ಬೆಂಗಳೂರು ಗ್ರಾ. ಜಿಲ್ಲೆಯಲ್ಲಿ 123 ಮಕ್ಕಳು, 42 ಶಿಕ್ಷಕರಿಗೆ ಕೋವಿಡ್‌ ಸೋಂಕು

author img

By

Published : Jan 14, 2022, 4:44 PM IST

ಬೆಂ. ಗ್ರಾ. ಜಿಲ್ಲೆಯಲ್ಲಿ 123 ಶಾಲಾ ಮಕ್ಕಳು 42 ಶಿಕ್ಷಕರಿಗೆ ತಗುಲಿದ ಕೊರೊನಾ

ದೊಡ್ಡಬಳ್ಳಾಪುರ ತಾಲೂಕಿನ ದೇವಲ ಮಹರ್ಷಿ ಶಾಲೆಯ 25 ಮಕ್ಕಳು ಮತ್ತು ಕೊಂಗಾಡಿಯಪ್ಪ ಪ್ರಾಥಮಿಕ ಶಾಲೆಯ 18 ಮಕ್ಕಳಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಅತಿ ಹೆಚ್ಚು ಕೋವಿಡ್ ಪ್ರಕರಣ ದಾಖಲಾಗಿರುವುದು ಈ ಎರಡು ಶಾಲೆಗಳಲ್ಲೇ ಅನ್ನೋದು ಇಲ್ಲಿ ಗಮನಾರ್ಹ.

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 1ರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ 123 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತ ಮಕ್ಕಳ ಶಾಲೆಗಳಿಗೆ ತಾತ್ಕಾಲಿಕ ರಜೆ ನೀಡಲಾಗಿದೆ.

ಕೊರೊನಾ ಮೂರನೇ ಅಲೆ ಜಿಲ್ಲೆಯಲ್ಲಿ ಕ್ರಮೇಣವಾಗಿ ಹೆಚ್ಚಾಗುತ್ತಿದೆ. ಇಲ್ಲಿಯವರೆಗೂ 123 ಮಕ್ಕಳೂ ಸೇರಿದಂತೆ 42 ಶಿಕ್ಷಕರಿಗೆ ಸೋಂಕು ತಗುಲಿದೆ. ಸೋಂಕಿತರನ್ನು ಐಸೋಲೇಷನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ದೊಡ್ಡಬಳ್ಳಾಪುರ ತಾಲೂಕಿನ ದೇವಲ ಮಹರ್ಷಿ ಶಾಲೆಯ 25 ಮಕ್ಕಳು ಮತ್ತು ಕೊಂಗಾಡಿಯಪ್ಪ ಪ್ರಾಥಮಿಕ ಶಾಲೆಯ 18 ಮಕ್ಕಳಿಗೆ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಅತಿ ಹೆಚ್ಚು ಕೋವಿಡ್ ಪ್ರಕರಣ ದಾಖಲಾಗಿರುವುದು ಈ ಎರಡು ಶಾಲೆಗಳಲ್ಲೇ ಅನ್ನೋದು ಗಮನಾರ್ಹ. ಉಳಿದಂತೆ, ಒಂದೆರಡು ಕೋವಿಡ್ ಪ್ರಕರಣಗಳು ಜಿಲ್ಲೆಯಲ್ಲಿನ ಉಳಿದ ಶಾಲೆಗಳಲ್ಲಿ ಕಂಡು ಬಂದಿದೆ. ಶಾಲೆಗಳನ್ನು ಸ್ಯಾನಿಟೈಸ್ ಮಾಡಿ ತಾತ್ಕಾಲಿಕ ರಜೆ ನೀಡಲಾಗಿದೆ.

ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ. ಪೋಷಕರು ಆತಂಕಗೊಳ್ಳುವ ಅಗತ್ಯವಿಲ್ಲ. ಸೋಂಕಿತ ಮಕ್ಕಳಲ್ಲಿ ಯಾವುದೇ ರೀತಿಯ ರೋಗ ಲಕ್ಷಣಗಳು ಕಂಡು ಬಂದಿಲ್ಲ. ಉಳಿದಂತೆ ಎಲ್ಲಾ ಶಾಲೆಗಳ ಮಕ್ಕಳ ಕೋವಿಡ್ ತಪಾಸಣೆ ಮಾಡಲಾಗುತ್ತಿದೆ ಎಂದು ಸಾರ್ವಜನಿಕರು ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ ತಿಳಿಸಿದರು.

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.