‘‘ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ’’ ಕಾರ್ಯಕ್ರಮದಲ್ಲಿ ಅಸಮಾಧಾನಗೊಂಡ ಸಚಿವ ಆರ್​ ಅಶೋಕ್​

author img

By

Published : Jan 21, 2023, 8:52 PM IST

Updated : Jan 21, 2023, 10:54 PM IST

minister-r-ashok-was-upset-with-the-program-district-officer-walks-towards-the-village

ಕಾರ್ಯಕ್ರಮದಲ್ಲಿ ಎಂಟಬಿ ನಾಗರಾಜ, ಶರತ್​ ಬಚ್ಚೆಗೌಡ ಬೆಂಬಲಿಗರಿಂದ ಪರ ವಿರೋದ ಘೋಷಣೆ - ವೇದಿಕೆಯ ಮೇಲೆಯೆ ಅಸಮಾಧಾನ ವ್ಯಕ್ತ ಪಡಿಸಿದ ಸಚಿವರು - ಘೋಷಣೆ ಕೂಗುವವರನ್ನು ಹೊರಗೆ ಹಾಕಿ ಎಂದು ಪೊಲೀಸರಿಗೆ ಮನವಿ.

‘‘ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ’’ ಕಾರ್ಯಕ್ರಮದಲ್ಲಿ ಅಸಮಾಧಾನಗೊಂಡ ಸಚಿವ ಆರ್​ ಅಶೋಕ್​

ಹೊಸಕೋಟೆ (ಬೆಂಗಳೂರು ಗ್ರಾಮಾಂತರ) : ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದ ''ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ'' ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿರುವ ಸಾರ್ವಜನಿಕ ಅಹವಾಲುಗಳ ಸ್ವೀಕಾರ ಹಾಗೂ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್. ಅಶೋಕ ಅವರು ಸಚಿವರು ಮತ್ತು ಶಾಸಕರ ಬೆಂಬಲಿಗರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ ಎಂಟಿಬಿ ನಾಗರಾಜ ಪರ ಅವರ ಬೆಂಬಲಿಗರು ಮತ್ತು ಶಾಸಕ ಶರತ್ ಬಚ್ಚೇಗೌಡ ಪರ ಅವರ ಬೆಂಬಲಿಗರು ಕಾರ್ಯಕ್ರಮದಲ್ಲಿ ಪರಸ್ಪರ ಪರ ವಿರೋಧ ಘೋಷಣೆಗಳನ್ನು ಕೂಗಿ ಗದ್ದಲದ ವಾತಾವರಣ ನಿರ್ಮಾಣ ಮಾಡಿದರು. ಇದೇ ವೇಳೆ ಪರ ವಿರೋದ ಘೋಷಣೆಗಳ ಕೂಗಿಗೆ ಬೇಸತ್ತ ಕಂದಾಯ ಸಚಿವ ಆರ್​ ಅಶೋಕ್​ ವೇದಿಕೆಯ ಮೇಲಿಂದ ಎದ್ದು, ಇದು ಸರ್ಕಾರಿ ಕಾರ್ಯಕ್ರಮ ಪಕ್ಷದ ಕಾರ್ಯಕ್ರಮ ಅಲ್ಲ ಎಂದು ಶಾಸಕರ ಬೆಂಬಲಿಗರಿಗೆ ಮನವಿ ಮಾಡಿದರು.

ಸಚಿವರ ಮತ್ತು ಶಾಸಕರ ಬೆಂಬಲಿಗರುಗಳಿಗೆ ಮನವಿ ಮಾಡಿದರು ಮತ್ತೆ, ತಮ್ಮ ನಾಯಕರುಗಳ ಪರ ಘೋಷಣೆ ಕೂಗಲು ಶುರು ಮಾಡಿದ ಹಿನ್ನೆಲೆಯಲ್ಲಿ ಸಚಿವ ಆರ್​. ಅಶೋಕ್ ಅಸಮಾಧಾನ ವ್ಯಕ್ತಪಡಿಸಿ ಘೋಷಣೆ ಕೂಗುವವರನ್ನು ಕಾರ್ಯಕ್ರಮದಿಂದ ಹೊರಗೆ ಹಾಕಿ ಎಂದು ಪೊಲೀಸರಲ್ಲಿ ಮನವಿ ಮಾಡಿಕೊಂಡರು. ಇನ್ನು, ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಪೌರಾಡಳಿತ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜ್ ಹಾಗೂ ಶಾಸಕ ಶರತ್ ಬಚ್ಚೇಗೌಡ, ಜಿಲ್ಲಾಧಿಕಾರಿ ಆರ್. ಲತಾ, ಜಿಲ್ಲಾ ಪಂಚಾಯತ್​ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ರೇವಣಪ್ಪ ಅವರನ್ನು ಅದ್ಧೂರಿಯಾಗಿ ಕಾರ್ಯಕ್ರಮಕ್ಕೆ ಸ್ವಾಗತಿಸಲಾಯಿತು.

