ದೊಡ್ಡಬಳ್ಳಾಪುರ: ಮಳೆಗಾಲ ಆರಂಭದ ಬೆನ್ನಲ್ಲೇ ಡೆಂಗ್ಯೂ ಜ್ವರಕ್ಕೆ ಬಾಲಕಿ ಬಲಿ

ದೊಡ್ಡಬಳ್ಳಾಪುರ: ಮಳೆಗಾಲ ಆರಂಭದ ಬೆನ್ನಲ್ಲೇ ಡೆಂಗ್ಯೂ ಜ್ವರಕ್ಕೆ ಬಾಲಕಿ ಬಲಿ
ಮಳೆಗಾಲ ಪ್ರಾರಂಭವಾಗಿ ಇನ್ನೂ ತಿಂಗಳಾಗಿಲ್ಲ, ಆಗಲೇ ದೊಡ್ಡಬಳ್ಳಾಪುರ ತಾಲೂಕಿನ 6 ವರ್ಷದ ಬಾಲಕಿಯೊಬ್ಬಳು ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾಳೆ.
ದೊಡ್ಡಬಳ್ಳಾಪುರ(ಬೆಂಗಳೂರು ಗ್ರಾಮಾಂತರ) : ಈಡಿಸ್ ಎಂಬ ಸೊಳ್ಳೆಯಿಂದ ಹರಡುವ ಡೆಂಗ್ಯೂ ಜ್ವರಕ್ಕೆ ಬಾಲಕಿ ಬಲಿಯಾಗಿದ್ದು, ಮಳೆಗಾಲದಲ್ಲಿ ಡೆಂಗ್ಯೂ ಜ್ವರದ ತೀವ್ರತೆ ಇದ್ದು, ಜನರು ಎಚ್ಚರಿಕೆಯಿಂದ ಇರಬೇಕಿದೆ. ದೊಡ್ಡಬಳ್ಳಾಪುರ ತಾಲೂಕಿನ ಬೀಡಿಕೆರೆ ಗ್ರಾಮದ 6 ವರ್ಷದ ಬಾಲಕಿ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾಳೆ.
ಗ್ರಾಮದ ಮುನಿರಾಜು ಮತ್ತು ಸವಿತಾ ದಂಪತಿಯ ಮಗಳಾದ ಚಾರುಲತಾ ಕಳೆದೊಂದು ವಾರದಿಂದ ಜ್ವರದಿಂದ ಬಳಲುತ್ತಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ್ದಾಳೆ.
ಮಳೆಗಾಲದಲ್ಲಿ ಹೂದಾನಿ, ಹಳೇ ಟೈರ್, ಖಾಲಿ ಡಬ್ಬಗಳಲ್ಲಿನ ನಿಂತ ನೀರಿನಲ್ಲಿ ಜ್ವರಕ್ಕೆ ಕಾರಣವಾಗುವ ಈಡಿಸ್ ಸೊಳ್ಳೆ ಉತ್ಪತ್ತಿಯಾಗುವುದರಿಂದ ಇವುಗಳಿಗೆ ಕಡಿವಾಣ ಹಾಕಬೇಕಿದೆ. ಮತ್ತು ಸುತ್ತಮುತ್ತಲಿನ ವಾತಾವರಣ ಶುಚಿಯಾಗಿಟ್ಟುಕೊಳ್ಳಬೇಕಿದೆ.
ಇದನ್ನೂ ಓದಿ : ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮುದ್ದೇಬಿಹಾಳದ ಯೋಧ ಸಾವು
