ETV Bharat / state

ಬಾಗಲಕೋಟೆ ಸಂತ್ರಸ್ತರಿಗೆ ಅಭಯ ನೀಡಿದ ಶಾಸಕರು, ಸಂಸದರು!

author img

By

Published : Aug 14, 2019, 4:55 AM IST

ಬಾಗಲಕೋಟೆ ಜಿಲ್ಲೆಯ ಪ್ರವಾಹ ಪೀಡಿತ ಎಲ್ಲ ಪ್ರದೇಶಗಳಿಗೂ ಶಾಸಕರು, ಸಂಸದರು ಭೇಟಿ ನೀಡಿ ಸಂತ್ರಸ್ಥರ ಸಮಸ್ಯೆ ಆಲಿಸಿ, ಪರಿಹಾರ ಒದಗಿಸುವ ಅಭಯ ನೀಡಿದರು.

The lawmakers, MP's met the flood affect residents

ಬಾಗಲಕೋಟೆ: ಜಿಲ್ಲೆಯ ಪ್ರವಾಹ ಪೀಡಿತ ಎಲ್ಲಾ ಪ್ರದೇಶಗಳಿಗೆ ಭೇಟಿ ನೀಡಿದ ಶಾಸಕರು, ಸಂಸದರು ಸಂತ್ರಸ್ತರ ಸಮಸ್ಯೆ ಆಲಿಸಿದರು.

ಬಾಗಲಕೋಟೆ ತಾಲೂಕಿನ ನಾಯನೇಗಲಿ, ಮಂಕಣಿ ಸೇರಿದಂತೆ ನೆರೆ ಪ್ರದೇಶಗಳಿಗೆ ಸಂಸದೆ ಶೋಭಾ ಕರಂದ್ಲಾಜೆ ಪರಿಶೀಲನೆ ನಡೆಸಿದರು. ಕೃಷ್ಣಾ ನದಿಯಿಂದ ಉಂಟಾಗಿರುವ ಪ್ರವಾಹದ ಕುರಿತು ಶಾಸಕ ವೀರಣ್ಣ ಚರಂತಿಮಠ ವಿವರಿಸಿದರು.

ಈ ಸಂದರ್ಭದಲ್ಲಿ ಶೋಭಾ ಕರಂದ್ಲಾಜೆ, ಸಂತ್ರಸ್ತರಿಗೆ ಸರ್ಕಾರದಿಂದ ಎಲ್ಲಾ ರೀತಿಯ ವ್ಯವಸ್ಥೆ ಕಲ್ಪಿಸಿಕೊಡಲಾಗುತ್ತದೆ ಎಂದು ಭರವಸೆ ನೀಡಿದರು.

ಸಂತ್ರಸ್ಥರಿಗೆ ಅಭಯ ನೀಡಿದ ಶಾಸಕರು, ಸಂಸದರು

ಇನ್ನೊಂದೆಡೆ ಶಾಸಕ ಬಿ.ಶ್ರೀರಾಮಲು, ಪಟ್ಟದಕಲ್ಲು, ನಂದಿಕೇಶ್ವರ, ಶಿವಯೋಗಿ ಮಂದಿರ ಸೇರಿದಂತೆ ವಿವಿಧ ಪ್ರದೇಶದಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಜನ ಆರಿಸಿ ಕಳಿಸಿದ ಸಿದ್ದರಾಮಯ್ಯ ಅವರು ಕ್ಷೇತ್ರಕ್ಕೆ ಬಂದು ಸಮಸ್ಯೆ ಆಲಿಸಬೇಕು ಎಂದು ಒತ್ತಾಯಿಸಿದರು.

ಇನ್ನೊಂದೆಡೆ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಬಾದಾಮಿ ತಾಲೂಕಿನ ಕಿತ್ತಳಿ, ಹೆಬ್ಬಳ್ಳಿ, ಪಟ್ಟದಕಲ್ಲು, ಕೂಡಲಸಂಗಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Intro:AnchorBody:-- ಬಾಗಲಕೋಟೆ ಜಿಲ್ಲೆಯ ಪ್ರವಾಹ ಪೀಡಿತ ವಿವಿಧ ಪ್ರದೇಶಗಳಲ್ಲಿ ರಾಜಕೀಯ ಮುಖಂಡರು,ಶಾಸಕರು,ಸಂಸದರು, ಭೇಟ್ಟಿ ನೀಡಿ ಸಂತ್ರಸ್ತರ ಸಮಸ್ಯೆ ಯನ್ನು ಆಲಿಸಿದರು.ಬಾಗಲಕೋಟೆ ತಾಲೂಕಿನ ನಾಯನೇಗಲಿ.ಮಂಕಣಿ ಸೇರಿದಂತೆ ಇತರ ಪ್ರದೇಶಗಳಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಭೇಟ್ಟಿ ನೀಡಿ ಪರಿಶೀಲನೆ ನಡೆಸಿದರು. ಕೃಷ್ಣ ನದಿ ಪ್ರವಾಹ ಆಗುವ ತೊಂದರೆ ಬಗ್ಗೆ ಶಾಸಕ ವೀರಣ್ಣ ಚರಂತಿಮಠ ವಿವರಿಸಿದರು. ಈ ಸಂದರ್ಭದಲ್ಲಿ ಮಾತನಾಡಿ ಸಂಸದರು,ಸರ್ಕಾರ ಸಂತ್ರಸ್ತರಿಗೆ ಎಲ್ಲಾ ಅನುಕೂಲ ಕಲ್ಪಿಸಿಕೊಡಲಿದೆ ಎಂದು ಭರವಸೆ ನೀಡಿದರು. ಇನ್ನೊಂದೆಡೆ ಶಾಸಕರಾದ ಬಿ.ಶ್ರೀರಾಮಲು ಬಾದಾಮಿ ತಾಲೂಕಿನ ಪಟ್ಟದಕಲ್ಲು, ನಂದಿಕೇಶ್ವರ,ಶಿವಯೋಗಿ ಮಂದಿರ ಸೇರಿದಂತೆ ವಿವಿಧ ಪ್ರದೇಶದಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು,ಈ ಕ್ಷೇತ್ರದ ಜನ ಆರಿಸಿ ಕಳಿಸಿದ ಸಿದ್ದರಾಮಯ್ಯ ನವರು ವಿರೋಧ ಪಕ್ಷದ ನಾಯಕ ರಾಗಿದ್ದು,ಕ್ಷೇತ್ರಕ್ಕೆ ಬಂದು ಸಮಸ್ಯೆಯನ್ನು ಆಲಿಸಬೇಕು ಎಂದು ಒತ್ತಾಯಿಸಿದರು. ಇನ್ನೊಂದೆಡೆ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಬದಾಮಿ ತಾಲೂಕಿನ ಕಿತ್ತಳಿ,ಹೆಬ್ಬಳ್ಲಿ,ಪಟ್ಟದಕಲ್ಲು, ಕೂಡಲಸಂಗಮ ಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.Conclusion:ಈ ಟಿವಿ,ಭಾರತ,ಬಾಗಲಕೋಟೆ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.