ETV Bharat / state

ಕಾಡಾನೆಗಳು ಅರಣ್ಯದಿಂದ ಹೊರಬಾರದಂತೆ ಬ್ಯಾರಿಕೇಡ್ ಯೋಜನೆ, ಬಯಲುಸೀಮೆ 17 ಜಿಲ್ಲೆಗಳಲ್ಲಿ ಹಸಿರೀಕರಣ ಕಾರ್ಯಕ್ರಮ

author img

By

Published : Jul 7, 2023, 5:20 PM IST

Updated : Jul 7, 2023, 5:44 PM IST

ಪ್ರಸಕ್ತ ಸಾಲಿನ ಬಜೆಟ್​ದಲ್ಲಿ ರಾಮನಗರ ಮತ್ತು ಬನ್ನೇರುಘಟ್ಟದಲ್ಲಿ ಎರಡು ಹೊಸ ಆನೆ ಕಾರ್ಯಪಡೆ ರಚನೆ, ಅನಾರೋಗ್ಯ ಪೀಡಿತ ಪ್ರಾಣಿಗಳನ್ನು ರಕ್ಷಣೆ/ನಿರ್ವಹಣೆ ಮಾಡಲು ಶಿವಮೊಗ್ಗ ಹಾಗೂ ಬೆಳಗಾವಿಯಲ್ಲಿ ಪುನರ್ವಸತಿ ಕೇಂದ್ರಗಳ ನಿರ್ಮಾಣ ಮಾಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನು ಬಯಲುಸೀಮೆ 17 ಜಿಲ್ಲೆಗಳಲ್ಲಿ 500 ಕೋಟಿ ರೂಪಾಯಿ ವೆಚ್ಚದಲ್ಲಿ ಹಸಿರೀಕರಣ ಕಾರ್ಯಕ್ರಮ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

Conservation of wild animals is a priority
2023 ಸಾಲಿನ ಬಜೆಟ್​ದಲ್ಲಿ ಕಾಡಿನ ಪ್ರಾಣಿಗಳ ಸಂರಕ್ಷಣೆಗೆ ಆದ್ಯತೆ

ಬೆಂಗಳೂರು: ರಾಜ್ಯದಲ್ಲಿ ಮಾನವ ಕಾಡಾನೆ ಸಂಘರ್ಷ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ನಿಯಂತ್ರಿಸಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ 520 ಕಿ.ಮೀಟರ್​ಗಳ ಬ್ಯಾರಿಕೇಡ್‌ಗಳನ್ನು ನಿರ್ಮಿಸಲು ಘೋಷಿಸಲಾಗಿತ್ತು. ಈ ಯೋಜನೆಯಡಿ ಬ್ಯಾರಿಕೇಡ್‌ ನಿರ್ಮಿಸಲಾಗಿದೆ. ಬಾಕಿ ಉಳಿದಿರುವ ಬ್ಯಾರಿಕೇಡ್‌ ಪೂರ್ಣಗೊಳಿಸಲು ಆದ್ಯತೆ ನೀಡಲಾಗುವುದು. ಈ ಕಾಮಗಾರಿಗಳ ಅನುಷ್ಠಾನಕ್ಕೆ 2023-24 ರಲ್ಲಿ 120 ಕೋಟಿ ರೂ. ಮೀಸಲಿಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ರಾಮನಗರ ಬನ್ನೇರುಘಟ್ಟದಲ್ಲಿ ಆನೆ ಕಾರ್ಯಪಡೆ ರಚನೆ:ಬಜೆಟ್ ಮಂಡನೆ ವೇಳೆ ವಿವರಣೆ ನೀಡಿದ ಅವರು, ಮಾನವ - ಕಾಡಾನೆ ಸಂಘರ್ಷವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಈಗಾಗಲೇ ಮೈಸೂರು, ಮಂಡ್ಯ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಆನೆ ಕಾರ್ಯಪಡೆ ರಚಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ರಾಮನಗರ ಮತ್ತು ಬನ್ನೇರುಘಟ್ಟದಲ್ಲಿ ಎರಡು ಹೊಸ ಆನೆ ಕಾರ್ಯಪಡೆಗಳನ್ನು ರಚಿಸಲಾಗುವುದು ಎಂದು ಘೋಷಣೆ ಮಾಡಿದರು.

