ETV Bharat / state

ಬೆಂಗಳೂರು ಗ್ರಾ. ಜಿಲ್ಲೆಯ 4 ಕ್ಷೇತ್ರಗಳಲ್ಲಿ 33 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

author img

By

Published : Apr 21, 2023, 8:40 AM IST

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲಿ 33 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

candidates filed nominations
ನಾಮಪತ್ರ ಸಲ್ಲಿಸಿಸುತ್ತಿರುವ ಅಭ್ಯರ್ಥಿಗಳು

ದೇವನಹಳ್ಳಿ(ಬೆಂಗಳೂರು ಗ್ರಾ.): ಕರ್ನಾಟಕ ವಿಧಾನಸಭಾ ಚುನಾವಣೆ-2023 ಏ.13 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಕೊನೆಯ ದಿನವಾದ ಗುರುವಾರ(ಏ.20) ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ 33 ಅಭ್ಯರ್ಥಿಗಳಿಂದ ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಮಾಹಿತಿ ನೀಡಿದರು.

ಜಿಲ್ಲೆಯ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 13 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಎಎಪಿ ಪಕ್ಷದ ಅಭ್ಯರ್ಥಿಯಾಗಿ ಪ್ರಶಾಂತ್ ಸುಬ್ರಮಣಿ, ಬಿ.ಎಸ್.ಪಿ ಪಕ್ಷದಿಂದ ಡಿ.ಎಂ ಲಕ್ಷ್ಮಿನಾರಾಯಣ, ಪಕ್ಷೇತರ ಅಭ್ಯರ್ಥಿಗಳಾಗಿ ಜಿ.ನಾರಾಯಣಸ್ವಾಮಿ, ಅನುಷ.ಪಿ ಆರ್, ಈರೇಗೌಡ, ಅಂಬುಜ, ನವೀನ್ ಕುಮಾರ್.ಎಸ್.ಆರ್, ಜಿ.ಅಶೋಕ್, ಸುರೇಶ್.ಕೆ, ಟಿ.ನಾಗರಾಜು ಹಾಗೂ ಇತರೆ ಪಕ್ಷಗಳಿಂದ ಬಿ. ಸೊಣ್ಣಪ್ಪ, ಶರತ್ ಬಚ್ಚೇಗೌಡ, ರಮೇಶ ನಾಮಪತ್ರ ಸಲ್ಲಿಸಿದ್ದಾರೆ.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 07 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್​ನಿಂದ ನಾರಾಯಣ ಸ್ವಾಮಿ ಎಲ್.ಎನ್, ಪಕ್ಷೇತರ ಅಭ್ಯರ್ಥಿಗಳಾಗಿ ನಾರಾಯಣಸ್ವಾಮಿ, ವಿ.ಮಂಜುನಾಥ್, ಕೆ.ಮುನಿಯಪ್ಪ, ನಿಸರ್ಗ.ವಿ, ಶಿವಪ್ಪ ಹಾಗೂ ಇತರೆ ಪಕ್ಷದಿಂದ ಡಾ. ಎಂ.ವೆಂಕಟಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ 08 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಬಿ.ಎಸ್.ಪಿ ಪಕ್ಷದಿಂದ ಬಿ.ಎಲ್.ಪಿಳ್ಳಪ್ಪ, ಜೆಡಿಎಸ್​​ನಿಂದ ಬಿ.ಮುನೇಗೌಡ, ಬಿಜೆಪಿಯಿಂದ ಧೀರಜ್ ಮುನಿರಾಜ್, ಐಎನ್​​ಸಿ ಪಕ್ಷದಿಂದ ಟಿ.ವೆಂಕಟರಮಣಯ್ಯ, ಸ್ವತಂತ್ರ ಅಭ್ಯರ್ಥಿಗಳಾಗಿ ಆನಂದಮೂರ್ತಿ.ಜೆ ಇಬ್ರಾಹಿಂ ಷರೀಫ್ ತೂಬಗೆರೆ ಷರೀಫ್, ಇತರೆ ಪಕ್ಷದಿಂದ ಬಿ.ಶಿವಶಂಕರ್, ಗಂಗಮ್ಮ.ಎಂ ನಾಮಪತ್ರ ಸಲ್ಲಿಸಿದ್ದಾರೆ.

ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 05 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಬಿಎಸ್​​​ಪಿ ಪಕ್ಷದಿಂದ ಬಿ.ಎಂ.ಮಹದೇವ್, ಬಿಜೆಪಿಯಿಂದ ಸಪ್ತಗಿರಿ ಮೇಘಾವತ್ ಶಂಕರ್ ನಾಯಕ್, ಪಕ್ಷೇತರ ಅಭ್ಯರ್ಥಿಗಳಾಗಿ ಉಮಾದೇವಿ, ಶ್ರೀನಿವಾಸ್.ವಿ, ಅರುಣ್ ಕುಮಾರ್.ಬಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

76 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ: ಚಾಮರಾಜನಗರ ಜಿಲ್ಲೆಯಲ್ಲಿ ಒಟ್ಟು 76 ಅಭ್ಯರ್ಥಿಗಳಿಂದ 104 ನಾಮಪತ್ರಗಳು ಸಲ್ಲಿಕೆಯಾಗಿವೆ. ಹನೂರು ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ಪ್ರಜಾ ಪಾರ್ಟಿ (ರೈತ ಪರ್ವ) ಅಭ್ಯರ್ಥಿಯಾಗಿ ಜಿ. ಮುರುಗೇಶನ್, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಹರೀಶ್.ಕೆ., ಜಾತ್ಯತೀತ ಜನಾತಾದಳ ಅಭ್ಯರ್ಥಿಯಾಗಿ ಎಂ.ಆರ್.ಮಂಜುನಾಥ್, ಬಹುಜನ ಸಮಾಜ ಪಾರ್ಟಿ ಅಭ್ಯರ್ಥಿಯಾಗಿ ಮಾದೇಶ.ಎಂ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಡಾ.ಪ್ರೀತನ್. ಕೆ.ಎನ್, ಪಕ್ಷೇತರ ಅಭ್ಯರ್ಥಿಯಾಗಿ ಸಿ. ಸಿದ್ದಾರ್ಥನ್ ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಚಾಮರಾಜನಗರದ 4 ಕ್ಷೇತ್ರಗಳಲ್ಲಿ 76 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಒಟ್ಟು 5102 ಉಮೇದುವಾರಿಕೆ ಸಲ್ಲಿಕೆ: ಏ.13ರಿಂದ ನಾಮಪತ್ರ ಸಲ್ಲಿಕೆಯ ಕೊನೆ ದಿನವಾದ ಗುರುವಾರದವರೆಗೆ ಒಟ್ಟು 5,102 ನಾಮಪತ್ರ ಸಲ್ಲಿಕೆಯಾಗಿವೆ. ಒಟ್ಟು 3,632 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ. ಈ ಪೈಕಿ 3,327 ಪುರುಷ ಅಭ್ಯರ್ಥಿಗಳಿಂದ 4,710 ನಾಮಪತ್ರ ಸಲ್ಲಿಕೆಯಾಗಿದೆ. ಇನ್ನು 304 ಮಹಿಳಾ ಅಭ್ಯರ್ಥಿಗಳಿಂದ 391 ನಾಮಪತ್ರ ಸಲ್ಲಿಕೆ ಮಾಡಲಾಗಿದೆ. ಇತರೆಯಿಂದ ಒಂದು ನಾಮಪತ್ರ ಸಲ್ಲಿಸಲಾಗಿದೆ.

ಇದನ್ನೂ ಓದಿ: ಕೊನೆಯ ದಿನ ನಾಮಪತ್ರ ಜಾತ್ರೆ: ಗುರುವಾರ 1934 ಸೇರಿ ಒಟ್ಟು 5102 ಉಮೇದುವಾರಿಕೆ ಸಲ್ಲಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.