ETV Bharat / state

ರಾಜ್ಯ ಸರಕಾರಿ ನೌಕರರಿಗೆ ಕಾಂಗ್ರೆಸ್ ಸರಕಾರದ ಮೊದಲ ಕೊಡುಗೆ: ಶೇ.4 ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಆದೇಶ ಜಾರಿ

author img

By

Published : May 30, 2023, 5:33 PM IST

ತುಟ್ಟಿ ಭತ್ಯೆ ಹೆಚ್ಚಳ ಮಾಡುವ ಕಡತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 24 ರಂದು ಸಹಿ ಹಾಕಿದ್ದಾರೆ.

Vidhanasoudha
ವಿಧಾನಸೌಧ

ಬೆಂಗಳೂರು: ರಾಜ್ಯ ಸರಕಾರಿ ನೌಕರರಿಗೆ ಶೇಕಡಾ ನಾಲ್ಕರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರಕಾರ ಆದೇಶ ಮಾಡಿದೆ. ಮೂಲ ವೇತನದ ಡಿಎ ಯನ್ನು ಶೇಕಡ 31 ರಿಂದ 35 ಕ್ಕೆ ಹೆಚ್ಚಳ ಮಾಡಿ ಹಣಕಾಸು ಇಲಾಖೆ ಇಂದೇ ಆದೇಶ ಹೊರಡಿಸಿದೆ. ಹೊಸದಾಗಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಸರ್ಕಾರಿ ನೌಕರರು ಹಲವು ದಿನಗಳ ಬೇಡಿಕೆಯನ್ನು ಈಡೇರಿಸಿದ್ದು, ಇದೀಗ 2023 ಜನವರಿ 1 ರಿಂದ ಜಾರಿಗೆ ಬರುವಂತೆ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

  • 2023 ಜನವರಿ 1 ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇಕಡಾ 31ರಿಂದ 35ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
    - ಮುಖ್ಯಮಂತ್ರಿ @siddaramaiah pic.twitter.com/C5wnY9ujjF

    — CM of Karnataka (@CMofKarnataka) May 30, 2023 " class="align-text-top noRightClick twitterSection" data=" ">

ಕಳೆದ ವಾರ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಸರ್ಕಾರ ರಚನೆ ಆಗಿ ಕೆಲವೇ ದಿನಗಳಲ್ಲಿ ರಾಜ್ಯದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದೆ. ಕಳೆದ ಒಂದು ತಿಂಗಳಿನಿಂದ ನೌಕರರು ಎದುರು ನೋಡುತ್ತಿದ್ದ, ತುಟ್ಟಿ ಭತ್ಯೆ ಹೆಚ್ಚಳ ಮಾಡುವ ಕಡತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 24 ರಂದೇ ಸಹಿ ಹಾಕಿದ್ದರು. ಕೇಂದ್ರ ಸರ್ಕಾರದಂತೆ ರಾಜ್ಯದಲ್ಲೂ ಶೇ 4 ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡುವ ಕಡತವನ್ನು ಪರಿಶೀಲಿಸಿ ಸಿದ್ದರಾಮಯ್ಯ ಸಹಿ ಹಾಕಿದ್ದರು.

ಕಾಂಗ್ರೆಸ್ ಸರಕಾರ ಸರಕಾರಿ ನೌಕರರಿಗೆ ನೀಡಿರುವ ಮೊದಲ ಕೊಡುಗೆ ಇದಾಗಿದೆ. ಜನವರಿ 1 ನೇ ತಾರೀಖಿನಿಂದ ಅನ್ವಯವಾಗುವಂತೆ ಎಲ್ಲಾ ರಾಜ್ಯ ಸರಕಾರಿ ನೌಕರರು ಮತ್ತು ನಿವೃತ್ತಿ ಸರಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ. 4 ರಷ್ಟು ಪರಿಷ್ಕರಣೆಯಾಗಿ ಜಾರಿಗೆ ಬರಲಿದೆ. ಸರಕಾರಿ ನೌಕರರ ತುಟ್ಟಿ ಭತ್ಯೆ ಏರಿಕೆ ಮಾಡಿರುವ ಬಗ್ಗೆ ಹಣಕಾಸು ಇಲಾಖೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಟ್ವೀಟ್ ನಲ್ಲಿ ಸರಕಾರದ ಈ ಆದೇಶವನ್ನು ಹಂಚಿಕೊಂಡಿದ್ದಾರೆ.

ಸಿದ್ದರಾಮಯ್ಯ ಟ್ವೀಟ್​​ನಲ್ಲಿ ಏನು ಹೇಳಿದ್ದಾರೆ: ’’2023 ಜನವರಿ 1 ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇಕಡಾ 31ರಿಂದ 35ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ‘‘ ಎಂದು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು ಸಿಎಂ ಆಫ್​ ಕರ್ನಾಟಕ ಟ್ವಿಟರ್​ ಅಕೌಂಟ್​ನಿಂದ ಟ್ವೀಟ್​ ಮಾಡಿ ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಡಿಎ ಹೆಚ್ಚಳಕ್ಕೆ ಆಗ್ರಹಿಸಿ ಪಶ್ಚಿಮ ಬಂಗಾಳ ಸರ್ಕಾರಿ ನೌಕರರ ಪ್ರತಿಭಟನೆ.. VIDEO

ETV Bharat Logo

Copyright © 2024 Ushodaya Enterprises Pvt. Ltd., All Rights Reserved.