  • "ಪರಿಸರ ಸಂರಕ್ಷಣೆ"

    •ಮಾನವ - ಕಾಡಾನೆ ಸಂಘರ್ಷವನ್ನು ನಿಯಂತ್ರಿಸಲು ರಾಮನಗರ ಮತ್ತು ಬನ್ನೇರುಘಟ್ಟ ಪ್ರದೇಶಗಳಲ್ಲಿ ಎರಡು ಹೊಸ ಆನೆ ಕಾರ್ಯಪಡೆ ರಚನೆ.

    •ಬೀದರ್‌ನಲ್ಲಿ ಹೆಚ್ಚಾಗಿ ಕಂಡುಬರುವ ಕೃಷ್ಣಮೃಗಗಳ ಸಂರಕ್ಷಣೆಗೆ ಕೃಷ್ಣಮೃಗ ಸಂರಕ್ಷಣಾ ಮೀಸಲು ಪ್ರದೇಶವನ್ನಾಗಿ ಘೋಷಣೆ; ಈ ಪ್ರದೇಶದ ರಕ್ಷಣೆ ಮತ್ತು ನಿರ್ವಹಣೆಗೆ 2 ಕೋಟಿ ರೂ.

    •ಬಯಲು… pic.twitter.com/EYdi24h43N

    — CM of Karnataka (@CMofKarnataka) July 7, 2023 " class="align-text-top noRightClick twitterSection" data=" ">

ಶಿವಮೊಗ್ಗ, ಬೆಳಗಾವಿಯಲ್ಲಿ ಪ್ರಾಣಿಗಳ ರಕ್ಷಣೆಗೆ ಪುನರ್ವಸತಿ ಕೇಂದ್ರ : ಮಾನವ-ವನ್ಯಪ್ರಾಣಿ ಸಂಘರ್ಷದಲ್ಲಿ ಸಂರಕ್ಷಿಸಿದ, ಗಾಯಗೊಂಡ, ಅನಾರೋಗ್ಯ ಪೀಡಿತ ಪ್ರಾಣಿಗಳನ್ನು ರಕ್ಷಣೆ/ನಿರ್ವಹಣೆ ಮಾಡುತ್ತಿರುವ ಬನ್ನೇರುಘಟ್ಟ ಮತ್ತು ಮೈಸೂರಿನಲ್ಲಿರುವ ಪುನರ್ವಸತಿ ಕೇಂದ್ರಗಳ ಸಾಮರ್ಥ್ಯ ವರ್ಧನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ, ಶಿವಮೊಗ್ಗ ಹಾಗೂ ಬೆಳಗಾವಿಯಲ್ಲಿ ಹೊಸದಾಗಿ ಪುನರ್ವಸತಿ ಕೇಂದ್ರಗಳ ನಿರ್ಮಾಣ ಕಾರ್ಯವನ್ನು ಕೈಗೊಳ್ಳಲಾಗುವುದು.

ಬೀದರ್‌ ಜಿಲ್ಲೆಯಲ್ಲಿ ಕೃಷ್ಣಮೃಗಗಳು (Blackbuck) ಹೆಚ್ಚಾಗಿ ಕಂಡು ಬರುವುದರಿಂದ, ಇವುಗಳ ಸಂರಕ್ಷಣೆಗಾಗಿ ಕೃಷ್ಣಮೃಗ ಸಂರಕ್ಷಣಾ ಮೀಸಲು ಪ್ರದೇಶವನ್ನು ಘೋಷಿಸಲಾಗುವುದು. ಈ ಸಂರಕ್ಷಣಾ ಮೀಸಲು ಪ್ರದೇಶದ ರಕ್ಷಣೆ ಮತ್ತು ನಿರ್ವಹಣೆಗಾಗಿ ಎರಡು ಕೋಟಿ ರೂ. ಮೀಸಲಿಡಲಾಗಿದೆ.

