ETV Bharat / state

ಪ್ರಾರ್ಥನೆ ಮುಗಿಸಿ ಮರಳುತ್ತಿದ್ದಾಗ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ಸಾವು

author img

By

Published : Apr 17, 2023, 3:46 PM IST

ವಿಜಯಪುರದಲ್ಲಿ ಪ್ರಾರ್ಥನೆ ಮುಗಿಸಿ ಬಾಗಲಕೋಟೆಗೆ ವಾಪಸ್​ ಬರುತ್ತಿದ್ದಾಗ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಪ್ರಾರ್ಥನೆ ಮುಗಿಸಿ ಮರಳುತ್ತಿದ್ದಾಗ ಎರಗಿದ ಜವರಾಯ
ಪ್ರಾರ್ಥನೆ ಮುಗಿಸಿ ಮರಳುತ್ತಿದ್ದಾಗ ಎರಗಿದ ಜವರಾಯ

ಬಾಗಲಕೋಟೆ: ವಿಜಯಪುರದ ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹಿಂತಿರುಗಿ ಬರುತ್ತಿದ್ದಾಗ ಜಿಲ್ಲೆಯ ಇಳಕಲ್​ ಸಮೀಪದ ಎಂಕೆ ಡಾಬಾ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ, ನಾಲ್ವರು ಗಾಯಗೊಂಡಿದ್ದಾರೆ. ಕಳೆದ ರಾತ್ರಿ ಘಟನೆ ನಡೆದಿದೆ.

ತಾವರಗೇರಿಯ ಶಾಮಿದಾಸಾಬ್ ಕಿಡ್ದೂರ್​ ನಾಯಕ್, ಮೌಲಾಸಾಬ್ ಕಿಡ್ದೂರ್ ನಾಯಕ್ ಹಾಗೂ ಹಿಮಾಂಬಿ ಮೌಲಾಸಾಬ್ ಕಿಡ್ದೂರ್ ನಾಯಕ್ ಮೃತರು. ವಿಜಯಪುರದಲ್ಲಿನ ಪ್ರಾರ್ಥನಾ ಮಂದಿರಕ್ಕೆ ಹೋಗಿ ವಾಪಸ್ ಊರಿಗೆ ಬರುತ್ತಿದ್ದಾಗ ಅಪಘಾತವಾಗಿದೆ.

ಭಾನುವಾರ ರಾತ್ರಿ ಬೊಲೆರೋ ವಾಹನದಲ್ಲಿದ್ದ 7 ಮಂದಿ ವಿಜಯಪುರದಿಂದ ತಾವರಗೇರಿಗೆ ಹೊರಟಿದ್ದರು. ವಾಹನ ಇಳಕಲ್​ನ ಎಂಕೆ ಡಾಬಾ ಬಳಿ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ, ಬ್ರಿಡ್ಜ್‌​ಗೆ ಡಿಕ್ಕಿಯಾಗಿದೆ. ಅವಘಡಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಅಪಘಾತದ ವೇಳೆ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನಿಬ್ಬರು ಗಂಭೀರ ಗಾಯಗೊಂಡು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದರು. ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಳಕಲ್​ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: 'ತಾರಿಣಿ' ಮೂಲಕ ಮತ್ತೆ ಕನ್ನಡದಲ್ಲಿ ಮಮತಾ ರಾಹುತ್; ಸ್ಯಾಂಡಲ್​ವುಡ್​ಗೆ ಮತ್ತೊಂದು ಮಹಿಳಾ ಪ್ರಧಾನ ಸಿನಿಮಾ

ಕೊಲೆ ಪ್ರಕರಣದಲ್ಲಿ ಕಸ್ಟಡಿಯಿಂದ ತಪ್ಪಿಸಿಕೊಂಡ: 17 ವರ್ಷದ ಬಳಿಕ ಕಳ್ಳತನ ಪ್ರಕರಣದಲ್ಲಿ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.