ETV Bharat / state

ಬೆಂಗಳೂರು: ಮರ್ಮಾಂಗದಲ್ಲಿಟ್ಟು ಕೋಟ್ಯಂತರ ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ವಿದೇಶಿ ಮಹಿಳೆ ವಶಕ್ಕೆ

author img

By ETV Bharat Karnataka Team

Published : Sep 13, 2023, 11:22 AM IST

Updated : Sep 13, 2023, 12:38 PM IST

ಮಹಿಳಾ ಪ್ರಯಾಣಿಕರೊಬ್ಬರು ಮರ್ಮಾಂಗದಲ್ಲಿ ಅಡಗಿಸಿಟ್ಟು ಕೋಟ್ಯಂತರ ರೂ. ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದರು. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪ್ರಕರಣವನ್ನು ಪತ್ತೆ ಹಚ್ಚಿದ್ದಾರೆ.

Illegally transported drugs worth crores of rupees seized
ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ: ಅಕ್ರಮವಾಗಿ ಮರ್ಮಾಂಗದಲ್ಲಿ ಅಡಗಿಸಿಟ್ಟು ಸಾಗಿಸುತ್ತಿದ್ದ ಕೋಟ್ಯಂತರ ರೂ. ಡ್ರಗ್ಸ್ ವಶಕ್ಕೆ
ಬೆಂಗಳೂರು: ಮರ್ಮಾಂಗದಲ್ಲಿಟ್ಟು ಕೋಟ್ಯಂತರ ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ವಿದೇಶಿ ಮಹಿಳೆ ವಶಕ್ಕೆ

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಮಾರ್ಮಾಂಗದಲ್ಲಿ ಅಡಗಿಸಿಟ್ಟು ಸಾಗಾಟ ಮಾಡುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಆರೋಪಿ ವಿದೇಶಿ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ.

ವಿದೇಶದಿಂದ ಕೆಂಪೇಗೌಡ ಏರ್ಪೋಟ್​ಗೆ ಬಂದ ಮಹಿಳೆಯನ್ನು ತೀವ್ರವಾಗಿ ತಪಾಸಣೆ ಮಾಡಿದಾಗ ಮಾರ್ಮಾಂಗದಲ್ಲಿ ಡ್ರಗ್ಸ್ ಕ್ಯಾಪ್ಸುಲ್ ಪತ್ತೆಯಾಗಿದೆ. ಆರೋಪಿ ಮಹಿಳೆ ಕೀನ್ಯಾ ದೇಶದವರು. ಈಕೆಯಿಂದ 1 ಕೆಜಿ 144 ಗ್ರಾಂ ತೂಕದ ಕೊಕೇನ್ ಜಪ್ತಿ ಮಾಡಲಾಗಿದೆ.

ಆರೋಪಿ ಅಥಿಸ್ ಅಬಬಾದಿಂದ ಬೆಂಗಳೂರಿಗೆ ಎಥಿಫಿಯನ್ ಏರ್​ಲೈನ್ಸ್​ ಮೂಲಕ ಬಂದಿದ್ದರು. ಖಚಿತ ಮಾಹಿತಿ ಮೇರೆಗೆ ತಡೆದು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಕ್ಯಾಪ್ಸೂಲ್​ನಲ್ಲಿ ಡ್ರಗ್ಸ್ ತುಂಬಿ, ಮರ್ಮಾಂಗದಲ್ಲಿ ಇಟ್ಟುಕೊಂಡು ಪ್ಲಾನ್ ಮಾಡಿದ ಮಹಿಳೆ ಸಿಕ್ಕಿಬಿದ್ದಿದ್ದಾಳೆ. ಎಲ್ಲಾ ಕ್ಯಾಪ್ಸೂಲ್ಸ್ ಹೊರತೆಗೆದು ಪರಿಶೀಲಿಸಿದಾಗ ಒಂದು ಕೆಜಿಗೂ ಅಧಿಕ ಡ್ರಗ್ಸ್ ಸಿಕ್ಕಿದೆ. ಕ್ಯಾಪ್ಸೂಲ್‌ಸಮೇತ ಮಹಿಳೆಯನ್ನು ಕಸ್ಟಮ್ಸ್ ಅಧಿಕಾರಿಗಳು ಎನ್​ಸಿಬಿ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ. ಎನ್​ಸಿಬಿ ಅಧಿಕಾರಿಗಳು ತನಿಖೆಗೆ ತೀವ್ರಗೊಳಿಸಿದ್ದಾರೆ.

ಮಂಗಳೂರು ಏರ್​ಪೋರ್ಟ್​ನಲ್ಲಿ ಚಿನ್ನ ಜಪ್ತಿ, ಪ್ರಯಾಣಿಕ ವಶಕ್ಕೆ: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಅಧಿಕ ಪ್ರಮಾಣದ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ಜಪ್ತಿ ಘಟನೆ ಇತ್ತೀಚೆಗೆ ನಡೆದಿದೆ. ಆರೋಪಿ ಪ್ರಯಾಣಿಕ ದುಬೈನಿಂದ ಮಂಗಳೂರಿಗೆ ಏರ್ ಇಂಡಿಯಾ ವಿಮಾನದಲ್ಲಿ ಬಂದಿಳಿದಿದ್ದರು. ರಟ್ಟಿನ ಪೆಟ್ಟಿಗೆಯ ಒಳಭಾಗದಲ್ಲಿ ಇರಿಸಲಾಗಿದ್ದ ನಾಲ್ಕು ನೀಲಿ ಬಣ್ಣದ ದಪ್ಪದ ಕಾಗದದ ಹಾಳೆಗಳ ಎರಡು ಪದರಗಳ ಮಧ್ಯೆ ಚಿನ್ನದ ಪೌಡರ್ ಅಡಗಿಸಿಡಲಾಗಿತ್ತು. ಕಸ್ಟಮ್ಸ್ ಅಧಿಕಾರಿಗಳು ಅಕ್ರಮ ಪತ್ತೆ ಮಾಡಿ, ಬಚ್ಚಿಟ್ಟ 242 ಗ್ರಾಂ ಚಿನ್ನದ ಪುಡಿಯನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ. ಇದರ ಮೌಲ್ಯ 14.50 ಲಕ್ಷ ರೂ. ಎಂದು ಅಂದಾಜು ಮಾಡಲಾಗಿದೆ. ಅಧಿಕಾರಿಗಳು ಪ್ರಯಾಣಿಕನನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಮಂಗಳೂರು ಏರ್​ಪೋರ್ಟ್​ನಲ್ಲಿ ₹14 ಲಕ್ಷದ ಚಿನ್ನ ಜಪ್ತಿ, ಪ್ರಯಾಣಿಕ ವಶಕ್ಕೆ

Last Updated : Sep 13, 2023, 12:38 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.