ETV Bharat / state

ಶಿವರಾಮ ಕಾರಂತ ಬಡಾವಣೆ ವಿವಾದ: ಸಾರ್ವಜನಿಕರಿಗೆ ಅರ್ಜಿ ಸಲ್ಲಿಸಲು ಏ.30ರ ಗಡುವು

author img

By

Published : Apr 1, 2021, 9:16 PM IST

Shivarama Karnta layout controvers
ಶಿವರಾಮ ಕಾರಂತ ಬಡಾವಣೆ ವಿವಾದ

ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ವರದಿ ನೀಡಲು ಸುಪ್ರೀಂಕೋರ್ಟ್ ರಚಿಸಿರುವ ಸಮಿತಿಯು ಸಾರ್ವಜನಿಕರಿಗೆ ಅರ್ಜಿ ಸಲ್ಲಿಸಲು ಅಂತಿಮ ಗಡುವು ನಿಗದಿಪಡಿಸಿದೆ.

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ದ ಡಾ.ಕೆ ಶಿವರಾಮ ಕಾರಂತ ಬಡಾವಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ ನೇಮಕ ಮಾಡಿರುವ ನ್ಯಾಯಮೂರ್ತಿ ಎ.ವಿ ಚಂದ್ರಶೇಖರ್ ನೇತೃತ್ವದ ಸಮಿತಿಯು ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲು 2021 ಏಪ್ರಿಲ್ 30 ರಂದು ಕೊನೆಯ ದಿನಾಂಕ ನಿಗದಿಪಡಿಸಿದೆ.

ಶಿವರಾಮ ಕಾರಂತ ಬಡಾವಣೆಗೆ ಸಂಬಂಧಪಟ್ಟಂತೆ 3 ಆಗಸ್ಟ್ 2018ಕ್ಕೆ ಮುಂಚಿತವಾಗಿ ನಿರ್ಮಿಸಲಾದ ಕಟ್ಟಡ ಮತ್ತು ಮನೆಗಳ ಬಗ್ಗೆ ವರದಿಯನ್ನು ನೀಡಲು ಕೋರ್ಟ್ ರಚಿಸಿರುವ ನ್ಯಾಯಮೂರ್ತಿ ಎ.ವಿ ಚಂದ್ರಶೇಖರ್ ಸಮಿತಿಯು, ಬಡಾವಣೆಯ ಅಧಿಸೂಚಿತ ಪ್ರದೇಶಗಳಲ್ಲಿ ಐದು ಸಹಾಯ ಕೇಂದ್ರಗಳನ್ನು ತೆರೆದು ಈಗಾಗಲೇ ದಾಖಲೆಗಳನ್ನು ಸಂಗ್ರಹಿಸುತ್ತಿದೆ. ಸಾರ್ವಜನಿಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ: ಶಿವರಾಮ ಕಾರಂತ ಬಡಾವಣೆ ಯೋಜನೆ ಕೈಬಿಡುವ ಭರವಸೆ ನೀಡಿಲ್ಲ: ಬಿಡಿಎ ಸ್ಪಷ್ಟನೆ

ಆನ್​ಲೈನ್​ ಪೋರ್ಟಾಲ್ jcc-skl.in ಮೂಲಕವೂ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮಾಚ್ 1,​ 2021 ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಸಮಿತಿಯು ಚಾಲನೆ ನೀಡಿತ್ತು. ಅರ್ಜಿ ಸಲ್ಲಿಕೆಗೆ 30 ಏಪ್ರಿಲ್ 2021 ಕ್ಕೆ ಅಂತಿಮ ಗಡುವು ನಿಗದಿಪಡಿಸಲಾಗಿದೆ. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಸಮಿತಿ ತಿಳಿಸಿದೆ.

ಏನಿದು ವಿವಾದ?

ಬೆಂಗಳೂರು ಉತ್ತರ ತಾಲೂಕಿನಲ್ಲಿ ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆ ಬಿಡಿಎ ಮುಂದಾಗಿದ್ದು, ಭೂಸ್ವಾಧೀನ ಮಾಡುವುದಕ್ಕೆ ಸ್ಥಳೀಯ ನಿವಾಸಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ವರದಿ ನೀಡಲು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎ.ವಿ ಚಂದ್ರಶೇಖರ್ ನೇತೃತ್ವದಲ್ಲಿ ಸಮಿತಿ ರಚಿಸಿದೆ. ಸಮಿತಿಯು ದಿನಾಂಕ 03/08/2018ಕ್ಕೆ ಮುಂಚಿತವಾಗಿ ನಿರ್ಮಿಸಲಾದ ಕಟ್ಟಡ ಮತ್ತು ಮನೆಗಳ ಬಗ್ಗೆ ಮಾಹಿತಿಯನ್ನು ಸರ್ವೆ ನ್ಯಾಯಾಲಯಕ್ಕೆ ಸಲ್ಲಿಸಬೇಕಾಗಿದೆ.

ಈ ಹಿನ್ನೆಲೆಯಲ್ಲಿ ಸಮಿತಿಯು ಕಟ್ಟಡ ಮಾಲೀಕರಿಂದ ಅರ್ಜಿಗಳನ್ನು ಸ್ವೀಕರಿಸಲು ಸಹಾಯ ಕೇಂದ್ರವನ್ನು ತೆರೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.