರೂ.ಗಳನ್ನು ಜಮೆ ಮಾಡಿಸಿದ್ದನ್ನು ನೋಡಿದರೆ ರೈತರ ಬಗ್ಗೆ ಎಷ್ಟು ಕಾಳಜಿಯನ್ನು ಹೊಂದಿದ್ದಾರೆ ಎಂಬುದನ್ನು ತೋರಿಸುತ್ತದೆ. ರೈತರು ಬೆಳೆದಂತಹ ಬೆಳೆಗೆ ಉತ್ತಮ ಬೆಲೆ ಸಿಗಬೇಕು ಎಂಬ ಉದ್ದೇಶವನ್ನು ಇಟ್ಟುಕೊಂಡು ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿದ್ದಾರೆ ಎಂದು ಹೇಳಿದರು.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಪಕ್ಷದ ಸಂಘಟನೆ ಮಾಡಿದ ಕಾರ್ಯವನ್ನು ಇದೇ ಸಂದರ್ಭದಲ್ಲಿ ಸಂಸದರು ಶ್ಲಾಘಿಸಿದರು.

ಶಾಸಕರು ಹಾಗೂ ಬಿಟಿಡಿಎ ಅಧ್ಯಕ್ಷರಾದ ವೀರಣ್ಣ ಚರಂತಿಮಠ ಮಾತನಾಡಿ, ಅಜಾತ ಶತ್ರುವಾಗಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಬಿಜೆಪಿಯನ್ನು ದೊಡ್ಡಮಟ್ಟದಲ್ಲಿ ಸದೃಢವಾಗಿ ಸಂಘಟಿಸಿದ್ದಾರೆ. ದೇಶದ ಪ್ರಧಾನಿಯಾದ ಬಳಿಕ ದೇಶದ ರಸ್ತೆಗಳ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿಗಳ ಗ್ರಾಮ್​ ಸಡಕ್ ಯೋಜನೆ ಜಾರಿ ಮಾಡಿ ಗ್ರಾಮಗಳ ರಸ್ತೆಯನ್ನು ಡಾಂಬರೀಕರಣ ಮಾಡಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ಬಸವರಾಜ ಯಂಕಂಚಿ, ನಗರಸಭೆ ಉಪಾಧ್ಯಕ್ಷ ಬಸವರಾಜ ಅವರಾದಿ, ರಾಜು ರೇವಣಕರ, ಜಯಂತ ಕುರಂದವಾಡ, ಅಶೋಕ ಲಿಂಬಾವಳಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು, ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.