ETV Bharat / state

ದೇಶದ್ರೋಹಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ವಿಹೆಚ್​ಪಿ, ಬಜರಂಗ ದಳ ಕಾರ್ಯಕರ್ತರಿಂದ ಪ್ರತಿಭಟನೆ

author img

By

Published : Feb 25, 2020, 5:57 PM IST

ಬಾಗಲಕೋಟೆ ನಗರದ ಜಿಲ್ಲಾಡಳಿತ ಭವನದ ಎದುರು ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗ ದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ದೇಶದ್ರೋಹಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

protest by vhp and bajarnagadal
protest by vhp and bajarnagadal

ಬಾಗಲಕೋಟೆ: ದೇಶದ್ರೋಹಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗ ದಳ ಕಾರ್ಯಕರ್ತರು ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದ್ರು.

ಬಿಜೆಪಿ ಮುಖಂಡ ಹಾಗೂ ವಿಧಾನ ಪರಿಷತ್​ನ ಮಾಜಿ ಸದಸ್ಯ ನಾರಾಯಣಸಾ ಭಾಂಡೆಗೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ದೇಶದ್ರೋಹಿಗಳ ವಿರುದ್ಧ ಘೋಷಣೆ ಹಾಕಿ, ಆಕ್ರೋಶ ವ್ಯಕ್ತಪಡಿಸಿದರು.

ವಿಹೆಚ್​ಪಿ, ಬಜರಂಗ ದಳ ಕಾರ್ಯಕರ್ತರಿಂದ ಪ್ರತಿಭಟನೆ

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ನಾರಾಯಣಸಾ ಭಾಂಡೆಗೆ ಮಾತನಾಡಿ, ಈ ದೇಶದ ಅನ್ನ ತಿಂದು ಬೇರೆ ದೇಶಕ್ಕೆ ಜೈ ಎನ್ನುವ ದೇಶದ್ರೋಹಿಗಳಿಗೆ ಕಠಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.

ಸಿಪಿಐಎಂ ರಾಷ್ಟ್ರೀಯ ಕಾರ್ಯದರ್ಶಿ ಕನ್ಹಯ್ಯಕುಮಾರ್​ ಬಗ್ಗೆ ಮಾತನಾಡುತ್ತಾ, ಕೃಷ್ಣನ ಹೆಸರು ಇಟ್ಟುಕೊಂಡಿರುವ ಇಂತಹ ವ್ಯಕ್ತಿ ಸಹ ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾನೆ ಎಂದು ಭಾಂಡಗೆ ಆರೋಪಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.