ವಿದೇಶಿ ಕರೆನ್ಸಿ ಕಳ್ಳ ಸಾಗಾಟ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸಿಕ್ಕಿ ಬಿದ್ದ ಪ್ರಯಾಣಿಕ

author img

By

Published : Jan 23, 2022, 10:35 AM IST

ವಿದೇಶಿ ಕರೆನ್ಸಿ ಕಳ್ಳ ಸಾಗಾಣಿಕೆ

ಲಗೇಜ್​ನಲ್ಲಿ ಮರೆಮಾಚಿ ವಿದೇಶಿ ಕರೆನ್ಸಿ ಕಳ್ಳ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಡಿಆರ್​ಐ ಅಧಿಕಾರಿಗಳು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.

ದೇವನಹಳ್ಳಿ : 24 ಲಕ್ಷ ವಿದೇಶಿ ಕರೆನ್ಸಿ ಹಣವನ್ನ ಕಳ್ಳ ಸಾಗಾಟ ಮಾಡಲು ಯತ್ನಿಸಿದ ಪ್ರಯಾಣಿಕನೊಬ್ಬ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಆರ್​ಐ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾನೆ.

ಜನವರಿ 21ರಂದು ಮುಂಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕ, ಇಲ್ಲಿಂದ ದುಬೈಗೆ ಪ್ರಯಾಣಿಸುತ್ತಿದ್ದ. ಈ ವೇಳೆ ಡಿಆರ್​ಐ ಅಧಿಕಾರಿಗಳು ಪ್ರಯಾಣಿಕನನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ, ಲಗೇಜ್​ನಲ್ಲಿ ಮರೆಮಾಚಿ ವಿದೇಶಿ ಕರೆನ್ಸಿ ಕಳ್ಳ ಸಾಗಾಟ ಮಾಡುತ್ತಿದ್ದ ಎಂದು ಬೆಳಕಿಗೆ ಬಂದಿದೆ. ಸದ್ಯಕ್ಕೆ ಆರೋಪಿ ಬಳಿಯಿದ್ದ 24,32,730 ರೂ. ಮೌಲ್ಯದ ವಿದೇಶಿ ಕರೆನ್ಸಿ ಜಪ್ತಿ ಮಾಡಿಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.