ETV Bharat / state

ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಿ: ಹಿಂದುಳಿದ ವರ್ಗಗಳ ಸ್ವಾಮೀಜಿಗಳಿಂದ ಸಿಎಂಗೆ ಮನವಿ

author img

By ETV Bharat Karnataka Team

Published : Jan 6, 2024, 11:00 PM IST

ಮನವಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಕಾನೂನು ಸಲಹೆ ಪಡೆದು ಮುಂದುವರಿಯುವುದಾಗಿ ಹೇಳಿದ್ದಾರೆ.

Backward communities Swamijis met CM Siddaramaiah
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಹಿಂದುಳಿದ ಸಮುದಾಯಗಳ ಮಠಾಧೀಶರು

ಬೆಂಗಳೂರು: ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಹಿಂದುಳಿದ ಸಮುದಾಯಗಳ ಮಠಾಧೀಶರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು. ಮುಖ್ಯಮಂತ್ರಿಯನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾದ ಹಿಂದುಳಿದ ಸಮುದಾಯಗಳ ಮಠಾಧೀಶರು ಈ ಮನವಿ ಸಲ್ಲಿಸಿದರು. ಇದೇ ವೇಳೆ "ಶ್ರಮಿಕ ವರ್ಗದವರಿಗೆ ಗ್ಯಾರಂಟಿಗಳು ಹೆಚ್ಚು ಉಪಯುಕ್ತವಾಗಿವೆ" ಎಂದು ಸ್ವಾಮೀಜಿಗಳು ಅಭಿಪ್ರಾಯ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, "ವರದಿ ನೀಡಲು ಎರಡು ತಿಂಗಳ ಕಾಲ ಅವಧಿ ವಿಸ್ತರಣೆಯಾಗಿದೆ. ಜಯಪ್ರಕಾಶ್ ಹೆಗ್ಡೆ ಅವರು ಕಾಂತರಾಜು ಅವರ ವರದಿಯನ್ನೇ ಕೊಡಲು ಸಾಧ್ಯವಿಲ್ಲ ಎಂದಿದ್ದು, ಈ ಬಗ್ಗೆ ಕಾನೂನು ಸಲಹೆ ಪಡೆದು ಮುಂದುವರಿಯಲಾಗುವುದು" ಎಂದರು.

ಇದೇ ಸಂದರ್ಭದಲ್ಲಿ ಮಠಗಳಿಗೆ ಜಮೀನು ಕೊಡುವ ಬಗ್ಗೆ ಸ್ವಾಮೀಜಿಗಳು ಪ್ರಸ್ತಾಪಿಸಿದರು. ತಹಶೀಲ್ದಾರ್ ಅವರು ಈ ಬಗ್ಗೆ ವರದಿ ನೀಡಲು ಸೂಚಿಸಿದ್ದು, ವರದಿಯನ್ನು ಶೀಘ್ರವಾಗಿ ನೀಡುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿ ಸೂಚಿಸಿದರು.

ಭೋವಿ ಸಮುದಾಯ ಚಿತ್ರದುರ್ಗದ ಸಿದ್ದರಾಮೇಶ್ವರ ಸ್ವಾಮೀಜಿ, ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಜಗದ್ಗುರು ನಿರಂಜನಾನಂದಪುರಿ ಶ್ರೀಗಳು ಹಾಗೂ ಹಿಂದುಳಿದ ಜಾತಿಗಳ ಮಠಗಳ ಸ್ವಾಮೀಜಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಕೆ ಎ ದಯಾನಂದ ಈ ವೇಳೆ ಉಪಸ್ಥಿತರಿದ್ದರು.

ಇದನ್ನೂ ಓದಿ: ಸಿಎಂ ತಕ್ಷಣ ಕಾಂತರಾಜು ಅವರ ಜಾತಿ ಗಣತಿ ವರದಿ ಸ್ವೀಕರಿಸಬೇಕು: ಈಶ್ವರಾನಂದ ಪುರಿ ಸ್ವಾಮೀಜಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.