ETV Bharat / state

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ರಾಯಭಾರ ಕಚೇರಿ ಘೋಷಣೆ: ಸಚಿವ ಅಶ್ವತ್ಥ್​ ನಾರಾಯಣ್ ಸ್ವಾಗತ

author img

By

Published : Nov 17, 2021, 4:08 PM IST

Minister Ashwathth Narayan
ಸಚಿವ ಅಶ್ವತ್ಥ್​ ನಾರಾಯಣ್

ಹೂಡಿಕೆ, ವ್ಯಾಪಾರ, ತಂತ್ರಜ್ಞಾನ ಬೆಳವಣಿಗೆಗೆ ಮೊದಲಾದ ಕ್ಷೇತ್ರದಲ್ಲಿ ಅವಶ್ಯಕತೆ ಇರುವ ನಿರ್ಣಯವನ್ನು ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ (Australian Prime Minister Scott Morrison) ಕೈಗೊಂಡಿರುವುದು ನಿಜಕ್ಕೂ ದೊಡ್ಡ ಬೆಳವಣಿಗೆ ಎಂದು ಸಚಿವ ಅಶ್ವತ್ಥ್​ ನಾರಾಯಣ್ ತಿಳಿಸಿದ್ದಾರೆ.

ಬೆಂಗಳೂರು: ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ (Australian Prime Minister Scott Morrison) ಅವರು ನಗರದಲ್ಲಿ ರಾಯಭಾರ ಕಚೇರಿ (Australian Embassy) ಪ್ರಾರಂಭ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಈ ನಿರ್ಣಯವನ್ನು ಸಚಿವ ಅಶ್ವತ್ಥ್​ ನಾರಾಯಣ್ (Minister Ashwath Narayan) ಸ್ವಾಗತಿಸಿದ್ದಾರೆ.

'ಈಟಿವಿ ಭಾರತ'ದೊಂದಿಗೆ ಮಾತನಾಡಿದ ಸಚಿವ ಅಶ್ವತ್ಥ್​ ನಾರಾಯಣ್

ಬೆಂಗಳೂರು ಟೆಕ್ ಶೃಂಗ ಸಭೆ 2021 ರ ಕುರಿತು ಮಾತನಾಡಿದ ಅವರು, ' ಹೂಡಿಕೆ, ವ್ಯಾಪಾರ, ತಂತ್ರಜ್ಞಾನ ಬೆಳವಣಿಗೆಗೆ ಮೊದಲಾದ ಕ್ಷೇತ್ರದಲ್ಲಿ ಅವಶ್ಯಕತೆ ಇರುವ ನಿರ್ಣಯವನ್ನು ಆಸ್ಟ್ರೇಲಿಯಾ ಪ್ರಧಾನಿ ಕೈಗೊಂಡಿರುವುದು ನಿಜಕ್ಕೂ ದೊಡ್ಡ ಬೆಳವಣಿಗೆ. ಇದನ್ನು ರಾಜ್ಯದ ಜನರ ಪರವಾಗಿ ಸ್ವಾಗತಿಸುತ್ತೇನೆ. ಇದರಿಂದ ಭಾರತ-ಆಸ್ಟ್ರೇಲಿಯಾ ದ್ವಿಪಕ್ಷೀಯ ಸಂಬಂಧ ವೃದ್ಧಿಸಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಹಾಗೂ ಶೃಂಗ ಸಭೆಯ ಬಗ್ಗೆ ಅಭಿಪ್ರಾಯ ಹಂಚಿಕೊಂಡ ಸಚಿವರು, ಒಬ್ಬ ವಿದ್ಯಾರ್ಥಿಯಲ್ಲಿನ ಪ್ರತಿಭೆಯನ್ನು ಗುರುತಿಸಬೇಕಾದರೆ ಅವನಿಗೆ ಸರಿಯಾದ ಮೌಲ್ಯಯುತ ಶಿಕ್ಷಣವನ್ನು ನೀಡಬೇಕು. ಆಗ ಮಾತ್ರ ಆತನ ಸಾಮರ್ಥ್ಯವನ್ನು ಗುರುತಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ನಾವು ಶಿಕ್ಷಣ ನೀತಿಯನ್ನು ಅಳವಡಿಸಿಕೊಂಡಿದ್ದೇವೆ ಎಂದು ಅವರು, ಐಟಿ ಕ್ಷೇತ್ರದಲ್ಲಿ ರಾಜ್ಯ ಸಿಂಹ ಪಾಲು ಹೊಂದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಬೆಳೆಯಲಿದೆ ಎಂದರು.

ಓದಿ: Bitcoin scam: ತಲೆಮರೆಸಿಕೊಂಡ ಹ್ಯಾಕರ್​ ಶ್ರೀಕಿ.. ಭದ್ರತೆ ನೀಡಲು ಪೊಲೀಸರ ಪರದಾಟ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.