ETV Bharat / state

ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು: ಸಿಸಿಟಿವಿಯಲ್ಲಿ ಸೆರೆಯಾಯ್ತು ಸ್ಕೂಟರ್​ ಎಳೆದುಕೊಂಡು ಹೋದ ದೃಶ್ಯ

author img

By ETV Bharat Karnataka Team

Published : Oct 6, 2023, 11:10 AM IST

Updated : Oct 6, 2023, 12:47 PM IST

ಯೂಟರ್ನ್ ತೆಗೆದುಕೊಳ್ಳುತ್ತಿದ್ದ ಸ್ಕೂಟರ್​ಗೆ ಡಿಕ್ಕಿ ಹೊಡೆದ ಕಾರೊಂದು ಸ್ಕೂಟರ್ ಅನ್ನು ಕಿ.ಮೀ ದೂರ ಎಳೆದುಕೊಂಡು ಹೋದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

car accident
ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು

ಸಿಸಿಟಿವಿಯಲ್ಲಿ ಸೆರೆಯಾಯ್ತು ಸ್ಕೂಟರ್​ ಎಳೆದುಕೊಂಡು ಹೋದ ದೃಶ್ಯ

ಯಲಹಂಕ (ಬೆಂಗಳೂರು): ಹೊಂಡಾ ಆಕ್ಟಿವಾ ಸವಾರನೊಬ್ಬ ಯೂಟರ್ನ್ ತೆಗೆದುಕೊಳ್ಳುವಾಗ ಅತೀ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದು, ಸ್ಕೂಟರ್ ಅನ್ನು ಕಿಲೋ ಮೀಟರ್​ ದೂರ ಎಳೆದುಕೊಂಡು ಹೋಗಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ. ಅಪಘಾತದ ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಯಲಹಂಕದ ಕೋಗಿಲು ಮುಖ್ಯ ರಸ್ತೆಯ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಘಟನೆ ನಡೆದಿದ್ದು, ಭೀಕರ ಅಪಘಾತದಲ್ಲಿ 33 ವರ್ಷದ ಬೆಂಗಳೂರಿನ ಮಂಜುನಾಥ್ ಎಂಬುವರು ಸಾವನ್ನಪ್ಪಿದ್ದಾರೆ. ಸೆಪ್ಟೆಂಬರ್ 22 ರ ರಾತ್ರಿ 12:40 ರ ಸುಮಾರಿಗೆ ಮಂಜುನಾಥ್ ತಮ್ಮ ಹೊಂಡಾ ಆ್ಯಕ್ಟಿವಾ ಸ್ಕೂಟರ್ ಅನ್ನು ಯೂಟರ್ನ್ ತೆಗೆದುಕೊಳ್ಳುತ್ತಿದ್ದರು. ಈ ವೇಳೆ, ಕೋಗಿಲು ಗ್ರಾಮದಿಂದ ಅತಿ ವೇಗವಾಗಿ ಬಂದ ಟೊಯೊಟಾ ಇನೋವಾ ಕಾರು ಚಾಲಕ, ಮಂಜುನಾಥ್ ಅವರ ಸ್ಕೂಟರ್​ಗೆ ಡಿಕ್ಕಿ ಹೊಡೆದಿದ್ದಾನೆ, ಬಳಿಕ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಇತರ ಬೈಕ್​ಗಳಿಗೂ ಗುದ್ದಿದ್ದಾನೆ.

ಮಂಜುನಾಥ್ ಅವರ ಸ್ಕೂಟರ್ ಅನ್ನು ಕಾರಿನ ಜೊತೆಯಲ್ಲೇ ಕಿ.ಮೀ ದೂರ ಎಳೆದುಕೊಂಡು ಹೋಗಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಮಾರ್ಗ ಮಧ್ಯ ಸಾವನ್ನಪ್ಪಿದ್ದಾರೆ. ಅಪಘಾತದ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬೆಚ್ಚಿ ಬೀಳುವಂತಿದೆ. ಈ ಕುರಿತು ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಕಾರಿಗೆ ನಾಯಿ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದ ಆರೋಪ: ಸರ್ಕಾರಿ ಆಸ್ಪತ್ರೆ ವೈದ್ಯನ ವಿರುದ್ಧ ಪ್ರಕರಣ

ಲಾರಿ ಕಾರಿನ ಮಧ್ಯೆ ಭೀಕರ ಅಪಘಾತ : ಕಳೆದ ಮೂರು ದಿನಗಳ ಹಿಂದೆ ಕಾರು ಮತ್ತು ಲಾರಿ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿ ಮಹಿಳೆ ಹಾಗೂ ಮಗು ಸ್ಥಳದಲ್ಲೇ ಸಜೀವ ದಹನಗೊಂಡು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೈಸ್​ ರಸ್ತೆಯ ಸೋಂಪುರ ಕ್ಲೋವರ್​ ಲೀಪ್​ ಬಳಿ ನಡೆದಿತ್ತು. ಹಾಗೆಯೇ, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮತ್ತೊಂದು ಮಗು ಕೂಡ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿತ್ತು.

ಇದನ್ನೂ ಓದಿ : ಬೆಂಗಳೂರು ಟೋಲ್​​​ಗೇಟ್​ ಅಪಘಾತ : ಪ್ರಶ್ನಿಸಿದ್ದಕ್ಕೆ ಬೈಕ್​ನಲ್ಲಿ ಎಳೆದುಕೊಂಡು ಹೋದ ಸವಾರ

ಗಂಡ - ಹೆಂಡತಿ ಹಾಗೂ ಇಬ್ಬರು ಮಕ್ಕಳು ಪ್ರಯಾಣಿಸುತ್ತಿದ್ದಾಗ ದುರಂತ ಸಂಭವಿಸಿದೆ. ಬಾಡಿಗೆ ಕಾರು ಪಡೆದಿದ್ದ ದಂಪತಿ ಇಬ್ಬರು ಮಕ್ಕಳೊಂದಿಗೆ ನಾಗಸಂದ್ರಕ್ಕೆ ತೆರಳಿದ್ದರು. ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಮಾರ್ಗವಾಗಿ ತೆರಳುತಿದ್ದಾಗ ಕಾರು ನಿಯಂತ್ರಣ ತಪ್ಪಿ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಬೆಳಗಿನ ಜಾವ ಸುಮಾರು 2.50ರ ಹೊತ್ತಿಗೆ ಅಪಘಾತ ಸಂಭವಿಸಿತ್ತು.

ಇದನ್ನೂ ಓದಿ : ಬೆಂಗಳೂರಲ್ಲಿ ಲಾರಿ - ಕಾರಿನ ಮಧ್ಯೆ ಭೀಕರ ಅಪಘಾತ: ತಾಯಿ - ಮಗು ಸಜೀವ ದಹನ, ತಂದೆ - ಮತ್ತೋರ್ವ ಮಗುವಿಗೆ ಗಂಭೀರ ಗಾಯ

Last Updated : Oct 6, 2023, 12:47 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.