ETV Bharat / state

ಸಿಸಿಬಿ ಭರ್ಜರಿ ಬೇಟೆ.. ಇಬ್ಬರು ಅಂತಾರಾಜ್ಯ ಖದೀಮರಿಂದ 35 ಲಕ್ಷ ಮೌಲ್ಯದ ಚಿನ್ನಾಭರಣ ವಶ

author img

By

Published : Dec 27, 2021, 5:00 PM IST

ಮೋಜಿನ ಜೀವನಕ್ಕಾಗಿ ಆಂಧ್ರ ಪ್ರದೇಶದಿಂದ ಕರ್ನಾಟಕಕ್ಕೆ ಬಂದು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳು ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತರಿಂದ 35 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.

ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ
ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ

ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ನಗರದಲ್ಲಿ ಸರಣಿ ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಖದೀಮರನ್ನು ಸಿಸಿಬಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಆಂಧ್ರ ಪ್ರದೇಶದ ಹಿಂದೂಪುರ‌ ಮೂಲದ ಶೇಖ್ ಇಲಿಯಾಸ್ ಹಾಗೂ ಎರಕಲ ಕಾವಡಿ ನಾಗೇಂದ್ರ ಎಂಬುವರನ್ನು ಬಂಧಿಸಿ 35 ಲಕ್ಷ ಮೌಲ್ಯದ 650 ಗ್ರಾಂ ಚಿನ್ನಾಭರಣ ಜಪ್ತಿ ಮಾಡಿಕೊಳ್ಳಲಾಗಿದೆ. ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ‌ ಒಪ್ಪಿಸಲಾಗಿದೆ‌.

ಇಬ್ಬರು ಆರೋಪಿಗಳ ವಿರುದ್ಧ ಗೌರಿಬಿದನೂರು, ತಾವರೆಕರೆ, ಮಧುಗಿರಿ, ಕೊರಟಗೆರೆ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಆರು ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. ಮೋಜಿನ ಜೀವನಕ್ಕಾಗಿ ಹಿಂದೂಪುರದಿಂದ ನಗರಕ್ಕೆ ಬಂದು ಇವರು ಕಳ್ಳತನ ಮಾಡುತ್ತಿದ್ದರು.

ನಗರಕ್ಕೆ ಬಸ್ ಗಳಲ್ಲಿ ಬಂದು ಕೃತ್ಯ ಎಸಗುತ್ತಿದ್ದರು‌. ಈ ಹಿಂದೆ ಕಳ್ಳತನ ಪ್ರಕರಣವೊಂದರಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದು ಜೈಲು ಪಾಲಾಗಿದ್ದರು. ಇತ್ತೀಚೆಗೆ ಜಾಮೀನು ಪಡೆದು ಹೊರಬಂದಿದ್ದ ಆರೋಪಿಗಳು ಮತ್ತೆ ಬಗಲಗುಂಟೆ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದರು.

2007 ರಿಂದಲೂ ದರೋಡೆ, ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಗಳು ಆಂಧ್ರಪ್ರದೇಶ ಹಾಗೂ ಕರ್ನಾಟಕದ ಹಲವು ಕಡೆಗಳಲ್ಲಿ ದುಷ್ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಇದುವರೆಗೂ ಬೆಂಗಳೂರು ಪೊಲೀಸರ ಕೈಗೆ ಸಿಗದೆ ಎಸ್ಕೇಪ್ ಆಗಿದ್ದರು.

ಕದ್ದ ಹಣದಲ್ಲಿ ಗೋವಾ, ಪಾಂಡಿಚೇರಿ, ಮುಂಬೈಗೆ ಸುತ್ತಾಡುತ್ತಿದ್ದರು. ಪಬ್ ಪಾರ್ಟಿ ಎಂದು ಲಕ್ಷಾಂತರ ರೂಪಾಯಿ ದುಂದುವೆಚ್ಚ ಮಾಡಿದ್ದರು. ಖಚಿತ ಮಾಹಿತಿ ಮೇರೆಗೆ ‌ಕಳ್ಳತನ ಮಾಡಲು ನಗರಕ್ಕೆ ಬಂದಿದ್ದ ಆರೋಪಿಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.