ಟ್ರಾಕ್ಟರ್ ಏರಿ ಗ್ರಾಮದಲ್ಲಿ ಸಂಚಾರ: ಜಡಿಗೇನಹಳ್ಳಿ ಗ್ರಾಮದ ಶ್ರೀ ಅಭಯ ಆಂಜನೇಯ ಸ್ವಾಮಿ ಹಾಗೂ ಐತಿಹಾಸಿಕ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನಗಳಲ್ಲಿ ಭೇಟಿ ನೀಡಿ ಪೂಜೆ ಸಲ್ಲಿಸಿ ನಂತರ ಸಚಿವರು ಅಲಂಕೃತವಾದ ಟ್ರಾಕ್ಟರ್ ಏರಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದರು.‌ ಇದೇ ವೇಳೆ ಊರಿನ ಗ್ರಾಮಸ್ಥರು ಚಂಡೆ, ಮದ್ದಳೆ, ತಮಟೆ,‌ ಡೊಳ್ಳು, ಕೀಲುಕುದುರೆ, ಮರಗಾಲು, ಬೊಂಬೆ ಕುಣಿತ, ಮಹಿಳೆಯರ ವೀರಗಾಸೆ,‌ ಪಟ ಕುಣಿತ,‌ ಪೂಜಾ ಕುಣಿತ ಮೊದಲಾದ ಜಾನಪದ ಕಲಾತಂಡಗಳ ಮೂಲಕ ಮೆರವಣಿಗೆಯ ಮೂಲಕ ಸಚಿವರನ್ನು ಸ್ವಾಗತಿಸಿದರು.

ಹಸು ವಿತರಣೆ: ಹೈನುಗಾರಿಕೆ ಉತ್ತೇಜಿಸಲು ಹಾಗೂ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಸಾಧಿಸುವ ಉದ್ದೇಶದಿಂದ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ಅಮೃತ ಸಿರಿ ಯೋಜನೆಯಡಿಯಲ್ಲಿ ಏಳು ಮಿಶ್ರ ತಳಿ ಜರ್ಸಿ ಕರುಗಳನ್ನು ಸಚಿವರು ಫಲಾನುಭವಿಗಳಿಗೆ ಹಸ್ತಾಂತರಿಸಿದರು. ಸ್ಥಳೀಯ ಹಾಲು ಉತ್ಪಾದಕರ ಸಹಕಾರ ಸಂಘದ ಸಹಯೋಗದಲ್ಲಿ ಇದೇ ಸಂದರ್ಭದಲ್ಲಿ ಪಶು ಆರೋಗ್ಯ ಶಿಬಿರವನ್ನೂ ಸಹ ಆಯೋಜಿಸಲಾಗಿತ್ತು.

ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ವಿಶೇಷತೆ: ಸರ್ಕಾರವೇ ಜನರ ಮನೆ ಬಾಗಿಲಿಗೆ ತೆರಳಿ ಸಮಸ್ಯೆ ಆಲಿಸಬೇಕು ಮತ್ತು ಶೀಘ್ರವಾಗಿ ಸಮಸ್ಯೆಗಳನ್ನು ಪರಿಹಾರ ಮಾಡಬೇಕು ಎನ್ನುವುದು ಕಾರ್ಯಕ್ರಮದ ಆಶಯವಾಗಿದೆ. ರಾಜ್ಯದ್ಯಂತ ಎಲ್ಲಾ ಜಿಲ್ಲಾಧಿಕಾರಿಗಳು, ತಹಶಿಲ್ದಾರರು ಸಹ ಹಳ್ಳಿಗಳಿಗೆ ತೆರಳಿ ಜನರ ಸಮಸ್ಯೆಗಳನ್ನು ಪರಿಹಾರ ಮಾಡಲಿದ್ದಾರೆ, 24 ಗಂಟೆಗಳ ಕಾಲ ಹಳ್ಳಿಯಲ್ಲಿಯೇ ಇದ್ದು, ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ನೀಡುವುದು ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ವಿಶೇಷತೆ ಆಗಿದೆ.

ಇದನ್ನೂ ಓದಿ: ಹಣ ಕೊಟ್ಟು ಕರೆಂಟ್​​ ಬೇಕು ಎಂದಾಗ ಕೊಡದೇ ಈಗ ಪುಕ್ಕಟ್ಟೆ ಭರವಸೆ ಕೊಡುತ್ತಿದ್ದಾರೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Last Updated :Jan 21, 2023, 10:54 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.