ETV Bharat / state

ದೊಡ್ಡಗೌಡ್ರ ಕುಟುಂಬದ ವಿರುದ್ಧ ಅವಹೇಳಕಾರಿ ಪೋಸ್ಟ್ ಪ್ರಕರಣ : ತೀರ್ಪು ಕಾಯ್ದಿರಿಸಿದ ಹೈಕೋರ್ಟ್

author img

By

Published : Jul 12, 2019, 3:53 AM IST

ಎಚ್.ಡಿ.ದೇವೇಗೌಡ

ಫೇಸ್‌ಬುಕ್​ ನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ ವಿಚಾರವಾಗಿ ಟ್ರೋಲ್ ಮಗಾ ಫೇಸ್‌ಬುಕ್ ಪೇಜ್​ನ ಅಡ್ಮಿನ್​ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿ ತೀರ್ಪನ್ನು ಕಾಯ್ದಿರಿಸಿದೆ.

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದ ವಿರುದ್ಧ ಫೇಸ್‌ಬುಕ್‌ ನಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ ವಿಚಾರವಾಗಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಟ್ರೋಲ್ ಮಗಾ ಫೇಸ್‌ಬುಕ್ ಪುಟದ ಅಡ್ಮಿನ್ ಎಸ್.ಜೈಕಾಂತ್ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಎರಡು ಕಡೆಯ ವಾದ ಆಲಿಸಿ ಆದೇಶವನ್ನು ಕಾಯ್ದಿರಿಸಿದೆ.

ಈ ಕುರಿತು ಎಸ್. ಜೈಕಾಂತ್ ಅವರು ಪ್ರಕರಣ ರದ್ದುಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಪಿ.ಎಸ್. ದಿನೇಶ್‌ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಸಲಾಯಿತು . ಅರ್ಜಿದಾರರ ಪರ ವಾದಿಸಿದ ವಕೀಲ ಎಂ. ಅರುಣ್ ಶ್ಯಾಮ್ , ದೇವೇಗೌಡರ ಕುಟುಂಬದ ವಿರುದ್ಧ ಫೇಸ್‌ಬುಕ್ ಪೇಜ್‌ನಲ್ಲಿ ಅವಹೇಳಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎಂದು ಪೊಲೀಸರು ಒಂದೇ ವಿಷಯದ ಪೋಸ್ಟರ್‌ಗೆ ಎರಡು ಎಫ್ಐಆರ್ ದಾಖಲಿಸಿ, ಕಾನೂನನ್ನು ಉಲ್ಲಂಘಿಸಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.

ಸರ್ಕಾರದ ಪರ ವಾದಿಸಿದ ಅಡ್ವೊಕೇಟ್ ಜನರಲ್ ಉದಯ ಹೊಳ್ಳ, ದೇವೇಗೌಡ ಅವರ ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆಯ ಪೋಸ್ಟ್ ಅನ್ನು ಎರಡು ಬಾರಿ ಹಾಕಿದ್ದರಿಂದ ಎರಡು ಪ್ರತ್ಯೇಕ ಎಫ್ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಆದೇಶವನ್ನು ಕಾಯ್ದಿರಿಸಿದೆ.

Intro:nullBody:ಮಾಜಿ ಪ್ರಧಾನಿ ಎಚ್ ಡಿಡಿ ಕುಟುಂಬದ ವಿರುದ್ಧ ಅವಹೇಳಕಾರಿ ಪೋಸ್ಟ್ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದ ವಿರುದ್ಧ ಫೇಸ್‌ಬುಕ್‌ ನಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ ವಿಚಾರವಾಗಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಟ್ರೋಲ್ ಮಗಾ ಫೇಸ್‌ಬುಕ್ ಪುಟದ ಅಡ್ಮಿನ್ ಎಸ್.ಜೈಕಾಂತ್ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಎರಡು ಕಡೆಯ ವಾದ ಆಲಿಸಿ ಆದೇಶವನ್ನು ಕಾಯ್ದಿರಿಸಿದೆ.
ಈ ಕುರಿತು ಎಸ್.ಜೈಕಾಂತ್ ಅವರು ಪ್ರಕರಣ ರದ್ದುಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು.
ಅರ್ಜಿದಾರರ ಪರ ವಾದಿಸಿದ ವಕೀಲ ಎಂ.ಅರುಣ್ ಶ್ಯಾಮ್ ಅವರು, ದೇವೇಗೌಡ ಅವರ ಕುಟುಂಬದ ವಿರುದ್ಧ ಫೇಸ್‌ಬುಕ್ ಪೇಜ್‌ನಲ್ಲಿ ಅವಹೇಳಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎಂದು ಪೊಲೀಸರು ಒಂದೇ ವಿಷಯದ ಪೋಸ್ಟರ್‌ಗೆ ಎರಡು ಎಫ್ಐಆರ್ ದಾಖಲಿಸಿ, ಕಾನೂನನ್ನು ಉಲ್ಲಂಘಿಸಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.
ಸರ್ಕಾರದ ಪರ ವಾದಿಸಿದ ಅಡ್ವೊಕೇಟ್ ಜನರಲ್ ಉದಯ ಹೊಳ್ಳ ಅವರು, ದೇವೇಗೌಡ ಅವರ ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆಯ ಪೋಸ್ಟ್ ಅನ್ನು ಎರಡು ಬಾರಿ ಹಾಕಿದ್ದರಿಂದ ಎರಡು ಪ್ರತ್ಯೇಕ ಎಫ್ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಆದೇಶವನ್ನು ಕಾಯ್ದಿರಿಸಿತು.

.Conclusion:null

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.