ETV Bharat / state

ಬೆಂಗಳೂರು ರಸ್ತೆಯಲ್ಲಿ ಮೈಗೆ ಮೈ ತಾಗಿಸಿ ಬಾಲಕಿಗೆ ಲೈಂಗಿಕ ದೌರ್ಜನ್ಯ.. ಕಾಮುಕನಿಗೆ 3 ವರ್ಷ ಜೈಲೂಟ

author img

By

Published : Sep 13, 2022, 2:26 PM IST

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ವ್ಯಕ್ತಿಗೆ ನಗರದ 1ನೇ ತ್ವರಿತಗತಿಯ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ, 10 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶಿಸಿದೆ.

ಕೋರ್ಟ್​
ಕೋರ್ಟ್​

ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಪ್ರಾಪ್ತೆಯ ದೇಹವನ್ನು ಸ್ಪರ್ಶಿಸುವ ಮೂಲಕ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದ. ಇದೀಗ ಅಪರಾಧಿ ಟಿ.ಕಾಂತರಾಜುಗೆ 3 ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸಿ, ನಗರದ 1ನೇ ತ್ವರಿತಗತಿಯ ನ್ಯಾಯಾಲಯ ಆದೇಶ ನೀಡಿದೆ.

ಘಟನೆ ಹಿನ್ನೆಲೆ: ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಕೆ. ಎನ್. ರೂಪ ಅವರು ಆರೋಪಿಗೆ ಈ ಶಿಕ್ಷೆ ವಿಧಿಸಿದ್ದಾರೆ. 2019ರ ಆಗಸ್ಟ್ 14ರಂದು ನಗರದ ಚಿಕ್ಕಕಲ್ಲುಸಂದ್ರದ ವಾಟರ್ ಟ್ಯಾಂಕ್ ಬಳಿ ತಾಯಿಯೊಂದಿಗೆ ಬಾಲಕಿ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ ಎದುರಿಗೆ ಬಂದಿದ್ದ ಅಪರಾಧಿ ಕಾಂತರಾಜು ಬಾಲಕಿಯ ಮೈಗೆ ಮೈ ತಾಗಿಸಿ ಲೈಂಗಿಕ ದೌರ್ಜನ್ಯ ನಡೆಸಿದ್ದ.

ಈ ವೇಳೆ ಸ್ಥಳದಲ್ಲಿದ್ದ ಹೊಯ್ಸಳ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದರು. ನಂತರ ಸಂತ್ರಸ್ತ ಬಾಲಕಿಯ ಪೋಷಕರು ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಪೋಕ್ಸೋ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.

ಇದನ್ನೂ ಓದಿ: ತರಗತಿಯಲ್ಲೇ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; ಕಣ್ಣೂರಿನ ಶಿಕ್ಷಕನಿಗೆ 79 ವರ್ಷ ಕಠಿಣ ಜೈಲು ಶಿಕ್ಷೆ

ವಿಚಾರಣೆ ನಡೆಸಿದ ನ್ಯಾಯಾಧೀಶರು ಶಿಕ್ಷೆ ಮತ್ತು ದಂಡವನ್ನು ಕಟ್ಟುವಂತೆ ಆದೇಶಿಸಿದ್ದಾರೆ. ಅಲ್ಲದೇ ಸಂತ್ರಸ್ತ ಬಾಲಕಿಗೆ ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ 25 ಸಾವಿರ ರೂ. ಪರಿಹಾರವನ್ನು ನೀಡಲು ನಿರ್ದೇಶಿಸಿದೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ಪಿ. ಕೃಷ್ಣವೇಣಿ ಅವರು ವಾದ ಮಂಡಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.