ETV Bharat / state

ಹೆಚ್​​ಡಿಕೆ ಬೆನ್ನಲ್ಲೇ ನಿಖಿಲ್​ ಕುಮಾರಸ್ವಾಮಿಗೂ ತಗುಲಿದ ಕೊರೊನಾ

author img

By

Published : Apr 17, 2021, 3:38 PM IST

ಮಾಜಿ ಸಿಎಂ ಕುಮಾರಸ್ವಾಮಿ ಅವರ ಪುತ್ರ ನಿಖಿಲ್​ ಕುಮಾರಸ್ವಾಮಿ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ.

nikil kumar swamy
ನಟ ನಿಖಿಲ್​ ಕುಮಾರಸ್ವಾಮಿಗೆ ಕೊರೊನಾ ದೃಢ

ಬೆಂಗಳೂರು: ಇಂದು ಬೆಳಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಕೊರೊನಾ ದೃಢಪಟ್ಟ ಬೆನ್ನಲ್ಲೇ ಅವರ ಪುತ್ರ ನಟ ನಿಖಿಲ್​ ಕುಮಾರಸ್ವಾಮಿ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ.

ಈ ಬಗ್ಗೆ ಟ್ವೀಟ್​ ಮಾಡಿರುವ ನಿಖಿಲ್​ ಕುಮಾರಸ್ವಾಮಿ, "ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ. ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ" ಎಂದು ಟ್ವೀಟ್​ ಮಾಡಿದ್ದಾರೆ.

  • ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ.

    — Nikhil Kumar (@Nikhil_Kumar_k) April 17, 2021 " class="align-text-top noRightClick twitterSection" data=" ">

ಅಲ್ಲದೇ ತಮ್ಮ ತಂದೆಗೆ ಕೋವಿಡ್​ ತಗುಲಿರುವ ಬಗ್ಗೆಯೂ ಟ್ವೀಟ್​ ಮಾಡಿದ್ದು, "ಮಾಜಿ‌ ಮುಖ್ಯಮಂತ್ರಿಗಳು ಹಾಗೂ ನನ್ನ ತಂದೆ ಕುಮಾರಸ್ವಾಮಿ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಈಗಾಗಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಮ್ಮೆಲ್ಲರ ಪ್ರೀತಿ ಮತ್ತು ದೇವರ ದಯೆಯಿಂದ ಆದಷ್ಟು ಬೇಗ ಗುಣಮುಖರಾಗಲಿದ್ದಾರೆ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿತೈಷಿಗಳಿಗೆ ಯಾವುದೇ ಆತಂಕ ಬೇಡ ಎಂದು ಮನವಿ ಮಾಡಿಕೊಳ್ಳುತ್ತೇನೆ" ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.