ಪ್ರಧಾನಿ ಮೋದಿ ಸ್ವಾಗತಿಸಲು ಅಭಿವೃದ್ದಿಪಡಿಸಿದ ರಸ್ತೆಗಳಲ್ಲಿ ಗುಂಡಿ, ಪಾಲಿಕೆಯಿಂದ ತನಿಖೆ

author img

By

Published : Jun 24, 2022, 3:36 PM IST

Roads were reconstructed in the background of Modi's arrival

ತನಿಖೆಯಲ್ಲಿ ಕಳಪೆ ಕಾಮಗಾರಿ ಸಾಬೀತಾದರೆ ಸಂಬಂಧಪಟ್ಟ ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರು ತಿಳಿಸಿದ್ದಾರೆ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಭೇಟಿಯ ವೇಳೆ ರಾಜಧಾನಿಯ ಕೆಲವು ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗಿತ್ತು. ಹೀಗೆ ಅಭಿವೃದ್ಧಿಪಡಿಸಿದ ಕೆಲವು ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದು, ಕಳಪೆ ಕಾಮಗಾರಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಸಂಬಂಧ ಪಾಲಿಕೆ ಇದೀಗ ತನಿಖೆಗೆ ಮುಂದಾಗಿದೆ. ವಿಶೇಷ ಆಯುಕ್ತರ ನೇತೃತ್ವದಲ್ಲಿ ತನಿಖೆ ನಡೆಸಿ ವರದಿ ಪಡೆಯಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.


ತನಿಖೆಯಲ್ಲಿ ಕಳಪೆ ಕಾಮಗಾರಿ ಸಾಬೀತಾದರೆ ಸಂಬಂಧಪಟ್ಟ ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಪಾಲಿಕೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ. ಅವರು ಕೊಟ್ಟ ವರದಿಯನ್ನು ರಾಜ್ಯ ಸರ್ಕಾರ ಮತ್ತು ಪ್ರಧಾನಿ ಕಚೇರಿಗೆ ಕಳುಹಿಸಲಾಗುತ್ತದೆ ಎಂದು ಅವರು ಹೇಳಿದರು. ಕಾಮಗಾರಿ ನಿರ್ವಹಿಸಿದ್ದ ಬಿಬಿಎಂಪಿಯ ಮೂವರು ಇಂಜಿನಿಯರ್​ಗಳಿಗೆ ಶೋಕಾಸ್​ ನೋಟಿಸ್​ ಕೊಡಲಾಗಿದೆ ಎಂದು ತುಷಾರ್ ಗಿರಿನಾಥ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ವಿಚಾರಣೆಗೆ ಹಾಜರಾದ ಮಂತ್ರಿ ಡೆವಲಪರ್ಸ್ ಎಂಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.