ETV Bharat / state

ಸಿದ್ದರಾಮಯ್ಯ ಸೋಲಿಸುವ ಜವಾಬ್ದಾರಿ ನನ್ನದು: ಯಡಿಯೂರಪ್ಪ

author img

By

Published : Apr 30, 2023, 6:12 PM IST

yadiyurapppa-campaigning-at-badami-constituency
ಸಿದ್ದರಾಮಯ್ಯನವರನ್ನು ಸೋಲಿಸುವ ಜವಬ್ದಾರಿ ತೆಗೆದುಕೊಳ್ಳುತ್ತೇನೆ: ಯಡಿಯೂರಪ್ಪ

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದು ಬಾದಾಮಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್​​.ಟಿ.ಪಾಟೀಲ್​ ಪರ ಮತ ಯಾಚಿಸಿದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಷಣ

ಬಾಗಲಕೋಟೆ: ಕಡಿಮೆ ವೋಟಿನಿಂದ ಗೆದ್ದು ದ್ರೋಹ ಮಾಡಿದ ಸಿದ್ದರಾಮಯ್ಯರನ್ನು ವರುಣದಲ್ಲಿ ಸೋಲಿಸುವ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳುತ್ತೇನೆ. ಬಾದಾಮಿಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಜವಾಬ್ದಾರಿಯನ್ನು ನೀವು ತೆಗೆದುಕೊಳ್ಳಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಜಿಲ್ಲೆಯ ಬಾದಾಮಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.​​​ಟಿ.ಪಾಟೀಲ್​ ಪರ ಪ್ರಚಾರ ಸಭೆಯಲ್ಲಿಂದು ಅವರು ಮಾತನಾಡಿದರು.

ಮಾಜಿ ಸಿಎಂ ಸಿದ್ದರಾಮಯ್ಯನವರು ಬಾದಾಮಿ ಜನತೆಗೆ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡದೇ ಅನ್ಯಾಯ ಮಾಡಿ ಹೋಗಿದ್ದಾರೆ. ಸೋಲಿನ ಭೀತಿಯಿಂದ ವರುಣದಿಂದ ಸ್ಪರ್ಧಿಸುತ್ತಿದ್ದಾರೆ. ನಾನು ಸಿದ್ದರಾಮಯ್ಯನವರು ಸೋಲಿಸುವ ಕೆಲಸ ಮಾಡುತ್ತೇನೆ. ನೀವು ಬಾದಾಮಿಯಲ್ಲಿ ಕಾಂಗ್ರೆಸ್ ಪಕ್ಷವನ್ನು​ ಸೋಲಿಸಿ, ಬಿಜೆಪಿಗೆ ಮತ ನೀಡುವ ಮೂಲಕ ಅಭಿವೃದ್ಧಿಗೆ ಒತ್ತು ನೀಡಿ ಎಂದು ಮನವಿ ಮಾಡಿದರು.

ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸೈಕಲ್, ರೈತರಿಗಾಗಿ ಪ್ರತ್ಯೇಕ ಬಜೆಟ್, ಎಲ್ಲ ಸಮುದಾಯಕ್ಕೆ ಸಾಮಾಜಿಕ ಭದ್ರತೆ ಸೇರಿದಂತೆ ಅನೇಕ ಸೌಲಭ್ಯಗಳನ್ನು ನೀಡಿದ್ದೇನೆ ಎಂದು ಬಿಜೆಪಿ ಸರ್ಕಾರದ ಸಾಧನೆಗಳ ಬಗ್ಗೆ ಹೇಳಿದರು. ವಿಶ್ವ ನಾಯಕ ಪ್ರಧಾನಮಂತ್ರಿ ಮೋದಿ ದೇಶದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ. ಅಂತಹವರ ಮುಂದೆ ರಾಹುಲ್ ಗಾಂಧಿ ಯಾವ ಸಮ? ಎಂದು ಏಕವಚನದಲ್ಲಿಯೇ ಸಂಭೋದಿಸಿ, ಇಂತಹವರಿಗೆ ಮತ ನೀಡಬೇಕೇ ನೀವೇ ಯೋಚಿಸಿ ಎಂದು ಹೇಳಿದರು.

ಮುಂದುವರೆದು ಮಾತನಾಡಿ, ದ್ರೌಪದಿ ಮುರ್ಮು ಅವರನ್ನು ಈ ದೇಶದ ರಾಷ್ಟ್ರಪತಿಯನ್ನಾಗಿ ಮಾಡಿದವರು ಮೋದಿ ಎಂದರು. ಕುರುಬ ಸಮಯದಾಯ ಕಾಗಿನೆಲೆ ಮಠದ ಅಭಿವೃದ್ಧಿಗೆ 50-60 ಕೋಟಿ ರೂ ಅನುದಾನ ನೀಡಿದ್ದೇವೆ. ಈ ಹಿಂದೆ ರಾಜೀವ್​​ ಗಾಂಧಿ ಅವರು ವೀರೇಂದ್ರ ಪಾಟೀಲರಿಗೆ ಅಪಮಾನ ಮಾಡಿ ವಿಮಾನ ನಿಲ್ದಾಣದಲ್ಲಿಯೇ ಅವ್ರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರು ಎಂದು ತಿಳಿಸಿದರು.

ಬಿಜೆಪಿಯವರು ಯಡಿಯೂರಪ್ಪನಿಗೆ ಬಹಳ ಅನ್ಯಾಯ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ. ನಾನೇ ಸ್ವತಃ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಪಕ್ಷ ಬಲಪಡಿಸಲು ರಾಜ್ಯದ ಉದ್ದಗಲಕ್ಕೂ ಓಡಾಡುತ್ತಿದ್ದೇನೆ. ವೀರಶೈವ ಲಿಂಗಾಯತ ಸಮಾಜದ ಜನರು ಈ ಅಪಪ್ರಚಾರವನ್ನು ನಂಬಬಾರದು ಎಂದು ಹೇಳಿದರು.

ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರಿಗೆ ₹ 15 ಸಾವಿರ, ಆಶಾ ಕಾರ್ಯಕರ್ತೆಯರಿಗೆ ₹ 8 ಸಾವಿರ ವೇತನ: ಪ್ರಿಯಾಂಕಾ‌ ಗಾಂಧಿ ಘೋಷಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.