  • "ಪ್ರವಾಸೋದ್ಯಮಕ್ಕೆ ಉತ್ತೇಜನ"

    •ಕಿತ್ತೂರು ಕರ್ನಾಟಕ ಭಾಗದಲ್ಲಿನ ಸವದತ್ತಿ ಯಲ್ಲಮ್ಮನ ಗುಡ್ಡ, ದೇವರಗುಡ್ಡ, ಕಪ್ಪತ್ತಗುಡ್ಡ, ಬಾದಾಮಿ ಬನಶಂಕರಿ, ಲಕ್ಕುಂಡಿ, ಮಾಗಡಿ ಪಕ್ಷಿಧಾಮ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಹಂಪಿ, ಮೈಲಾರ, ಗಾಣಗಾಪುರ, ಸನ್ನತಿ ಮತ್ತು ಮಳಖೇಡ, ಬೀದರ್‌, ರಾಯಚೂರು ಹಾಗೂ ಕಲಬುರಗಿ ಕೋಟೆಗಳ ಸಮಗ್ರ ಅಭಿವೃದ್ಧಿಗೆ ಕ್ರಮ.… pic.twitter.com/tY4kDK3bNw

    — CM of Karnataka (@CMofKarnataka) July 7, 2023 " class="align-text-top noRightClick twitterSection" data=" ">

ಬಯಲುಸೀಮೆ 17 ಜಿಲ್ಲೆಗಳಲ್ಲಿ ಹಸಿರೀಕರಣ ಕಾರ್ಯಕ್ರಮ: ರಾಷ್ಟ್ರೀಯ ಅರಣ್ಯ ನೀತಿಯ ಪ್ರಕಾರ ಭೌಗೋಳಿಕ ವಿಸ್ತೀರ್ಣದ ಶೇ.33 ರಷ್ಟು ಭಾಗ ಅರಣ್ಯ ಪ್ರದೇಶದಿಂದ ಆವೃತಗೊಂಡಿರಬೇಕು.ಆದರೆ ಕರ್ನಾಟಕ ರಾಜ್ಯದ ಬಯಲುಸೀಮೆ ಪ್ರದೇಶದ 17 ಜಿಲ್ಲೆಗಳಲ್ಲಿ ಶೇ.10 ಕ್ಕಿಂತ ಕಡಿಮೆ ಅರಣ್ಯ ಪ್ರದೇಶ ಇರುತ್ತದೆ. ಹೀಗಾಗಿ ಈ ಜಿಲ್ಲೆಗಳಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ʻಹಸಿರೀಕರಣ ಕಾರ್ಯಕ್ರಮʼ ವನ್ನು ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ ಐದು ವರ್ಷಗಳ ಅವಧಿಯಲ್ಲಿ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.

ಹಸಿರುಮನೆ ಯೋಜನೆಗೆ ಉತ್ತೇಜನ:ಇಂಗಾಲದ ಹೆಜ್ಜೆ ಗುರುತನ್ನು (Carbon Footprint) ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರದ ಎಲ್ಲಾ ಪ್ರಮುಖ ಯೋಜನೆಗಳಲ್ಲಿ ಪರಿಸರ ಹೊಂದಾಣಿಕೆಯನ್ನು ಮಾಡುವ ಕುರಿತು ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯ (EMPRI) ವತಿಯಿಂದ ಮೌಲ್ಯಮಾಪನ ಮಾಡಲಾಗುವುದು. ಡಿಕಾರ್ಬೊನೈಸೇಷನ್ನಿನ (Decarbonization) ಆರ್ಥಿಕತೆಯನ್ನು ಪ್ರೋತ್ಸಾಹಿಸಲು ಮತ್ತು ಹಸಿರು ಮನೆ ಬೆಳವಣಿಗೆಯನ್ನು ಉತ್ತೇಜಿಸಲು, ರಾಜ್ಯದಲ್ಲಿನ ಸಂಸ್ಥೆಗಳಿಂದ ಸ್ವಯಂಪ್ರೇರಿತವಾಗಿ Green House Gases (GHG) ಹೊರಸೂಸುವಿಕೆಯನ್ನು ಬಹಿರಂಗಪಡಿಸುವ ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್​ದಲ್ಲಿ ಘೋಷಿಸಿದರು.

ಇದನ್ನುಓದಿ:Karnataka Budget: ಯಾವ ಇಲಾಖೆಗೆ ಎಷ್ಟು ಅನುದಾನ ಹಂಚಿಕೆ; ಇವುಗಳಿಗೆ ಆದಾಯ ಸಂಗ್ರಹ ಹೇಗೆ?

Last Updated : Jul 7, 2023, 5:44 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.