ಪ್ರತಿವರ್ಷ 250 ಆಸ್ಪತ್ರೆಗಳಂತೆ ಐದು ವರ್ಷಗಳಲ್ಲಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೆ: ಸುಧಾಕರ್​

author img

By

Published : Jan 27, 2022, 10:58 PM IST

Health Minister Sudhakar information

ಕಳೆದ ವರ್ಷದ ಬಜೆಟ್‌ನ ಮೊದಲ ಹಂತದಲ್ಲಿ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ನಿರ್ಣಯ ಕೈಗೊಳ್ಳಲಾಗಿತ್ತು. ಅದರಂತೆ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಆರೋಗ್ಯ ಸಚಿವ ಸುಧಾಕರ್​​ ಹೇಳಿದರು.

ದೊಡ್ಡಬಳ್ಳಾಪುರ : ರಾಜ್ಯದಲ್ಲಿ ಪ್ರತಿವರ್ಷ 250 ಆಸ್ಪತ್ರೆಗಳಂತೆ 5 ವರ್ಷಗಳಲ್ಲಿ ರಾಜ್ಯದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೇಗೆರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ. ಸುಧಾಕರ್ ಹೇಳಿದರು.

ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೇರಿಸುವ ಕುರಿತಂತೆ ಮಾಹಿತಿ ನೀಡಿದ ಸಚಿವ ಸುಧಾಕರ್

ತಾಲೂಕಿನ ಮಧುರೆ ಹೋಬಳಿಯ ಕನಸವಾಡಿಯಲ್ಲಿ ಕೃಷಿ ಇಲಾಖೆ ವತಿಯಿಂದ ನಿರ್ಮಿಸಲಾದ ನೂತನ ರೈತ ಸಂಪರ್ಕ ಕೇಂದ್ರ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.

ಕಳೆದ ವರ್ಷದ ಬಜೆಟ್‌ನ ಮೊದಲ ಹಂತದಲ್ಲಿ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ನಿರ್ಣಯ ಕೈಗೊಳ್ಳಲಾಗಿತ್ತು. ಪ್ರತಿವರ್ಷ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳಂತೆ ಐದು ವರ್ಷಗಳಲ್ಲಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುವುದು ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನೂತನವಾದ ಜಿಲ್ಲಾಸ್ಪತ್ರೆ ಸ್ಥಾಪನೆಗೆ ಕ್ರಮ ವಹಿಸಲಾಗುವುದು. ಕ್ಯಾಬಿನೆಟ್‌ನಲ್ಲಿ ಶೀಘ್ರದಲ್ಲಿ ನಿರ್ಣಯ ಕೈಗೊಂಡು ಹೊಸಕೋಟೆಯಲ್ಲಿ ತಾಯಿ ಮತ್ತು ಮಗುವಿನ ಆಸ್ಪತ್ರೆ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: ನಾಳೆ ಸಿಎಂ ಬೊಮ್ಮಾಯಿಗೆ ಹುಟ್ಟುಹಬ್ಬದ ಸಂಭ್ರಮ: ಬರ್ತಡೇ ಸೆಲೆಬ್ರೇಷನ್ ಮಾಡಿಕೊಳ್ಳಲ್ಲ ಅಂದ್ರು ಸಿಂಪಲ್ ಸಿಎಂ

ಪ್ರತಿ ಜಿಲ್ಲೆಯಲ್ಲಿ ಸರ್ಕಾರಿ ಅಥವಾ ಖಾಸಗಿ ಒಡೆತನದ ವೈದ್ಯಕೀಯ ಕಾಲೇಜುಗಳಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಸರ್ಕಾರಿ ವೈದ್ಯಕೀಯ ಕಾಲೇಜು ಇಲ್ಲದಿರುವ ಜಿಲ್ಲೆಗಳಲ್ಲಿ ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವ(ಪಿಪಿಪಿ)ದಡಿ ನೂತನ ವೈದ್ಯಕೀಯ ಕಾಲೇಜು ಪ್ರಾರಂಭಿಸಬಹುದಾಗಿದೆ ಎಂದರು.

ವಿಮಾನನಿಲ್ದಾಣದಲ್ಲಿ ಟೆಸ್ಟಿಂಗ್ ಗೋಲ್ ಮಾಲ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಒಂದು ಪ್ರಕರಣ ಆದರೆ ಅದು ಪ್ರತಿನಿತ್ಯ ಆಗುತ್ತದೆ ಎನ್ನಲು ಆಗುವುದಿಲ್ಲ. ಅದು ಮಾಹಿತಿ ತಪ್ಪಾಗಿರುವುದು ಅಥವಾ ರಿಪೋರ್ಟ್ ತಪ್ಪಾಗಿ ಬಂದಿರಬಹುದು. ಅದನ್ನು ತನಿಖೆ ಮಾಡಲಾಗುತ್ತಿದೆ ಎಂದರು.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.