ಎಸ್​ಸಿ-ಎಸ್​ಟಿ ಸಮುದಾಯದ ಕಲ್ಯಾಣಕ್ಕಾಗಿ 28 ಸಾವಿರ ಕೋಟಿ ರೂ. ಅನುದಾನ ಬಳಕೆಗೆ ಅನುಮೋದನೆ : ಸಿಎಂ ಬೊಮ್ಮಾಯಿ

author img

By

Published : May 20, 2022, 5:49 PM IST

CM

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಕಲ್ಯಾಣಕ್ಕಾಗಿ ಎಸ್‌ಸಿಪಿ, ಟಿಎಸ್​ಪಿಯ 28 ಸಾವಿರ ಕೋಟಿ ರೂ. ಅನುದಾನವನ್ನು ಈ ವರ್ಷ ಬಳಕೆ ಮಾಡಿಕೊಳ್ಳಲು ಅನುಮೋದನೆ ನೀಡಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು..

ಬೆಂಗಳೂರು : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ರಾಜ್ಯ ಅನುಸೂಚಿತ ಜಾತಿಗಳು, ಅನುಸೂಚಿತ ಪಂಗಡಗಳ ರಾಜ್ಯ ಅಭಿವೃದ್ಧಿ ಪರಿಷತ್ತು ಸಭೆ ನಡೆಯಿತು.

ಈ ಸಭೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಕಲ್ಯಾಣಕ್ಕಾಗಿ ಎಸ್‌ಸಿಪಿ, ಟಿಎಸ್​ಪಿಯ 28 ಸಾವಿರ ಕೋಟಿ ರೂ. ಅನುದಾನವನ್ನು, ಈ ವರ್ಷ ಬಳಕೆ ಮಾಡಿಕೊಳ್ಳಲು ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅನುದಾನ ಬಳಕೆ ಕುರಿತಂತೆ ನಡೆದ ಸಭೆ ಬಳಿಕ ಸಿಎಂ ಬೊಮ್ಮಾಯಿ ಮಾತನಾಡಿರುವುದು..

ಸಭೆ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ಸಮಾಜಕಲ್ಯಾಣ ಇಲಾಖೆಗೆ 500 ಕೋಟಿ ರೂ. ಹೆಚ್ಚುವರಿಯಾಗಿ ನೀಡಲಾಗುವುದು. ಕೃಷಿ ಇಲಾಖೆಗೆ 1,061 ಕೋಟಿ, ತೋಟಗಾರಿಕೆ ಇಲಾಖೆಗೆ 187 ಕೋಟಿ ರೂ., ಆರೋಗ್ಯ ಇಲಾಖೆಗೆ 1,300 ಕೋಟಿ ರೂ. ನೀಡಲು ಅನುಮೋದನೆ ನೀಡಲಾಗಿದೆ.

ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರು ರಾಜ್ಯದಲ್ಲಿ ಪ್ರವೇಶ ಮಾಡಿದ ತಾಣಗಳ ಅಭಿವೃದ್ಧಿಗೆ 20 ಕೋಟಿ ರೂ., ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಬಸ್ ಪಾಸ್ ಉಚಿತವಾಗಿ ನೀಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.

CM
ರಾಜ್ಯ ಅನುಸೂಚಿತ ಜಾತಿಗಳು, ಅನುಸೂಚಿತ ಪಂಗಡಗಳ ರಾಜ್ಯ ಅಭಿವೃದ್ಧಿ ಪರಿಷತ್ತು ಸಭೆ

ಸಹಕಾರ ಕ್ಷೇತ್ರದಲ್ಲಿ ಎಸ್ಸಿ-ಎಸ್ಟಿ ಸಮುದಾಯದವರಿಗೆ ಸದಸ್ಯತ್ವ ನೀಡಲು 203 ಕೋಟಿ ರೂ. ಹಾಗೂ ಕಂದಾಯ ಇಲಾಖೆಯಲ್ಲಿ ಪಿಂಚಣಿ ಹೆಚ್ಚಳಕ್ಕಾಗಿ 3,748 ಕೋಟಿ ರೂ. ವೆಚ್ಚಕ್ಕೆ ಅನುಮತಿಸಲಾಯಿತು.

ಕೌಶಲ್ಯಾಭಿವೃದ್ಧಿಗೆ 180 ಕೋಟಿ ರೂ. ನೀಡಲು ನಿರ್ಣಯಿಸಲಾಗಿದೆ. ನಿಗಮ ಮಂಡಳಿಗಳ ಅನುದಾನವನ್ನು ಹೆಚ್ಚಿಸಲು ಇನ್ನೊಂದು ವಾರದಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇದನ್ನೂ ಓದಿ: ಪಠ್ಯಪುಸ್ತಕದಿಂದ ನಾರಾಯಣ ಗುರುಗಳ ಸಂದೇಶ ಕೈಬಿಡಲ್ಲ, ವದಂತಿಗೆ ಕಿವಿಗೊಡಬೇಡಿ: ಕೋಟ ಸ್ಪಷ್ಟನೆ

ಅದೇ ರೀತಿ ಬಯಲು ಸೀಮೆ, ಕರಾವಳಿ ಅಭಿವೃದ್ಧಿ ಮಂಡಳಿ ಹಾಗೂ ಮಲೆನಾಡು ಅಭಿವೃದ್ಧಿ ಮಂಡಳಿ ವ್ಯಾಪ್ತಿಯ ಶಾಸಕರಿಗೆ ತಲಾ ಒಂದು ಕೋಟಿ ರೂ. ನೀಡಲು ನಿರ್ಧರಿಸಲಾಗಿದೆ. ಗಂಗಾ ಕಲ್ಯಾಣ ಯೋಜನೆಯಡಿ 9 ಸಾವಿರ ಕೋಟಿ ರೂ. ವೆಚ್ಚ ಮಾಡಲು ಅನುಮೋದನೆ ನೀಡಲಾಗಿದೆ. ಗಂಗಾ ಕಲ್ಯಾಣ ಯೋಜನೆ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತದೆ ಎಂದರು.

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.