ETV Bharat / state

ಟೆಲಿಫೋನ್ ಕದ್ದಾಲಿಕೆಯಂತಹ ಕೆಳಮಟ್ಟಕ್ಕೆ ನಮ್ಮ ಸರ್ಕಾರ ಹೋಗಲ್ಲ: ಗೃಹ ಸಚಿವ ಬೊಮ್ಮಾಯಿ

author img

By

Published : Aug 21, 2020, 5:21 PM IST

Home Minister Basavaraj Bommai Reaction About Congress Leaders Allegations
ಗೃಹ ಸಚಿವ ಬಸವರಾಜ ಬೊಮ್ಮಾಯಿ

ಡಿ ಜೆ ಹಳ್ಳಿ ಗಲಭೆ ಪ್ರಕರಣದ ತನಿಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿರುವುದಾಗಿ ಡಿ.ಕೆ. ಶಿವಕುಮಾರ್ ಮಾಡಿರುವ ಆರೋಪ ನಿರಾಧಾರ. ಪೊಲೀಸರು ತಮ್ಮ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೈ ನಾಯಕರ ಆರೋಪಗಳಿಗೆ ತಿರುಗೇಟು ನೀಡಿದ್ದಾರೆ.

ಬೆಂಗಳೂರು: ಅವರ ಪಕ್ಷದ ನಾಯಕರು ಫೋನ್ ಮಾಡಿದಾಗ ಮಾತನಾಡಲು ಸಾಧ್ಯವಾಗಿಲ್ಲ ಎಂದರೆ ಟೆಲಿಫೋನ್ ಕಂಪನಿಯನ್ನು ವಿಚಾರಿಸಬೇಕು. ಅದನ್ನು ಬಿಟ್ಟು ಫೋನ್ ಟ್ಯಾಪಿಂಗ್ ಅಂತ ಆರೋಪ ಮಾಡುವುದು ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಟಾಂಗ್ ನೀಡಿದ್ದಾರೆ.

ನಮ್ಮದು ಒಂದು ಜವಾಬ್ದಾರಿಯುತ ಸರ್ಕಾರವಾಗಿದ್ದು ಟೆಲಿಫೋನ್ ಕದ್ದಾಲಿಕೆ ಮಾಡುವ ಕೆಳಮಟ್ಟಕ್ಕೆ ಹೋಗುವುದಿಲ್ಲ, ನಮಗೆ ಅವಶ್ಯಕತೆಯೂ ಇಲ್ಲ. ಡಿ.ಕೆ. ಶಿವಕುಮಾರ್ ಅವರ ಟೆಲಿಫೋನ್ ಕದ್ದಾಲಿಕೆ ಮಾಡುವ ಪ್ರಶ್ನೆಯೇ ಇಲ್ಲವೆಂದು ಗೃಹ ಸಚಿವರು ಸ್ಪಷ್ಟಪಡಿಸಿದ್ದಾರೆ.

ಈಗಾಗಲೇ ಅವರು ಭಾಗಿಯಾಗಿದ್ದ ಸರ್ಕಾರದ ಅವಧಿಯಲ್ಲಿ ಟೆಲಿಫೋನ್ ಟ್ಯಾಪಿಂಗ್ ಮಾಡಿದ್ದನ್ನು ಸಿಬಿಐ ವಿಚಾರಣೆ ಮಾಡುತ್ತಿದೆ, ಟೆಲಿಫೋನ್ ಟ್ಯಾಪಿಂಗ್ ಅನುಭವ ಅವರ ಸರ್ಕಾರದಲ್ಲಿಯೇ ಇರುತ್ತದೆ. ನಮ್ಮ ಸರ್ಕಾರ ಡಿ.ಕೆ. ಶಿವಕುಮಾರ್ ಅವರ ಚಟುವಟಿಕೆಗಳ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಸರ್ಕಾರಕ್ಕೆ ಅದರ ಅವಶ್ಯಕತೆಯೂ ಇಲ್ಲವೆಂದು ದೂರವಾಣಿ ಕದ್ದಾಲಿಕೆ ಆರೋಪವನ್ನು ತಳ್ಳಿಹಾಕಿದರು.

ಡಿ ಜೆ ಹಳ್ಳಿ ಗಲಭೆ ಪ್ರಕರಣದ ತನಿಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿರುವುದಾಗಿ ಡಿ.ಕೆ. ಶಿವಕುಮಾರ್ ಮಾಡಿರುವ ಆರೋಪ ನಿರಾಧಾರ. ಪೊಲೀಸರು ತಮ್ಮ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ಮಾಡುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಹೇಳಿಕೆಯು ಪೊಲೀಸರ ನೈತಿಕ ಬಲವನ್ನು ಕುಗ್ಗಿಸುವ ಹಾಗೂ ಗಲಭೆಕೋರರನ್ನು ರಕ್ಷಿಸುವ ಪ್ರಯತ್ನದ ಭಾಗವಾಗಿದೆ. ಆದರೆ, ಅದು ಎಂದಿಗೂ ಸಾಧ್ಯವಿಲ್ಲವೆಂದು ಕೈ ನಾಯಕರ ಆರೋಪಗಳಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.