ETV Bharat / state

ಸಾರ್ವಜನಿಕರು ಕಚೇರಿಗೆ ಅಲೆದಾಡುವದನ್ನು ತಪ್ಪಿಸಿ : ಡಿಸಿ ರಾಜೇಂದ್ರ

author img

By

Published : Sep 1, 2020, 9:56 PM IST

ವಿವಿಧ ಕೆಲಸ, ಕಾರ್ಯಗಳಿಗೆ ಆಗಮಿಸುವ ಸಾರ್ವಜನಿರ ಮೇಲೆ ಯಾವುದೇ ಒತ್ತಡ ಹೇರದೇ ಹಾಗೂ ಕಿರಿಕಿರಿ ನೀಡದೇ ಸುಗಮವಾಗಿ ನೆರವೇರಸಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ,ಕೆ.ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.

muncipal meeting in bagalkote
ಜಿಲ್ಲಾಧಿಕಾರಿ ಡಾ,ಕೆ.ರಾಜೇಂದ್ರ

ಬಾಗಲಕೋಟೆ: ನಗರಸಭೆಗೆ ಸಾರ್ವಜನಿಕರು ಪದೇ ಪದೇ ಅಲೆದಾಡುವದನ್ನು ತಪ್ಪಿಸಿ, ಸುಗಮವಾಗಿ ಅವರ ಕೆಲಸ ಕಾರ್ಯಗಳನ್ನು ಮಾಡಿಕೊಡುವಂತೆ ಜಿಲ್ಲಾಧಿಕಾರಿಗಳು, ನಗರಸಭೆ ಆಡಳಿತಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು.

muncipal meeting in bagalkote
ಜಿಲ್ಲಾಧಿಕಾರಿ ಡಾ,ಕೆ.ರಾಜೇಂದ್ರ

ನಗರ ಸಭೆ ಸಭಾಂಗಣದಲ್ಲಿ ನಡೆದ ವಿವಿಧ ಅಭಿವೃದ್ದಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನನ, ಮರಣ ಪ್ರಮಾಣ ಪತ್ರ, ಕಟ್ಟಡ ಪರವಾನಿಗೆ, ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ಸಾರ್ವಜನಿಕರು ನಗರಸಭೆಗೆ ಅಲೆದಾಡುವುದನ್ನು ತಪ್ಪಿಸಬೇಕು. ನಿಗದಿತ ಅವಧಿಯಲ್ಲಿ ಅವರ ಕೆಲಸ ಕಾರ್ಯಗಳು ಆಗಬೇಕು. ಯಾವುದೇ ರೀತಿಯ ಕಿರುಕುಳ, ಒತ್ತಡ ಹೇರುವಂತಿಲ್ಲ. ಅಂತಹ ಘಟನೆಗಳು ಜರಗಿದಲ್ಲಿ ಸೂಕ್ತ ಕ್ರಮಕೈಗೊಳ್ಳಲಾಗುವುವು ಎಂದು ಎಚ್ಚರಿಕೆ ನೀಡಿದರು.

ವಿವಿಧ ಕೆಲಸ, ಕಾರ್ಯಗಳಿಗಾಗಿ ಕಚೇರಿಗೆ ಆಗಮಿಸುವ ಸಾರ್ವಜನಿಕರ ಮೇಲೆ ಒತ್ತಡ ಹೇರುವ ಬಗ್ಗೆ ದೂರುಗಳು ಬಂದಿವೆ. ಆದ್ದರಿಂದ ಸಾರ್ವಜನಿಕರ ಮೇಲೆ ಯಾವುದೇ ರೀತಿಯ ಒತ್ತಡ ಹೇರುವಂತಿಲ್ಲ. ನಿಗದಿತ ಅವಧಿಯಲ್ಲಿ ಅವರ ಕೆಲಸ ಕಾರ್ಯಗಳನ್ನು ಸುವ್ಯವಸ್ಥಿತವಾಗಿ ಮಾಡಿಕೊಡಬೇಕು ಎಂದರು.

ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ವಿನಿಯೋಗವಾಗಬೇಕು. ಯೋಜನೆಗಳು ನಿಗದಿತ ಅವಧಿಯಲ್ಲಿ ಅನುಷ್ಠಾನಗೊಳ್ಳುವಂತೆ ಮುಂಜಾಗೃತ ವಹಿಸಬೇಕು. ಯಾವುದೇ ರೀತಿಯಲ್ಲಿ ಸರ್ಕಾರಕ್ಕೆ ಅನುದಾನ ವಾಪಸ್ ಹೋಗದಂತೆ ನೋಡಿಕೊಂಡು, ಸಮರ್ಪಕವಾಗಿ ಅನುದಾನ ಬಳಕೆಯಾಗಬೇಕೆಂದು ತಿಳಿಸಿದರು.

ಶಾಸಕ ವೀರಣ್ಣ ಚರಂತಿಮಠ ಮಾತನಾಡಿ, ನಗರಸಭೆಯ ಪ್ರತಿಯೊಬ್ಬ ಅಧಿಕಾರಿಗಳು ಮೊದಲು ತಮ್ಮ, ತಮ್ಮ ಕಚೇರಿಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಇದರಿಂದ ತಮ್ಮ ಆರೋಗ್ಯ ಉತ್ತಮವಾಗಿರುವುದರ ಜೊತೆಗೆ ವಿವಿಧ ಯೋಜನೆಗಳ ಅಭಿವೃಧ್ದಿ ಕಾರ್ಯಗಳನ್ನು ಮಾಡಲು ಸಾಧ್ಯವಾಗುತ್ತದೆ ಎಂದರು.

ನಗರಸಭೆ ಪೌರಾಯುಕ್ತ ಮುನಿಷಾಮಪ್ಪ ಮಾತನಾಡಿ, ನಗರಸಭೆಯಲ್ಲಿ ವಿವಿಧ ಯೋಜನೆಗಳ ಅಡಿಯಲ್ಲಿ ಬಿಡುಗಡೆಯಾಗಿರುವ ಅನುದಾನದ ವಿವರ, ಖರ್ಚು ಹಾಗೂ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾರ್ಯಗಳ ವಿವರಗಳನ್ನು ಸಭೆಗೆ ತಿಳಿಸಿದರು. ಪ್ರಸಕ್ತ ಸಾಲಿನಲ್ಲಿ 179.66 ಲಕ್ಷಗಳ ಕರ ವಸೂಲಾತಿ ಬೇಡಿಕೆ ಇದ್ದು, ಈ ಪೈಕಿ ಒಟ್ಟು 40.82 ಲಕ್ಷ ರೂಪಾಯಿ ವಸೂಲಿ ಆಗಿರುತ್ತದೆ ಎಂದರು.

ಪ್ರೊಬೇಷನರಿ ಐಎಎಸ್​ ಅಧಿಕಾರಿ ಯಶವಂತ ಗುರುಕಾರ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಗಣಪತಿ ಪಾಟೀಲ ಸೇರಿದಂತೆ ಇತರೆ ಅಧಿಕಾರಿಗಳು, ಅಭಿಯಂತರರು ಇದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.