ETV Bharat / state

ವಿಮಾನದಿಂದ ಇಳಿದ ಪ್ರಯಾಣಿಕನ ಒಳ ಉಡುಪಿನಲ್ಲಿತ್ತು 47.31 ಲಕ್ಷ ಮೌಲ್ಯದ ಚಿನ್ನದ ಗಟ್ಟಿ!

author img

By

Published : May 8, 2022, 5:45 PM IST

ಅಬುಧಾಬಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನನ್ನು ಖಚಿತ ಮಾಹಿತಿ ಮೇರೆಗೆ ಡಿಆರ್​ಐ ಅಧಿಕಾರಿಗಳು ತಪಾಸಣೆ ನಡೆಸಿದಾಗ ಚಿನ್ನ ಕಳ್ಳ ಸಾಗಾಣಿಕೆ ಬೆಳಕಿಗೆ ಬಂದಿದೆ.

person-arrested-for-smuggling-gold-in-bengaluru-airport
ಒಳ ಉಡುಪಿನಲ್ಲಿ ಮರೆಮಾಚಿ ಚಿನ್ನದ ಗಟ್ಟಿ ಕಳ್ಳ ಸಾಗಣೆ

ದೇವನಹಳ್ಳಿ(ಬೆಂಗಳೂರು ಗ್ರಾಮಾಂತರ): ಒಳ ಉಡುಪಿನಲ್ಲಿ ಮರೆಮಾಚಿ ಚಿನ್ನದ ಗಟ್ಟಿಯನ್ನು ಕಳ್ಳ ಸಾಗಣೆ ಮಾಡುತ್ತಿದ್ದ ಪ್ರಯಾಣಿಕನೋರ್ವ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಆರೋಪಿಯಿಂದ 47.31 ಲಕ್ಷ ರೂ. ಮೌಲ್ಯದ ಬಂಗಾರವನ್ನು ವಶಕ್ಕೆ ಪಡೆಯಲಾಗಿದೆ.

ಮೇ 8ರಂದು ಅಬುಧಾಬಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನನ್ನು ಖಚಿತ ಮಾಹಿತಿ ಮೇರೆಗೆ ಡಿಆರ್​ಐ ಅಧಿಕಾರಿಗಳು ತಪಾಸಣೆ ನಡೆಸಿದಾಗ ಕಳ್ಳ ಸಾಗಾಣಿಕೆ ಬೆಳಕಿಗೆ ಬಂದಿದೆ. ಬಂಧಿತ ವ್ಯಕ್ತಿಯು ತನ್ನ ಒಳ ಉಡುಪಿನಲ್ಲಿಟ್ಟುಕೊಂಡು ಚಿನ್ನದ ಗಟ್ಟಿ ಸಾಗಿಸುತ್ತಿದ್ದ. ಆರೋಪಿಯಿಂದ 918.01 ಗ್ರಾಂ ತೂಕದ 47,31,427 ರೂಪಾಯಿ ಮೌಲ್ಯದ ಚಿನ್ನದ ಗಟ್ಟಿ ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನ ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ.

ಮೇ 6ರಂದು ಇದೇ ರೀತಿಯ ಪ್ರಕರಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕೈಗೆ ಪ್ರಯಾಣಿಕ ಸಿಕ್ಕಿಬಿದ್ದಿದ್ದ. ಆರೋಪಿಯಿಂದ 966.10 ಗ್ರಾಂ ತೂಕದ 50,07,276 ರೂಪಾಯಿ ಮೌಲ್ಯದ ಚಿನ್ನದ ಗಟ್ಟಿ ಜಪ್ತಿ ಮಾಡಲಾಗಿತ್ತು.

ಇದನ್ನೂ ಓದಿ: ಹುಬ್ಬಳ್ಳಿ : ಲವ್​ ಜಿಹಾದ್ ಎಂದು ಪ್ರಚೋದನಾಕಾರಿ ಪೋಸ್ಟ್ ಹಾಕಿದ್ದ ಯುವಕನ‌ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.