ETV Bharat / state

ಘಂಟೆ ಶಬ್ದ ಕಡಿಮೆ ಮಾಡುವಂತೆ ದೇವಾಲಯಕ್ಕೆ ಯಾವುದೇ ನೋಟಿಸ್​ ಬಂದಿಲ್ಲ: ಆನಂದ್ ಸಿಂಗ್ ಸ್ಪಷ್ಟನೆ

author img

By

Published : Feb 15, 2022, 8:56 PM IST

Updated : Feb 15, 2022, 9:05 PM IST

ಬೆಂಗಳೂರಿನ ಬಸವನಗುಡಿಯಲ್ಲಿರುವ ದೊಡ್ಡಗಣಪತಿ ದೇವಸ್ಥಾನದಲ್ಲಿ ಡೆಸಿಬಲ್ ಶಬ್ದಕ್ಕಿಂತ ಹೆಚ್ಚಿನ ಶಬ್ದ ಆಗುತ್ತಿರುವುದಕ್ಕೆ ನೋಟಿಸ್ ನೀಡಲಾಗಿದೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಯಾವುದೇ ನೋಟಿಸ್ ನೀಡಿಲ್ಲ ಎಂದಿದ್ದಾರೆ.

ಆನಂದ್ ಸಿಂಗ್ ಸ್ಪಷ್ಟನೆ
ಆನಂದ್ ಸಿಂಗ್ ಸ್ಪಷ್ಟನೆ

ಬೆಂಗಳೂರು: ದೊಡ್ಡ ಗಣಪತಿ ದೇವಾಲಯದಲ್ಲಿ ಗಂಟೆ ಶಬ್ದ ಕಡಿಮೆ ಮಾಡುವಂತೆ ಪರಿಸರ ಇಲಾಖೆಯಿಂದ ಯಾವುದೇ ನೋಟಿಸ್ ನೀಡಿಲ್ಲ ಎಂದು ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ಸಚಿವ ಆನಂದ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನ ಬಸವನಗುಡಿಯಲ್ಲಿರುವ ದೊಡ್ಡಗಣಪತಿ ದೇವಸ್ಥಾನದಲ್ಲಿ ಡೆಸಿಬಲ್ ಶಬ್ದಕ್ಕಿಂತ ಹೆಚ್ಚಿನ ಶಬ್ದ ಆಗುತ್ತಿರುವುದಕ್ಕೆ ನೋಟಿಸ್ ನೀಡಲಾಗಿದೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಯಾವುದೇ ನೋಟಿಸ್ ನೀಡಿಲ್ಲ. ಈ ಸಂಬಂಧ ಇಲಾಖೆಯ ಕಾರ್ಯದರ್ಶಿ ಅವರೊಂದಿಗೆ ಮಾತನಾಡಿದ್ದೇನೆ ಎಂದರು.

ಆನಂದ್ ಸಿಂಗ್ ಸ್ಪಷ್ಟನೆ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಬೆಂಗಳೂರು ದಕ್ಷಿಣ ಪ್ರಾದೇಶಿಕ ಕಚೇರಿಯಿಂದ ಯಾವುದೇ ಆದೇಶ ಹೊರಡಿಸಿಲ್ಲ. ಅಲ್ಲದೇ, ಪೊಲೀಸ್ ನೋಟಿಸ್‌ನಲ್ಲಿ ಉಲ್ಲೇಖಿಸಿರುವಂತೆ ಬೆಂಗಳೂರು ನಗರ ದಕ್ಷಿಣ ಪ್ರಾದೇಶಿಕ ಕಚೇರಿಯಿಂದ ಈ ರೀತಿಯ ಯಾವುದೇ ಪತ್ರವನ್ನು ನೀಡಿರುವುದಿಲ್ಲ ಎಂದು ಸಚಿವರು ತಿಳಿಸಿದರು.

ಸಂಬಂಧಿಸಿದ ಸುದ್ದಿ :ದೇವಸ್ಥಾನದಿಂದ ಕೇಳಿ ಬಂದ ಜೋರಾದ ಘಂಟೆಶಬ್ದ : ಪೊಲೀಸರಿಂದ ನೋಟಿಸ್

Last Updated : Feb 15, 2022, 9:05 PM IST

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.