ETV Bharat / state

ಸೋಮವಾರ ಬೆಂಗಳೂರು ಶಾಸಕರ ಸರ್ವಪಕ್ಷ ಸಭೆ: ಜೂ.30ವರೆಗೆ ಆಸ್ತಿ ತೆರಿಗೆ ವಿನಾಯಿತಿ ವಿಸ್ತರಣೆ: ಡಿಕೆಶಿ

author img

By

Published : Jun 1, 2023, 7:08 PM IST

''ಬೆಂಗಳೂರು ಅಭಿವೃದ್ಧಿಗಾಗಿ ಹೇಗೆ ಹಣ ಸಂಗ್ರಹ ಮಾಡಬಹುದು. ಎಲ್ಲಿ ನ್ಯೂನ್ಯತೆಗಳಿವೆ. ತ್ಯಾಜ್ಯ ನಿರ್ವಹಣೆ, ರಸ್ತೆಗಳಲ್ಲಿ ಕಸ ಹಾಕುತ್ತಿರುವ ಬಗ್ಗೆ ಚರ್ಚೆ ಮಾಡಿದ್ದೇವೆ. ಇದನ್ನು ಹೇಗೆ ತಡೆಯಬಹುದು ಎಂದು ಸಲಹೆ ಪಡೆದಿದ್ದು, ಕಸದ ವಾಹನ ಟ್ರ್ಯಾಕ್ ಮಾಡುವುದು. ಕಸವನ್ನು ಎಲ್ಲೆಂದರಲ್ಲಿ ಎಸೆಯುವ ವಾಹನಗಳಿಗೆ ಯಾವ ರೀತಿ ದಂಡ ವಿಧಿಸಬೇಕು. ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ಮಾಡಿದ್ದೇನೆ'' ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

DK Shivakumar
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿದರು.

ಬೆಂಗಳೂರು: ''ಸರಿಯಾದ ಸಮಯಕ್ಕೆ ತೆರಿಗೆ ಕಟ್ಟಿದರೆ ನೀಡುವ ವಿನಾಯಿತಿಯನ್ನು ಜೂನ್ 30ರವರೆಗೆ ವಿಸ್ತರಣೆ ಮಾಡಲಾಗಿದೆ'' ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ನಗರದ ಮಾಜಿ ಮೇಯರ್​ಗಳ ಜೊತೆ ಸಭೆ ಮಾಡಿ ಬಳಿಕ ಮಾತನಾಡಿದ ಅವರು, ''ಸರಿಯಾದ ಸಮಯಕ್ಕೆ ತೆರಿಗೆ ಕಟ್ಟಿದರೆ, ನೀಡುವ ವಿನಾಯಿತಿಯನ್ನು ಜೂನ್ 30ರವರೆಗೆ ವಿಸ್ತರಣೆ ಮಾಡಲಾಗಿದೆ. ಈ ದಿನಾಂಕದ ಒಳಗಾಗಿ ವಾರ್ಷಿಕ ತೆರಿಗೆ ಪಾವತಿ ಮಾಡಿದರೆ ಶೇ.5ರಷ್ಟು ಮರುಪಾವತಿ ಮಾಡಲಾಗುವುದು'' ಎಂದರು.

ಇದನ್ನೂ ಓದಿ: ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ: ಗೇಟ್​ವರೆಗೂ ಬಂದು ಸ್ವಾಗತ ಕೋರಿದ ಯಡಿಯೂರಪ್ಪ

ಜೂನ್ 30ರವರೆಗೆ ಟ್ಯಾಕ್ಸ್ ಪೇ ಮಾಡುವವರಿಗೆ ಶೇ.5ರಷ್ಟು ಡಿಸ್ಕೌಂಟ್: ''ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ನಗರದ ಮಾಜಿ ಮೇಯರ್​ಗಳ ಜೊತೆಗೆ ಸಭೆ ಮಾಡಿ ಅವರ ಅಭಿಪ್ರಾಯ, ಸಲಹೆಗಳನ್ನು ಪಡೆದಿದ್ದೇನೆ. ಮಾಜಿ ಮೇಯರ್‌ಗಳು ನಮ್ಮ ಸರ್ಕಾರ ಬಂದಿದೆ. ಬೆಂಗಳೂರಿನ ಜನತೆಗೆ ಏನಾದ್ರೂ ಗಿಫ್ಟ್ ಕೊಡಿ ಅಂದ್ರು. ಅದಕ್ಕಾಗಿ ಮೇ 30ರವರೆಗೆ ಇದ್ದ ತೆರಿಗೆ ವಿನಾಯ್ತಿಯನ್ನು ಜೂನ್ 30ರವರೆಗೆ ವಿಸ್ತರಣೆ ಮಾಡಿದ್ದೇವೆ. ಜೂನ್ 30ರವರೆಗೆ ಟ್ಯಾಕ್ಸ್ ಪೇ ಮಾಡುವವರಿಗೆ ಶೇ.5ರಷ್ಟು ಡಿಸ್ಕೌಂಟ್ ಇರಲಿದೆ'' ಎಂದು ತಿಳಿಸಿದರು.

