ETV Bharat / state

ಸಿಎಂ ಭೇಟಿಯಾದ ಅಶ್ವಿನಿ ಪುನೀತ್ ರಾಜಕುಮಾರ್; ಖಾಸಗಿ ಕಾರ್ಯಕ್ರಮಕ್ಕೆ ಆಹ್ವಾನ

author img

By ETV Bharat Karnataka Team

Published : Oct 8, 2023, 8:50 PM IST

ಪುನೀತ್ ರಾಜಕುಮಾರ್ ಶಿಲ್ಪದ ಸಂಗ್ರಹದ ಅನಾವರಣ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರನ್ನು ಅಶ್ವಿನಿ ಪುನೀತ್ ರಾಜಕುಮಾರ್ ಆಹ್ವಾನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಅಶ್ವಿನಿ ರಾಜಕುಮಾರ್
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಅಶ್ವಿನಿ ರಾಜಕುಮಾರ್

ಬೆಂಗಳೂರು : ಖಾಸಗಿ ಕಾರ್ಯಕ್ರಮಕ್ಕೆ ಆಹ್ವಾನಿಸಲು ಅಶ್ವಿನಿ ಪುನೀತ್ ರಾಜ್​ಕುಮಾರ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು. ಈ ವೇಳೆ ಖಾಸಗಿ ಕಾರ್ಯಕ್ರಮವೊಂದಕ್ಕೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರು. ಈ ವೇಳೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮಾಜಿ ಸಚಿವ ಹೆಚ್.ಎಂ ರೇವಣ್ಣ ಜೊತೆಗಿದ್ದರು.

ಪವರ್​ ಸ್ಟಾರ್​ ದಿ. ಪುನೀತ್ ರಾಜಕುಮಾರ್ ಅವರ ಶಿಲ್ಪದ ಸಂಗ್ರಹದ ಅನಾವರಣ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜಕುಮಾರ್ ಸಿಎಂಗೆ ಆಹ್ವಾನ ನೀಡಿದರು. ನಗರದ ಖಾಸಗಿ ಹೊಟೇಲ್​ನಲ್ಲಿ ಅ.16ರಂದು ಸಂಜೆ 4 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿಎಂ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : ಜಾತಿಗಣತಿ ವರದಿ ವಿಚಾರ ಇಟ್ಟುಕೊಂಡು ಸರ್ಕಾರ ರಾಜಕೀಯ ಮಾಡುತ್ತಿದೆ: ಹೆಚ್ ಡಿ ಕುಮಾರಸ್ವಾಮಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.