ETV Bharat / state

ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಕಾ: ಟಿ.ವೆಂಕಟರಮಣಯ್ಯ

author img

By

Published : Sep 12, 2021, 8:58 PM IST

t-venkataramanayya
ಟಿ ವೆಂಕಟರಮಣಯ್ಯ

ಸೆಪ್ಟೆಂಬರ್ 3 ರಂದು ನಡೆದ ದೊಡ್ಡಬಳ್ಳಾಪುರ ನಗರಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ವಷ್ಟ ಬಹುಮತ ಸಿಗದೆ ಅತಂತ್ರವಾಗಿದೆ.

ದೊಡ್ಡಬಳ್ಳಾಪುರ: ನಗರಸಭೆ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಿದೆ. ಅಧಿಕಾರ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿಗೆ ಮುಂದಾಗಿವೆ.

ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ಟಿ. ವೆಂಕಟರಮಣಯ್ಯ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿಯೋದು ಪಕ್ಕಾ, ಕ್ಲೈಮ್ಯಾಕ್ಸ್‌ನಲ್ಲಿ ನಮ್ಮದೇ ಗೆಲುವು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶಾಸಕ ಟಿ. ವೆಂಕಟರಮಣಯ್ಯ ಮಾತು

ಸೆಪ್ಟೆಂಬರ್ 3 ರಂದು ನಡೆದ ದೊಡ್ಡಬಳ್ಳಾಪುರ ನಗರಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ವಷ್ಟ ಬಹುಮತ ಸಿಗದೆ ಅತಂತ್ರವಾಗಿದೆ. 31 ವಾರ್ಡ್​ಗಳಲ್ಲಿ 12 ಬಿಜೆಪಿ, 09 ಕಾಂಗ್ರೆಸ್, 07 ಜೆಡಿಎಸ್ ಮತ್ತು 03 ಸ್ಥಾನಗಳು ಪಕ್ಷೇತರರ ಪಾಲಾಗಿದೆ. ಅಧಿಕಾರ ಹಿಡಿಯಲು 16 ಸ್ಥಾನಗಳ ಅಗತ್ಯವಿದೆ. ಆದರೆ, ಯಾವುದೇ ಪಕ್ಷ ಬಹುಮತ ಪಡೆಯದ ಹಿನ್ನೆಲೆಯಲ್ಲಿ ಅತಂತ್ರ ಪರಿಸ್ಥಿತಿ ಇದೆ. ಜೆಡಿಎಸ್ ಪಕ್ಷ ನಿರ್ಣಯಕ ಸ್ಥಾನದಲ್ಲಿದೆ. ಅಧಿಕಾರ ಹಿಡಿಯಲು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ತೆರೆಮರೆಯಲ್ಲಿ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿಗೆ ಪೈಪೋಟಿ ನಡೆಸಿವೆ.

ಕ್ಷೇತ್ರದ ಟಿ. ವೆಂಕಟರಮಣಯ್ಯ ಅವರಿಗೆ ನಗರಸಭೆ ಅಧಿಕಾರ ಹಿಡಿಯೋದು ಪ್ರತಿಷ್ಠೆಯ ವಿಷಯವಾಗಿದೆ. ಜೆಡಿಎಸ್ ಜೊತೆ ಮೈತ್ರಿಗೆ ಮುಂದಾಗಿರುವ ಅವರು, ಜೆಡಿಎಸ್ ಜಿಲ್ಲಾಧ್ಯಕ್ಷ ಮುನೇಗೌಡ ಅವರ ಜೊತೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ 9, ಜೆಡಿಎಸ್ 7, ಪಕ್ಷೇತರರ 2 ಮತ್ತು ಶಾಸಕರ ಒಂದು ಮತದಿಂದ ಒಟ್ಟು 19 ಸ್ಥಾನಗಳು ನಮ್ಮದಾಗುತ್ತವೆ. ನಗರಸಭೆ ಅಧಿಕಾರ ಹಿಡಿಯೋದು ಪಕ್ಕಾ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಸ್ಥಳೀಯ ಒಡಂಬಡಿಕೆಯ ಪ್ರಕಾರ ಮೈತ್ರಿ ಮಾಡಿಕೊಳ್ಳುವಂತೆ ಹಸಿರು ನಿಶಾನೆ ತೋರಿಸಿದ್ದಾರೆ. ಜೆಡಿಎಸ್ ಪಕ್ಷದ ಹೈಕಮಾಂಡ್ ಸಹ ಸ್ಥಳೀಯವಾಗಿ ಒಪ್ಪಂದ ಮಾಡಿಕೊಂಡು ಅಧಿಕಾರ ಹಿಡಿಯುವಂತೆ ಹೇಳಿದ್ದಾರೆ. ಕ್ಲೈಮ್ಯಾಕ್ಸ್ ನಲ್ಲಿ ಕಾಂಗ್ರೆಸ್ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ನಗರಸಭೆ ಅಧಿಕಾರ ಹಿಡಿದು ನಗರದ ಅಭಿವೃದ್ಧಿ ಮಾಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: 'ಕಾಂಗ್ರೆಸ್ ಮುಖಂಡರು ಸ್ಥಿಮಿತ ಕಳೆದುಕೊಂಡು ಮಾತನಾಡುತ್ತಿದ್ದಾರೆ'

ETV Bharat Logo

Copyright © 2024 Ushodaya Enterprises Pvt. Ltd., All Rights Reserved.