ETV Bharat / state

ದೇವಸ್ಥಾನಕ್ಕೆ‌ ಕರೆದೊಯ್ಯುವ ನೆಪದಲ್ಲಿ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಇಬ್ಬರ ಬಂಧನ

author img

By

Published : Sep 1, 2022, 10:09 PM IST

Updated : Sep 1, 2022, 10:38 PM IST

ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇರೆಗೆ ಖಾಸಗಿ ಸುದ್ದಿವಾಹಿನಿ ಕಾರು ಚಾಲಕ ಮತ್ತು ಆತನ ಸ್ನೇಹಿತನನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಬಾಲಕಿ
ಬಾಲಕಿ

ಬೆಂಗಳೂರು: ದೇವಾಲಯಕ್ಕೆ ಕರೆದುಕೊಂಡು ಹೋಗುವ ಸೋಗಿನಲ್ಲಿ 15 ವರ್ಷದ ಬಾಲಕಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಖಾಸಗಿ ಸುದ್ದಿವಾಹಿನಿ ಕಾರು ಚಾಲಕ ಮತ್ತು ಆತನ ಸ್ನೇಹಿತನನ್ನು ವಿಲ್ಸನ್ ಗಾರ್ಡನ್ ಪೊಲೀಸರು ಬಂಧಿಸಿದ್ದಾರೆ.

ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ಅವರು ಮಾತನಾಡಿದರು

ಸುದ್ದಿವಾಹಿನಿ ಚಾಲಕ ಮನೋಜ್ ಮತ್ತು ಆತನ ಗೆಳೆಯ ಸುರೇಶ್ (25) ಬಂಧಿತರು. ವಿಲ್ಸನ್ ಗಾರ್ಡನ್‌ನಲ್ಲಿ ನೆಲೆಸಿದ್ದ ಮಂಡ್ಯ ಜಿಲ್ಲೆ ಮನೋಜ್, ಖಾಸಗಿ ಸುದ್ದಿವಾಹಿನಿಯಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ. ಆತನಿಗೆ ಸುರೇಶ್ ಬಹಳ ವರ್ಷಗಳಿಂದ ಸ್ನೇಹಿತ. ಈ ನಡುವೆ ಖಾಸಗಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಬಾಲಕಿಯನ್ನು ಪರಿಚಯ ಮಾಡಿಕೊಂಡಿದ್ದ ಮನೋಜ್, ಆ. 26ರಂದು ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕಬ್ಬಾಳಮ್ಮ ದೇವಾಲಯಕ್ಕೆ ಪ್ರವಾಸ ಕರೆದುಕೊಂಡು ಹೋಗುವುದಾಗಿ ಹೇಳಿದ್ದ.

ಈ ಮಾತು ನಂಬಿದ ಆಕೆ ತನ್ನ ತಂದೆಗೆ ಸ್ನೇಹಿತೆ ಮನೆಗೆ ಪ್ರಾಜೆಕ್ಟ್ ವರ್ಕ್ ಇದೆ ಎಂದು ಹೇಳಿ ಮನೆಯಿಂದ ಹೊರ ಬಂದಿದ್ದಳು. ಕನಕಪುರಕ್ಕೆ ತೆರಳದೇ ಬಾಲಕಿಯನ್ನು ಬನ್ನೇರುಘಟ್ಟ ಕಡೆ ಸುತ್ತಾಡಿಸಿ ಮನೆಯೊಂದಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದರು. ಮಗಳು ಸಂಜೆ ಆದರೂ ಮನೆಗೆ ಬಾರದೆ ಇದ್ದಾಗ ಭಯಗೊಂಡು ಪಾಲಕರು, ವಿಲ್ಸನ್ ಗಾರ್ಡನ್ ಠಾಣೆಗೆ ದೂರು ಸಲ್ಲಿಸಿದರು.

ಅಪಹರಣ ಆರೋಪದಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡು ಬಾಲಕಿಯನ್ನು ಪತ್ತೆ ಮಾಡಿ ಕರೆತಂದು ವಿಚಾರಣೆ ನಡೆಸಿದ್ದಾರೆ. ನಂತರ ಆಕೆ ತನ್ನ ಮೇಲೆ ನಡೆದ ದೌರ್ಜನ್ಯ ಬಾಯ್ಬಿಟ್ಟಿದ್ದಾರೆ. ಈ ಮೇರೆಗೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಓದಿ: ಬೆಂಗಳೂರು: ಕೆಲಸ ಕೊಡಿಸುವುದಾಗಿ ನಂಬಿಸಿ ನಿವೃತ್ತ ಯೋಧನಿಗೆ ವಂಚನೆ

Last Updated : Sep 1, 2022, 10:38 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.