ಅನುದಾನ ರಹಿತ ಶಾಲೆಗಳ ಸ್ವಂತ ಪಠ್ಯ ಪುಸ್ತಕಕ್ಕೆ ಅನುಮತಿ: ಕುಸ್ಮ ಸಲ್ಲಿಸಿದ್ದ ಅರ್ಜಿಯ ತೀರ್ಪು ಕಾಯ್ದಿಟ್ಟ ಹೈಕೋರ್ಟ್

author img

By

Published : Nov 25, 2022, 8:07 PM IST

high-court

ರಾಜ್ಯ ಸರ್ಕಾರವು ಅನುದಾನ ರಹಿತ ಶಾಲೆಗಳಿಗೆ ಪಠ್ಯಪುಸ್ತಕಗಳನ್ನು ಸೂಚಿಸದಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಕುಸ್ಮ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್​ ಪೂರ್ಣಗೊಳಿಸಿದ್ದು ತೀರ್ಪು ಕಾಯ್ದಿರಿಸಿದೆ.

ಬೆಂಗಳೂರು: ಅನುದಾನ ರಹಿತ ಶಾಲೆಗಳಿಗೆ ರಾಜ್ಯ ಸರ್ಕಾರ ಯಾವುದೇ ನಿರ್ದಿಷ್ಟ ಪಠ್ಯಪುಸ್ತಕಗಳನ್ನು ಸೂಚಿಸದಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಕರ್ನಾಟಕ ಅನುದಾನ ರಹಿತ ಶಾಲೆಗಳ ಒಕ್ಕೂಟ(ಕುಸ್ಮ) 1995 ರಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಯಲ್ಲಿ ಮೀಸಲಾತಿ ರದ್ದು ಮಾಡುವುದು ಸೇರಿದಂತೆ ಕರ್ನಾಟಕ ಶಿಕ್ಷಣ ಕಾಯ್ದೆ, 1983ರ ವಿವಿಧ ಸೆಕ್ಷನ್​ಗಳನ್ನು ಪ್ರಶ್ನಿಸಿ ಕುಸ್ಮ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಮೂರ್ತಿ ಆಲೋಕ್​ ಆರಾಧೆ ಮತ್ತು ಎಸ್.ವಿಶ್ವಜಿತ್​ ಶೆಟ್ಟಿ ಅವರಿದ್ದ ನ್ಯಾಯಪೀಠ ಗುರುವಾರ ವಿಚಾರಣೆ ಪೂರ್ಣಗೊಳಿಸಿದೆ.

ಸರ್ಕಾರ ನಿರ್ಧಿಷ್ಟ ಪಠ್ಯಪುಸ್ತಕಗಳನ್ನು ಬೋಧನೆ ಮಾಡಬೇಕು ಎಂಬುದಾಗಿ ಷರತ್ತು ವಿಧಿಸಬಾರದು. ಖಾಸಗಿ ಶಾಲೆಗಳೇ ಪಠ್ಯ ಕ್ರಮ ಆಯ್ಕೆ ಮಾಡಿಕೊಳ್ಳುವುದಕ್ಕೆ ಮುಕ್ತ ಅವಕಾಶ ನೀಡಬೇಕು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳುವ ಸಂದರ್ಭದಲ್ಲಿ ಮೀಸಲಾತಿ ನೀಡುವಂತೆ ಸೂಚಿಸುವ ಕಾಯಿದೆಯ ಸೆಕ್ಷನ್​ 41(3)ನ್ನು ಅಸಾಂವಿಧಾನಿಕ ಎಂದು ಘೋಷಣೆ ಮಾಡಬೇಕು.

ಅಲ್ಲದೇ, ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಸೀಟುಗಳನ್ನು ನಿಗದಿ ಪಡಿಸಿ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಜಾರಿ ಗೊಳಿಸದಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಶುಲ್ಕ ವಿಧಿಸುವ ಪ್ರಕ್ರಿಯೆಯಲ್ಲಿ ಸರ್ಕಾರ ಯಾವುದೇ ಸೂಚನೆ ನೀಡದಂತೆ ಅನುಮತಿ ನೀಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು.

ವಿಚಾರಣೆ ವೇಳೆ, ಅರ್ಜಿದಾರರ ಪರ ವಕೀಲ ಕೆ.ವಿ.ದನಂಜಯ್​ ಅವರು, ಪಠ್ಯ ಪುಸ್ತಕದಲ್ಲಿ ಸಾರ್ವಕರ್​ ವಿಷಯವನ್ನು ಸೇರಿಸಿರುವುದು ಮತ್ತು 1984ರಲ್ಲಿ ಸಿಕ್​ ಧಂಗೆಗೆ ಸಂಬಂಧಿಸಿದಂತೆ ವಿಷಯಗಳನ್ನು ನ್ಯಾಯಪೀಠಕ್ಕೆ ವಿವರಿಸಿದ್ದರು.

ಇದನ್ನೂ ಓದಿ: 400 ರುಪಾಯಿ ಲಂಚ ಪಡೆದು ಕೆಲಸ ಕಳ್ಕೊಂಡ ಸರ್ಕಾರಿ ನೌಕರ: ಏನಿದು ಪ್ರಕರಣ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.