ETV Bharat / state

ಆನೇಕಲ್​: ಜೈಲಿಗೆ ಹೋಗಿ ಬಂದ ವ್ಯಕ್ತಿ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ

author img

By

Published : Nov 21, 2022, 3:33 PM IST

ಕೊಲೆ ಯತ್ನ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಿದ್ದ ವ್ಯಕ್ತಿಯೋರ್ವ ಮನೆಯ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನೇಕಲ್​ ನಲ್ಲಿ ನಡೆದಿದೆ.

man-committs-suicide-by-jumping-from-the-third-floor-in-anekal
ಜೈಲಿಗೆ ಹೋಗಿ ಬಂದ ವ್ಯಕ್ತಿ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ

ಆನೇಕಲ್ : ಕೊಲೆಯತ್ನ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದ ವ್ಯಕ್ತಿಯೋರ್ವ ಮನೆಯ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನೇಕಲ್ ಪಟ್ಟಣದ ತಿಗಳರ ಬೀದಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಆನೇಕಲ್​ ಪಟ್ಟಣದ ನಿವಾಸಿ ಮಂಜು ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ.

ಮೃತ ಮಂಜು ಕಳೆದ ಕೆಲ ತಿಂಗಳ ಹಿಂದೆ ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆಯ ಪತಿಯ ಕೊಲೆಗೆ ಯತ್ನಿಸಿದ್ದರು. ಆದರೆ ಅಂದು ಬಿಜೆಪಿ ಮುಖಂಡ ಮಂಜು ಕೈಯಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡಿದ್ದರು. ಈ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.

ಬಳಿಕ ಈ ಬಗ್ಗೆ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ, ಕೊಲೆ ಯತ್ನ ಕೇಸ್ ನಲ್ಲಿ ಮಂಜು ಜೈಲಿಗೆ ಹೋಗಿ ಬಂದಿದ್ದರು ಎಂದು ತಿಳಿದುಬಂದಿದೆ. ಆದರೆ ಇತ್ತೀಚೆಗೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಂಜು ನಿನ್ನೆ ರಾತ್ರಿ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಚಿಕ್ಕಮಗಳೂರು: ಹಣಕಾಸಿನ ವಿಚಾರಕ್ಕೆ ಸ್ನೇಹಿತನ ಕೊಲೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.