ETV Bharat / state

ನಿರ್ಮಾಣ ಹಂತದ ಕಟ್ಟಡದ ಲಿಫ್ಟ್ ಗುಂಡಿಗೆ ಬಿದ್ದು 2 ವರ್ಷದ ಮಗು ಸಾವು

author img

By

Published : Oct 30, 2020, 2:20 PM IST

Updated : Oct 30, 2020, 2:32 PM IST

ಕಟ್ಟಡದ ನಿರ್ಮಾಣ ಕೆಲಸಕ್ಕೆ ವಲಸೆ ಕಾರ್ಮಿಕರಾಗಿ ಬಂದಿರುವ ಪೋಷಕರು ಕಟ್ಟಡ ಬಳಿ ಶೆಡ್ ನಿರ್ಮಾಣ ಮಾಡಿಕೊಂಡು ವಾಸವಿದ್ದರು. ಆಟವಾಡುತ್ತ ಲಿಫ್ಟ್​ ಬಳಿ ತೆರಳಿದ ಮಗು ನಿರ್ಮಾಣ ಹಂತದ ಕಟ್ಟಡದ ಲಿಫ್ಟ್​ನ ಗುಂಡಿಯೊಳಗೆ ಬಿದ್ದು ಅಸುನೀಗಿದೆ.

ನಿರ್ಮಾಣ ಹಂತದ ಕಟ್ಟಡದ ಲಿಫ್ಟ್ ಗುಂಡಿಗೆ ಬಿದ್ದು 2 ವರ್ಷದ ಮಗು ಸಾವು
ನಿರ್ಮಾಣ ಹಂತದ ಕಟ್ಟಡದ ಲಿಫ್ಟ್ ಗುಂಡಿಗೆ ಬಿದ್ದು 2 ವರ್ಷದ ಮಗು ಸಾವು

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ ಲಿಫ್ಟ್​ನ ಗುಂಡಿಯೊಳಗೆ ವಿನೋದ ಎಂಬ 2 ವರ್ಷದ ಮಗು ಬಿದ್ದಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಮಗು ಸಾವನ್ನಪ್ಪಿದೆ. ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಟ್ಟಡದ ನಿರ್ಮಾಣ ಕೆಲಸಕ್ಕೆ ವಲಸೆ ಕಾರ್ಮಿಕರಾಗಿ ಬಂದಿರುವ ಪೋಷಕರು ಕಟ್ಟಡ ಬಳಿ ಶೆಡ್ ನಿರ್ಮಾಣ ಮಾಡಿಕೊಂಡು ವಾಸವಿದ್ದರು. ಆಟವಾಡುತ್ತ ಲಿಫ್ಟ್​ ಬಳಿ ತೆರಳಿದ ಮಗು ಆಯ ತಪ್ಪಿ ಬಿದ್ದಿದೆ. ತಕ್ಷಣ ತೀವ್ರವಾಗಿ‌ ಗಾಯಗೊಂಡಿದ್ದ ಮಗುವನ್ನ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ‌ ಮಗು ಸಾವನ್ನಪ್ಪಿದೆ.

ಮಗುವಿನ ತಂದೆ-ತಾಯಿ ಮೂಲತಃ ಕೊಪ್ಪಳ ಜಿಲ್ಲೆಯವರಾಗಿದ್ದಾರೆ. ರಮೇಶ್ ಎಂಬುವವರಿಗೆ ಸೇರಿದ ಕಟ್ಟಡ ಇದಾಗಿದ್ದು, ಮಾಲೀಕನ ವಿರುದ್ಧ ಐಪಿಸಿ ಸೆಕ್ಷನ್ 304(ಎ) ಅಡಿ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated :Oct 30, 2020, 2:32 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.