ETV Bharat / state

ಬೆಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

author img

By ETV Bharat Karnataka Team

Published : Dec 16, 2023, 7:41 AM IST

ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

Etv Bharatನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬೆಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರೌಡಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಂಪಿಗೇಹಳ್ಳಿ ಠಾಣೆಯ ರೌಡಿಶೀಟರ್ ಮಂಜುನಾಥ್ ಬಂಧಿತ ಆರೋಪಿ. ಹತ್ಯೆ, ಕೊಲೆಯತ್ನ, ವಾಹನಗಳಿಗೆ ಬೆಂಕಿ ಹಚ್ಚಿದ ಪ್ರಕರಣಗಳಲ್ಲಿ ಆರೋಪಿಯಾಗಿರುವ ಮಂಜುನಾಥ್ ಕಳೆದ ಆರೇಳು ತಿಂಗಳುಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಕೊನೆಗೆ ಬೆಂಗಳೂರು, ಮಾಗಡಿ, ಕುಣಿಗಲ್ ಮಾರ್ಗದ ಬಸ್‌ಗಳಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಸಂಪಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರತ್ಯೇಕ ಪ್ರಕರಣ, ಸುಲಿಗೆ ಮಾಡಲು ಸಂಚು ರೂಪಿಸಿದ್ದ ರೌಡಿಶೀಟರ್ ಸಹಚರರ ಬಂಧನ

ಸಾರ್ವಜನಿಕರ ಸುಲಿಗೆಗೆ ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿಯ ಸಂಘಟಿತ ಅಪರಾಧ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ನವೀನ್, ಕಿರಣ್, ಚೇತನ್ ಹಾಗೂ ಶರತ್ ಬಂಧಿತರು. ಆರೋಪಿಗಳು ಡಿಸೆಂಬರ್ 12 ರಂದು ಪೀಣ್ಯ ಇಂಡಸ್ಟ್ರಿಯಲ್ ಏರಿಯಾದ ಕಾವೇರಿ ಸ್ಟೀಲ್ ಫ್ಯಾಕ್ಟರಿಯ ಬಳಿ ಮಾರಕಾಸ್ತ್ರಗಳನ್ನ ಹಿಡಿದು ಸುಲಿಗೆ ಮಾಡಲು ಸಜ್ಜಾಗಿದ್ದರು.

ಬಾತ್ಮೀದಾರರಿಂದ ಬಂದ ಮಾಹಿತಿಯನ್ನು ಆಧರಿಸಿದ ಸಿಸಿಬಿಯ ಸಂಘಟಿತ ಅಪರಾಧ ದಳದ ಅಧಿಕಾರಿಗಳ ತಂಡ ಸ್ಥಳಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಿದೆ. ಆರೋಪಿಗಳಿಂದ ಮಾರಕಾಸ್ತ್ರಗಳು ಹಾಗೂ ಒಂದು ಕಾರನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿತರು ಪೀಣ್ಯ ಪೊಲೀಸ್ ಠಾಣೆಯ ರೌಡಿಶೀಟರ್ ಒಬ್ಬನ ಸಹಚರರು ಎಂಬುದು ಪ್ರಾಥಮಿಕ ವಿಚಾರಣೆಯಿಂದ ತಿಳಿದು ಬಂದಿದೆ. ಬಂಧಿತರ ವಿರುದ್ಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಪ್ರಕರಣಗಳು- ಹಣಕ್ಕಾಗಿ ಕಿಡ್ನಾಪ್​ ಡ್ರಾಮ: ಇತ್ತೀಚೆಗೆ ನಡೆದ ಪ್ರಕರಣವೊಂದರಲ್ಲಿ ಹಣಕ್ಕಾಗಿ ಮಾಲೀಕನಿಗೆ ಕರೆ ಮಾಡಿ ತಾನು ಅಪಹರಣಕ್ಕೊಳಗಾಗಿದ್ದು ಹಣ ನೀಡಿದರೆ ಬಿಡುತ್ತಾರೆ ಎಂದು ಸುಳ್ಳು ಕಥೆ ಕಟ್ಟಿದ್ದ ಕೆಲಸಗಾರ ಸೇರಿ ಮೂವರನ್ನು ಆರ್ ಟಿ ನಗರ ಠಾಣೆ ಪೊಲೀಸರು ಸೆರೆ ಹಿಡಿದಿದ್ದರು. ಆರ್‌ ಟಿ ನಗರದ ನಿವಾಸಿ ಮೊಹಮ್ಮದ್ ಆಸೀಫ್ ಹಬೀಬ್ ಎಂಬವರು ನೀಡಿದ ದೂರಿ‌ನ ಮೇರೆಗೆ ಬಿಹಾರ ಮೂಲದ ನೂರುಲ್ಲಾ ಹಸನ್, ಅಬೂಬುಕರ್ ಹಾಗು ಆಲಿರೇಜಾ ಎಂಬುವರನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಮಾರಕಾಸ್ತ್ರ ತೋರಿಸಿ ಸುಲಿಗೆ: ಬೈಕ್​ನಲ್ಲಿ ಬಂದ ಖದೀಮರು ಮಚ್ಚು ತೋರಿಸಿ ಹಣ ಸುಲಿಗೆ ಮಾಡಿದ್ದ ಘಟನೆ ಕೆಲ ದಿನಗಳ ಹಿಂದೆ ಬೆಂಗಳೂರಿನಲ್ಲೇ ನಡೆದಿತ್ತು. ರಾತ್ರಿ ಸಮಯ ಆರ್​ ಟಿ ನಗರ ಹಾಗೂ ಡಿ ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗಡಿಗಳಿಗೆ ನುಗ್ಗಿದ ಸುಲಿಗೆಕೋರರು ಮಾರಕಾಸ್ತ್ರ ತೋರಿಸಿ, ಬೆದರಿಸಿ‌ ಸರಣಿ ಹಣ ಸುಲಿಗೆ ಮಾಡಿದ್ದರು. ಆರ್ ಟಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ದಿನ್ನೂರು ಮುಖ್ಯರಸ್ತೆಯಲ್ಲಿ ನೇಚರ್ ಬಾರ್ ಅಂಡ್ ರೆಸ್ಟೋರೆಂಟ್​ಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಸುಮಾರು 40 ಸಾವಿರ ರೂಪಾಯಿವರೆಗೂ ಸುಲಿಗೆ ಮಾಡಿದ್ದರು.

ಇದನ್ನೂ ಓದಿ: ವಿಳಾಸ ಕೇಳುವ ನೆಪದಲ್ಲಿ ಬೈಕ್ ಅಡ್ಡಗಟ್ಟಿ ಸುಲಿಗೆ, ನಾಲ್ವರು ಆರೋಪಿಗಳ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.