ETV Bharat / state

ಅಂಬೇಡ್ಕರ್ ಪುತ್ಥಳಿಗೆ ಕಿಡಿಗೇಡಿಗಳಿಂದ ಹಾನಿ: ದಲಿತ ಸಂಘಟನೆಗಳಿಂದ ಆಕ್ರೋಶ

author img

By

Published : May 15, 2023, 1:06 PM IST

ಯನಗುಂಟೆ ಗ್ರಾಮದ ಮಧ್ಯ ಭಾಗದಲ್ಲಿ ನಿರ್ಮಾಣ ಮಾಡಿದ್ದ ಡಾ. ಬಿ.ಆರ್​ ಅಂಬೇಡ್ಕರ್ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ. ಕಿಡಿಗೇಡಿಗಳ ಕೃತ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

Dalit organisations Protest
ದಲಿತ ಸಂಘಟನೆಗಳಿಂದ ಪ್ರತಿಭಟನೆ

ಹೊಸಕೋಟೆ (ಬೆಂಗಳೂರು ಗ್ರಾ): ಸಂವಿಧಾನ ಶಿಲ್ಪಿ ಡಾ. ಬಿ.ಆರ್​ ಅಂಬೇಡ್ಕರ್ ಅವರ ಪುತ್ಥಳಿಗೆ ಕಿಡಿಗೇಡಿಗಳು ಹಾನಿ ಮಾಡಿರುವ ಘಟನೆ ಹೊಸಕೋಟೆ ತಾಲೂಕಿನ ಯನಗುಂಟೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆ ಖಂಡಿಸಿ ದಲಿತ ಸಂಘಟನೆಗಳ ಕಾರ್ಯಕರ್ತರು, ಮುಖಂಡರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ.

ಯನಗುಂಟೆ ಗ್ರಾಮದ ಮಧ್ಯ ಭಾಗದಲ್ಲಿ ನಿರ್ಮಾಣ ಮಾಡಿದ್ದ ಡಾ. ಬಿ.ಆರ್​ ಅಂಬೇಡ್ಕರ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ನಾಶ ಪಡಿಸಿದ್ದಾರೆ ಎಂದು ವರದಿಯಾಗಿದೆ. ಕಿಡಿಗೇಡಿಗಳ ಕೃತ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕೂಡಲೇ ಕಿಡಿಗೇಡಿಗಳನ್ನು ಬಂಧಿಸುವಂತೆ ಗ್ರಾಮಸ್ಥರು ಹಾಗೂ ಸಂಘಟನೆಗಳ ಪ್ರಮುಖರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಸವೇಶ್ವರ ಪುತ್ಥಳಿ ತೆರವು: ಫ್ಲೈಓವರ್ ನಿರ್ಮಾಣಕ್ಕೆ ರಾತ್ರೋರಾತ್ರಿ ಕಾರ್ಯಾಚರಣೆ

ಸ್ಥಳಕ್ಕೆ ಸೂಲಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಡಿವೈಎಸ್​ಪಿ ಪಾಟೀಲ್ "ಇದು ಸಮಾಜ ಒಡೆಯುವ ಪ್ರಯತ್ನ. ಆದರೆ, ನಮ್ಮ ದಲಿತ ಬಾಂಧವರು ನಮಗೆ ಸಹಕಾರ ನೀಡಿ. ಕಾನೂನು ಬದ್ಧವಾಗಿ ಹೋರಾಟ ಮಾಡಿ. ಈ ಸಂಬಂಧ ಕೂಡಲೇ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗುವುದು. ಬಂಧನ ಮಾತ್ರವಲ್ಲದೇ ಇದೊಂದು ಮಾದರಿ ಪ್ರಕರಣವಾಗಿ ಅವರಿಗೆ ಶಿಕ್ಷೆ ಕೊಡಿಸುವ ಕೆಲಸ ಮಾಡುತ್ತೇವೆ" ಎಂದು ಭರವಸೆ ನೀಡಿದರು. ಭರವಸೆ ನೀಡಿದ ಬಳಿಕ ದಲಿತರ ಸಂಘಟನೆಗಳು ಪ್ರತಿಭಟನೆ ಹಿಂತೆಗೆದುಕೊಂಡಿವೆ.

ಇದನ್ನೂ ಓದಿ: ಅಂಬೇಡ್ಕರ್ ಪ್ರತಿಮೆ ತೆರವು : ಕತ್ತು‌‌ ಕೊಯ್ದುಕೊಂಡ ಅಭಿಮಾನಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.