'ಪಂಚಮಸಾಲಿ ಮೀಸಲಾತಿ ಹೋರಾಟದ ವರ್ಷಾಚರಣೆ ಕಾರ್ಯಕ್ರಮ ಮುಂದೂಡಿಕೆ'

author img

By

Published : Jan 12, 2022, 7:02 PM IST

ಬಾಗಲಕೋಟೆಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಸುದ್ದಿಗೋಷ್ಠಿ

ಈ ಕಾರ್ಯಕ್ರಮದಲ್ಲಿ ಅಂದಾಜು ಒಂದು ಲಕ್ಷಕ್ಕೂ ಅಧಿಕ ಜನರು ಸೇರುವ‌ ನಿರೀಕ್ಷೆ ಇತ್ತು. ಈ ಹಿನ್ನೆಲೆಯಲ್ಲಿ ಸಮಾಜದವರಿಗೆ ತೊಂದರೆ ಆಗಬಾರದು ಎಂಬ ದೃಷ್ಟಿಯಿಂದ ಸಮಾವೇಶ ಮುಂದಕ್ಕೆ ಹಾಕಲಾಗಿದೆ ಎಂದು ಬಸವ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಬಾಗಲಕೋಟೆ: ರಾಜ್ಯದಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ವರ್ಷಾಚರಣೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಪಂಚಮಸಾಲಿ ಪೀಠದ ಜಗದ್ಗುರು ಜಯ ಬಸವ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.


ನಗರದಲ್ಲಿ ಮಾತನಾಡಿದ ಅವರು, ಕೂಡಲಸಂಗಮದಲ್ಲಿ ಆಯೋಜನೆಯಾಗಬೇಕಿದ್ದ ವರ್ಷಾಚರಣೆ ಕಾರ್ಯಕ್ರಮ ಹಾಗೂ ಕೃಷಿ ಬಸವ ಪ್ರಶಸ್ತಿ ‌ಪ್ರದಾನ ಸಮಾರಂಭವನ್ನು ಮುಂದೂಡಲಾಗಿದೆ. ಈ ಬಗ್ಗೆ ಚರ್ಚೆ ಮಾಡಲು ಖಾಸಗಿ ಹೋಟೆಲ್​​ನಲ್ಲಿ ಪಂಚಮಸಾಲಿ ಸಮುದಾಯದ ಮುಖಂಡರ ಜೊತೆಗೆ ಸಭೆ ನಡೆಸಿ, ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಅಂದಾಜು ಒಂದು ಲಕ್ಷಕ್ಕೂ ಅಧಿಕ ಜನರು ಸೇರುವ‌ ನಿರೀಕ್ಷೆ ಇತ್ತು. ಈ ಹಿನ್ನೆಲೆಯಲ್ಲಿ ಸಮಾಜದವರಿಗೆ ತೊಂದರೆ ಆಗಬಾರದು ಎಂಬ ದೃಷ್ಟಿಯಿಂದ ಸಮಾವೇಶ ಮುಂದಕ್ಕೆ ಹಾಕಲಾಗಿದೆ. ಸರ್ಕಾರ ಸಹ ಪುಣ್ಯಸ್ಥಾನ ಸೇರಿದಂತೆ ಕೂಡಲಸಂಗಮದಲ್ಲಿ ಪೂಜೆ- ಪುನಸ್ಕಾರ ಮಾಡಲು ನಿಷೇಧ ಹೇರಿದೆ. ಹೀಗಾಗಿ, ನಮ್ಮ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಕೋವಿಡ್ ಸಡಿಲಗೊಂಡ ಬಳಿಕ ಮತ್ತೆ ಮೀಸಲಾತಿ ಹೋರಾಟ ಮತ್ತು ಕಾರ್ಯಕ್ರಮ ಆಯೋಜಿಸಲು ನಿರ್ಧಾರ ಮಾಡಲಾಗಿದೆ ಎಂದರು.

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.