ಇದನ್ನೂ ಓದಿ: ತಮಿಳುನಾಡಿನವರಿಗೆ ಹೃದಯ ಶ್ರೀಮಂತಿಕೆ ಇರಲಿ: ಡಿಸಿಎಂ ಡಿ.ಕೆ.ಶಿವಕುಮಾರ್​

ಬೆಂಗಳೂರು ಅಭಿವೃದ್ಧಿಗಾಗಿ ಹೇಗೆ ಹಣ ಸಂಗ್ರಹಿಸಬೇಕು?: ''ಬೆಂಗಳೂರು ಅಭಿವೃದ್ಧಿಗಾಗಿ ಹೇಗೆ ಹಣ ಸಂಗ್ರಹ ಮಾಡಬಹುದು. ಎಲ್ಲಿ ನ್ಯೂನ್ಯತೆಗಳಿವೆ. ತ್ಯಾಜ್ಯ ನಿರ್ವಹಣೆ, ರಸ್ತೆಗಳಲ್ಲಿ ಕಸ ಹಾಕುತ್ತಿರುವ ಬಗ್ಗೆ ಚರ್ಚೆ ಮಾಡಿದ್ದೇವೆ. ಇದನ್ನು ಹೇಗೆ ತಡೆಯಬಹುದು ಎಂದು ಸಲಹೆ ಪಡೆದಿದ್ದು, ಕಸದ ವಾಹನ ಟ್ರ್ಯಾಕ್ ಮಾಡುವುದು. ಕಸವನ್ನು ಎಲ್ಲೆದರಲ್ಲಿ ಎಸೆಯುವ ವಾಹನಗಳಿಗೆ ಯಾವ ರೀತಿ ದಂಡ ವಿಧಿಸಬೇಕು. ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ಮಾಡಿದ್ದೇನೆ. ಸದಸ್ಯದಲ್ಲೇ ಇದನ್ನು ನಿಯಂತ್ರಿಸಲು ಯಾವ ಸೂಚನೆ ನೀಡಬೇಕು ಎಂದು ಅಧಿಕಾರಿಗಳ ಜೊತೆ ಸಭೆ ಮಾಡಿ ತೀರ್ಮಾನಿಸುತ್ತೇನೆ'' ಎಂದರು.

ಇದನ್ನೂ ಓದಿ: ಬಿಜೆಪಿ ಸರ್ಕಾರದ ಯೋಜನೆಗಳಿಗೆ ಅನುದಾನ ಕಡಿತ ಮಾಡಬೇಡಿ: ಸಿಎಂಗೆ ಮಾಜಿ ಸಿಎಂ ಪತ್ರ

ಬೆಂಗಳೂರು ಶಾಸಕರ ಸರ್ವಪಕ್ಷ ಸಭೆ: ಸೋಮವಾರ ಬೆಂಗಳೂರು ನಗರದ ಸರ್ವಪಕ್ಷ ಶಾಸಕರ ಸಭೆ ಕರೆದಿದ್ದು, ಅವರಿಂದಲೂ ಸಲಹೆಗಳನ್ನು ಪಡೆಯುತ್ತೇನೆ. ನಂತರ ನಮ್ಮ ಪಕ್ಷದ ಶಾಸಕರ ಜೊತೆ ಪ್ರತ್ಯೇಕ ಸಭೆ ಮಾಡುತ್ತೇನೆ ಎಂದು ಇದೇ ವೇಳೆ ತಿಳಿಸಿದರು. ಆ ಮೇಲೆ ನಮ್ಮ ಪಕ್ಷದ ಶಾಸಕರ‌ ಪ್ರತ್ಯೇಕ ಸಭೆ ಕರೆಯುತ್ತೇನೆ. ಎಲ್ಲರನ್ನು ವಿಶ್ವಾಸಕ್ಕೆ ಪಡೆಯಲು ಅದು ಆಂತರಿಕ ಸಭೆ ನಡೆಸುತ್ತೇನೆ ಎಂದು ತಿಳಿಸಿದರು‌. ಪಾಲಿಕೆ ವಾರ್ಡ್ ಮರುವಿಂಗಡಣೆ ಬಗ್ಗೆ ಕೇಳಿದ ಪ್ರಶ್ನೆಗೆ, ‘ಈ ವಿಚಾರವಾಗಿ ಚರ್ಚೆ ಮಾಡಿದ್ದು, ಇದಕ್ಕಾಗಿ ನೇಮಕ ಮಾಡಿರುವ ಸಮಿತಿ ಜೊತೆ ಚರ್ಚೆ ಮಾಡುತ್ತೇನೆ’ ಎಂದು ತಿಳಿಸಿದರು.

ಇದನ್ನೂ ಓದಿ: ಕಾಂಗ್ರೆಸ್ ಗ್ಯಾರಂಟಿಗಳನ್ನು ಜಾರಿಗೊಳಿಸದೇ ಇದ್ದಲ್ಲಿ ಬೀದಿಗಿಳಿದು ಹೋರಾಟ: ಕಟೀಲ್ ಎಚ್ಚರಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.