ETV Bharat / state

ಸಿಎಂ ಬಿಎಸ್​ವೈ ಅಧ್ಯಕ್ಷತೆಯಲ್ಲಿ ನಡೆದ 13ನೇ ರಾಜ್ಯ ವನ್ಯಜೀವಿ ಮಂಡಳಿ ಸಭೆ..

author img

By

Published : Mar 10, 2020, 12:02 AM IST

ಈ ವೇಳೆ ಅರಣ್ಯ ಸಚಿವ ಆನಂದ್ ಸಿಂಗ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪುನಾಟಿ ಶ್ರೀಧರ್, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸಂದೀಪ್ ದವೆ, ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್, ಶಾಸಕಿ ಸೌಮ್ಯರೆಡ್ಡಿ, ಮುಖ್ಯಮಂತ್ರಿಗಳ ಸಲಹೆಗಾರ ಎಂ ಲಕ್ಷ್ಮಿನಾರಾಯಣ್ ಉಪಸ್ಥಿತರಿದ್ದರು.

13th State Wildlife Board meeting chaired by CM BSY
13ನೇ ರಾಜ್ಯ ವನ್ಯಜೀವಿ ಮಂಡಳಿ ಸಭೆ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ 13ನೇ ರಾಜ್ಯ ವನ್ಯಜೀವಿ ಮಂಡಳಿ ಸಭೆ ಜರುಗಿತು. ವಿಧಾನ ಮಂಡಲ ಅಧಿವೇಶನ ನಡೆಯುತ್ತಿರುವ ಹಿನ್ನೆಲೆ ಅತ್ಯಂತ ತುರ್ತಾಗಿ ಆಗಮಿಸಿದ ಸಿಎಂ ಬಿಎಸ್​​ವೈ ಬಂದಷ್ಟೇ ಬೇಗ ಕಾರ್ಯಕ್ರಮ ಪೂರ್ಣಗೊಳಿಸಿ ತೆರಳಿದರು.

ಈ ಕಾರ್ಯಕ್ರಮದ ಬಳಿಕ ಬಿಬಿಎಂಪಿ ಆಯುಕ್ತರನ್ನು ಭೇಟಿ ಮಾಡಿ ಚರ್ಚಿಸುವ ಕಾರ್ಯವಿತ್ತು. ಆದರೆ, ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ವಿಧಾನ ಪರಿಷತ್​​ನಲ್ಲಿ ಉತ್ತರ ನೀಡಬೇಕಿದ್ದ ಕಾರಣ ತರಾತುರಿಯಲ್ಲಿ ಸಿಎಂ ತೆರಳಿದರು. ಹಾಗಾಗಿ ಬಿಬಿಎಂಪಿ ಆಯುಕ್ತರ ಜತೆ ಸಭೆ ನಡೆಯಲಿಲ್ಲ. 2014ರ ಮಾರ್ಚ್ 8ರಂದು ವನ್ಯಜೀವಿ ಮಂಡಳಿ ರಚನೆಯಾಗಿದ್ದು, ಅಂದಿನ ಸಿಎಂ ಸಿದ್ದರಾಮಯ್ಯ ಇದನ್ನು ರಚಿಸಿದ್ದರು. ನಿರಂತರವಾಗಿ ಇದು ತನ್ನ ಕಾರ್ಯವನ್ನು ಮುಂದುವರೆಸಿಕೊಂಡು ಬಂದಿದೆ.

13ನೇ ರಾಜ್ಯ ವನ್ಯಜೀವಿ ಮಂಡಳಿ ಸಭೆ..

ಈ ವೇಳೆ ಅರಣ್ಯ ಸಚಿವ ಆನಂದ್ ಸಿಂಗ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪುನಾಟಿ ಶ್ರೀಧರ್, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸಂದೀಪ್ ದವೆ, ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್, ಶಾಸಕಿ ಸೌಮ್ಯರೆಡ್ಡಿ, ಮುಖ್ಯಮಂತ್ರಿಗಳ ಸಲಹೆಗಾರ ಎಂ ಲಕ್ಷ್ಮಿನಾರಾಯಣ್ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.