ETV Bharat / state

ಬಿಬಿಎಂಪಿ ಕ್ಷೇತ್ರ ಪುನರ್ ವಿಂಗಡಣೆ ಅಂತಿಮಗೊಳಿಸಿ ರಾಜ್ಯ ಸರ್ಕಾರದಿಂದ ಅಧಿಸೂಚನೆ.. ಬೆಂಗಳೂರಲ್ಲಿನ್ನು 225 ವಾರ್ಡ್​

author img

By ETV Bharat Karnataka Team

Published : Sep 25, 2023, 9:36 PM IST

BBMP ward numbers finalised by state government
ಪಾಲಿಕೆ ಕ್ಷೇತ್ರ ಪುನರ್ ವಿಂಗಡಣೆ ಅಂತಿಮಗೊಳಿಸಿ ರಾಜ್ಯ ಸರ್ಕಾರ ಅಧಿಸೂಚನೆ

ಬಿಬಿಎಂಪಿ ಕ್ಷೇತ್ರ ಪುನರ್ ವಿಂಗಡಣೆಯನ್ನು ಅಂತಿಮಗೊಳಿಸಿ ರಾಜ್ಯ ಸರ್ಕಾರ ಅಧಿಸೂಚನೆಯನ್ನು ಸೋಮವಾರ ಹೊರಡಿಸಿದೆ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕ್ಷೇತ್ರ ಪುನರ್ ವಿಂಗಡಣೆಯನ್ನು ಅಂತಿಮಗೊಳಿಸಿ ರಾಜ್ಯ ಸರ್ಕಾರ ಅಧಿಸೂಚನೆಯನ್ನು ಸೋಮವಾರ ಹೊರಡಿಸಿದೆ. ವಾರ್ಡ್‌ ವಿಂಗಡಣೆಯ ಬಗ್ಗೆ ಸಾರ್ವಜನಿಕ ಆಕ್ಷೇಪಣೆಯ ಬಳಿಕ 225 ವಾರ್ಡ್​ಗಳನ್ನು ಅಧಿಕೃತಗೊಳಿಸಿ ಸೆಪ್ಟೆಂಬರ್​ 25 ರಂದು ಅಧಿಸೂಚನೆ ಹೊರಡಿಸಿದೆ. ಈ ಹಿಂದೆ ಬಿಜೆಪಿ ಸರ್ಕಾರ 243 ವಾರ್ಡುಗಳನ್ನು ಅಂತಿಮಗೊಳಿಸಿತ್ತು. ಆದರೆ ಈಗ ಕಾಂಗ್ರೆಸ್ ಸರ್ಕಾರ 225 ವಾರ್ಡುಗಳಿಗೆ ಇಳಿಸಿದೆ.

ಸರ್ಕಾರ ಆಗಸ್ಟ್​ 4ರಂದು ವಾರ್ಡ್‌ಗಳ ಸಂಖ್ಯೆಯನ್ನು 243 ರಿಂದ 225ಕ್ಕೆ ಇಳಿಸಿ ಅಸೂಚನೆ ಹೊರಡಿಸಿತ್ತು. ಇದಾದ ಬಳಿಕ ಆಯೋಗ ವಾರ್ಡ್‌ಗಳ ಪುನರ್ ರಚಿಸಿ, ಗಡಿ ಗುರುತಿಸಿ ಕರಡು ವರದಿಯನ್ನು ನಗರಾಭಿವೃದ್ಧಿ ಇಲಾಖೆಗೆ ಸಲ್ಲಿಸಿತ್ತು. ಬಳಿಕ ವಾರ್ಡ್ ವಿಂಗಡಣೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಆಕ್ಷೇಪಗಳಿದ್ದರೆ 15 ದಿನದೊಳಗೆ ಲಿಖಿತ ರೂಪದಲ್ಲಿ ನಗರಾಭಿವೃದ್ಧಿ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಲು ಸೂಚಿಸಲಾಗಿತ್ತು.

ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಪರಿಶೀಲನಾ ಸಮಿತಿಯು ಮಾಡಿರುವ ಶಿಫಾರಸ್ಸುಗಳನ್ನು ಸರ್ಕಾರವು ಅಂಗೀಕಾರ ಮಾಡಿದೆ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅನಿಯಮ 2011ರ ಜನಗಣತಿಯ ಆಧಾರದ ಮೇರೆಗೆ ಬಿಬಿಎಂಪಿ ವಾರ್ಡುವಾರು ಕ್ಷೇತ್ರ ಪುನರ್ ವಿಂಗಡಣೆಯನ್ನು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಬಿಬಿಎಂಪಿ ಚುನಾವಣೆಯ ದಿನಾಂಕ ಪ್ರಕಟವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡ ಮತ್ತು ಭಗ್ನಾವಶೇಷ ವಿಲೇವಾರಿ ನಿಯಮ ಮೀರಿದರೆ ಕಠಿಣ ಕ್ರಮ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.